ಫೇಸ್ಬುಕ್ ಸ್ನೇಹಿತನಿಂದ ದೋಖಾ, ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಬೆಂಗಳೂರು, ಜೂನ್ 20: ಹೇಗೋ ಅಲ್ಲಿ ಇಲ್ಲಿ ಕೆಲಸ ಮಾಡಿಕೊಂಡು ಹೊಟ್ಟೆ ಪಾಡು ನೋಡಿಕೊಂಡು ಅಷ್ಟೋ ಇಷ್ಟೋ ಹಣ ಉಳಿಸಿ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದ ಮಹಿಳೆ ಫೇಸ್ಬುಕ್ ಸ್ನೇಹಿತನಿಂದಾಗಿ ಸಾಯುವ ಹಂತಕ್ಕೆ ತಲುಪಿದ್ದಳು.
ಫೇಸ್ಬುಕ್ ಮೂಲಕ ಪರಿಚಯವಾದ ಕೆ ಸುಬೀನ್ಸ್ ಸ್ವಲ್ಪ ದಿನಗಳು ಕಳೆದ ಬಳಿಕ ತಾನು ಲಂಡನ್ನಲ್ಲಿ ಇದ್ದೇನೆ, ಇಲ್ಲಿಂದ 27 ಲಕ್ಷ ಹಾಗೂ ದುಬಾರಿ ಗಿಫ್ಟ್ನ್ನು ನಿನಗೆ ಕಳುಹಿಸಿಕೊಡುತ್ತೇನೆ ಎಂದು ಮಹಿಳೆಯಿಂದ 2.5 ಲಕ್ಷ ರೂ ಪಡೆದು ವಂಚನೆ ಮಾಡಿದ್ದಾನೆ.
ಆಕೆ ಅದನ್ನು ಹೌದು ಎಂದು ನಂಬಿ ಮೋಸ ಹೋಗಿದ್ದಾಳೆ, ಮೊದಲು ಒಂದು ಲಕ್ಷ ರೂ ಬಳಿಕ ಒಂದು ಲಕ್ಷ ಮತ್ತೆ 50 ಸಾವಿರ ರೂ ಪಡೆದುಕೊಂಡಿದ್ದ.ಅಷ್ಟೂ ಹಣ ನೀಡದ ಮೇಲೆ ಆಕೆಗೆ ಅನುಮಾನ ಬಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಬಳಿಕ ಜೀವನದಲ್ಲಿ ಕೂಡಿಟ್ಟಿದ್ದ ಎಲ್ಲಾ ಹಣವೂ ಹೋಯಿತು ಎನ್ನುವ ದುಃಖಕ್ಕೆ ಆತ್ಮಹತ್ಯೆಗೂ ಯತ್ನಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

7ನೇ ತರಗತಿ ವ್ಯಾಸಂಗ ಮಾಡಿರುವ ಮಹಿಳೆ, ಮನೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಫೇಸ್ಬುಕ್ನಲ್ಲಿ ಪರಿಚಯವಾದ ವಂಚಕನ ಮಾತಿಗೆ ಮರುಳಾಗಿ ಸಾಲ ಮಾಡಿ ವಂಚಕನ ಬ್ಯಾಂಕ್ ಖಾತೆಗೆ 2.50 ಲಕ್ಷ ರೂ. ಜಮೆ ಮಾಡಿದ್ದರು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ












Click it and Unblock the Notifications