ಬೆಂಗಳೂರು: ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ಕೊರೊನಾ ಸೋಂಕಿತ ಆತ್ಮಹತ್ಯೆ
ಬೆಂಗಳೂರು, ಏಪ್ರಿಲ್ 24: ಕೊರೊನಾ ಸೋಂಕಿತರೊಬ್ಬರು ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಳೆದ ರಾತ್ರಿ ವ್ಯಕ್ತಿ ಇದ್ದಕ್ಕಿದ್ದಂತೆಯೇ ಆಸ್ಪತ್ರೆಯ ಫ್ಯಾನ್‌ಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆಂದು ವರದಿಗಳು ತಿಳಿಸಿವೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಕೆಲ ದಿನಗಳ ಹಿಂದಷ್ಟೇ ವಿಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ ಬೆಂಗಳೂರುನಲ್ಲಿ 124 ಮಂದಿ ಸೇರಿ ರಾಜ್ಯದಲ್ಲಿ ಬರೋಬ್ಬರಿ 190 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14 ಸಾವಿರ ಗಡಿ ದಾಟಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 26,962 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 12,74,959ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 16,662 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,15,581ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 124 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications