ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ಕೊರೊನಾ ಸೋಂಕಿತ ಆತ್ಮಹತ್ಯೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 24: ಕೊರೊನಾ ಸೋಂಕಿತರೊಬ್ಬರು ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕಳೆದ ರಾತ್ರಿ ವ್ಯಕ್ತಿ ಇದ್ದಕ್ಕಿದ್ದಂತೆಯೇ ಆಸ್ಪತ್ರೆಯ ಫ್ಯಾನ್‌ಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆಂದು ವರದಿಗಳು ತಿಳಿಸಿವೆ.

ಕೋವಿಡ್ 19: ರಾಜ್ಯದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ ಎಂದ ಯಡಿಯೂರಪ್ಪ ಕೋವಿಡ್ 19: ರಾಜ್ಯದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ ಎಂದ ಯಡಿಯೂರಪ್ಪ

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಕೆಲ ದಿನಗಳ ಹಿಂದಷ್ಟೇ ವಿಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ ಬೆಂಗಳೂರುನಲ್ಲಿ 124 ಮಂದಿ ಸೇರಿ ರಾಜ್ಯದಲ್ಲಿ ಬರೋಬ್ಬರಿ 190 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14 ಸಾವಿರ ಗಡಿ ದಾಟಿದೆ.

Bengaluru: A 61-Year-Old COVID19 Patient Died Allegedly By Suicide At Hospital

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 26,962 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 12,74,959ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 16,662 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,15,581ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 124 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

Recommended Video

Punjab ವಿರುದ್ಧ ಸೋತರು ಭರ್ಜರಿ ದಾಖಲೆ ಬರೆದ ರೋಹಿತ್ ಶರ್ಮಾ | Oneindia Kannada

English summary
Bengaluru: A 61-year-old COVID19 patient died allegedly by suicide by hanging himself from a ceiling fan at Vijaaynagar Hospital last night; body to be shifted to Victoria hospital, say police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X