ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಮತ್ತೆ ಕಾಮುಕರ ಅಟ್ಟಹಾಸ, ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

By Manjunatha
|
Google Oneindia Kannada News

ಬೆಂಗಳೂರು, ಮಾರ್ಚ್ 19: ಬೆಂಗಳೂರಲ್ಲಿ ಮತ್ತೆ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. 21 ವಯಸ್ಸಿನ ವಿದ್ಯಾರ್ಥಿನಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಮಾಡಿ ಪರಾರಿ ಆಗಿದ್ದಾರೆ.

ನಿನ್ನೆ (ಮಾರ್ಚ್‌ 18) ರಾತ್ರಿ ಬೆಳ್ಳಂದೂರಿನ ಸರ್ಜಾಪುರ ರಸ್ತೆಯಲ್ಲಿ ಕಾಲೇಜು ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿದ ನಾಲ್ವರು ಯುವಕರು, ಆಕೆಯನ್ನು ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ ಮಾಡಿ ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ 20 ವರ್ಷದ ಯುವತಿ ಮೇಲೆ ಅತ್ಯಾಚಾರ, ಕೊಲೆದೊಡ್ಡಬಳ್ಳಾಪುರದಲ್ಲಿ 20 ವರ್ಷದ ಯುವತಿ ಮೇಲೆ ಅತ್ಯಾಚಾರ, ಕೊಲೆ

ಇಂದು (ಮಾರ್ಚ್‌ 19) ಬೆಳಿಗ್ಗೆ ಅರೆ ಪ್ರಜ್ಞಾವಸ್ತೆಯಲ್ಲಿ ನೀಲಗಿರಿ ತೋಪಿನಲ್ಲಿ ಅಸ್ತವ್ಯಸ್ಥವಾಗಿ ಬಿದ್ದಿದ್ದ ಯುವತಿಯನ್ನು ನೋಡಿದ ಸ್ಥಳೀಯರು ಕೂಡಲೇ ಬೆಳ್ಳಂದೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವತಿಯನ್ನು ಸೇಂಟ್ ಜಾನ್ಸ್‌ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ.

A college student gang raped in Bengaluru yesterday

ಯುವತಿಯ ತಾಯಿ ಬೆಳ್ಳಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಳ ಹುಡುಕಾಟ ನಡೆಸುತ್ತಿದ್ದಾರೆ.

English summary
A young girl has been gangraped by 4 goons in Bengaluru on 18th March. A 21 year old young girl was allegedly kidnapped by 4 men yesterday near Sarjapur road. They took her to lonely place and gang raped. Bellandur Police are in search of culprits.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X