Siddaramaiah Government: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿಸಲು ಸಂಚು?

ಕಾಂಗ್ರೆಸ್ ಕರ್ನಾಟಕದಲ್ಲಿ 130ಕ್ಕೂ ಹೆಚ್ಚು ಸ್ಥಾನ ಪಡೆದು ಸರ್ಕಾರ ರಚನೆ ಮಾಡಿದೆ. ಹೀಗೆ ಅತಿಹೆಚ್ಚು ಬಹುಮತ ಹೊಂದಿದ ಕಾರಣಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿಸಲು ಯಾರಿಂದಲೂ ಸಾಧ್ಯ ಇಲ್ಲ ಎಂಬ ಮಾತು ಕೇಳಿಬಂದಿತ್ತು. ಆದರೆ ಇದೀಗ ಬೇರೆಯದ್ದೇ ಚರ್ಚೆ ಶುರುವಾಗಿದೆ. ಅದರಲ್ಲೂ ಸ್ವಂತ ಕಾಂಗ್ರೆಸ್ ಪಕ್ಷದ ಶಾಸಕರಿಂದಲೇ ಕರ್ನಾಟಕ ಸರ್ಕಾರಕ್ಕೆ ಅಪಾಯ ಇದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆಲ್ಲಾ ಕಾರಣ ಏನು ಗೊತ್ತಾ? ಬನ್ನಿ ತಿಳಿಯೋಣ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಬೇಕು ಎಂಬ ಡಿಮ್ಯಾಂಡ್ ಶುರುವಾಗಿ, ಡಿಸಿಎಂ ಡಿ.ಕೆ. ಶಿವಕುಮಾರ್ ಬಣ & ಸಿಎಂ ಸಿದ್ದರಾಮಯ್ಯ ಬಣದ ನಡುವೆ ತಿಕ್ಕಾಟವೂ ಶುರುವಾಗಿದೆ ಎಂಬ ಆರೋಪ ಕೇಳಿರುತ್ತಿದೆ. ಹೀಗಿದ್ದಾಗ ಕಾಂಗ್ರೆಸ್ ಕೇಂದ್ರ ನಾಯಕರು ಹೊಸ ಅಸ್ತ್ರ ರೆಡಿ ಮಾಡಿದ್ದು ಒಂದು ಕಡೆ ಸಿದ್ದರಾಮಯ್ಯ ಅವರಿಗೂ ಆಘಾತ ನೀಡಿ, ಇನ್ನೊಂದು ಕಡೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೂ ಶಾಕ್ ಕೊಟ್ಟು ಸಿಎಂ ಸ್ಥಾನವನ್ನು ರಾಜ್ಯದ ಹಿರಿಯ ದಲಿತ ನಾಯಕನ ನೀಡಲು ಸಜ್ಜಾಗಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಇದೇ ಕಾರಣಕ್ಕೆ ಇದೀಗ ಕಾಂಗ್ರೆಸ್ ಸರ್ಕಾರಕ್ಕೆ ಅಪಾಯ ಎದುರಾಗಿದೆ ಎನ್ನಲಾಗುತ್ತಿದ್ದು, ಕಾರಣ ಏನು ಗೊತ್ತಾ? ಮುಂದೆ ಓದಿ.

A Big Discussion Going On About Karnataka Congress Government Now

ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಪಟ್ಟ?

ಕರ್ನಾಟಕ ಕಾಂಗ್ರೆಸ್ ನಾಯಕರ ನಡುವೆ ನಡೆಯುತ್ತಿರುವ ತಿಕ್ಕಾಟ ಇದೀಗ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಭಾರಿ ದೊಡ್ಡ ತಲೆನೋವು ತರಿಸಿದೆ ಎಂಬ ಆರೋಪ ಕೇಳಿಬಂದಿದೆ. ಈ ಆರೋಪದ ನಡುವೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉರುಳುವ ಬಗ್ಗೆ ಕೂಡ ಮಾತುಕತೆ ನಡೆಯುತ್ತಿದೆ. ಅದರಲ್ಲೂ ಸ್ವಲ್ಪ ಎಡವಟ್ಟು ನಡೆದರೂ ಕಾಂಗ್ರೆಸ್ ಸರ್ಕಾರ ಬೀಳಿಸಿ ತಮ್ಮ ಸರ್ಕಾರ ರಚನೆ ಮಾಡಲು ವಿರೋಧ ಪಕ್ಷಗಳ ನಾಯಕರು ಕಾಯುತ್ತಿದ್ದಾರೆ.

ಸಿದ್ದರಾಮಯ್ಯ ಕೆಳಗೆ ಇಳಿದರೆ...

ವಿಪಕ್ಷಗಳು ತಂತ್ರ ಹೆಣೆಯುತ್ತಿವೆ ಎಂಬ ಆರೋಪಗಳ ನಡುವೆ, ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎಂಬ ಮಾತು ಕೇಳಿಬಂದಿದೆ. ಆದರೆ ಇದೇ ಮಾತು ಈಗ ಕರ್ನಾಟಕದ ರಾಜಕೀಯದಲ್ಲಿ ಸಂಚಲನ ಸೃಷ್ಟಿ ಮಾಡಿದ್ದು, ಅಕಸ್ಮಾತ್ ಸಿಎಂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಪಟ್ಟದಿಂದ ಕೆಳಗೆ ಇಳಿಸಿದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಕುಸಿದು ಬೀಳುವ ಸಾಧ್ಯತೆ ಇದೆ. ಕಾಂಗ್ರೆಸ್‌ನ ಶಾಸಕರೇ ಪಕ್ಷಕ್ಕೆ ರಾಜೀನಾಮೆ ನೀಡಿ ಹೋಗುವ ಸಾಧ್ಯತೆ ಇದೆ ಎಂಬ ವದಂತಿ ಹಬ್ಬುತ್ತಿದೆ. ಹೀಗಾಗಿ ಕರ್ನಾಟಕ ಕಾಂಗ್ರೆಸ್ ನಾಯಕರು ಕೂಡ ಈಗ ಅಲರ್ಟ್ ಆಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+