• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತೇ ಹೊಡೆದಾಟ?

|

ಬೆಂಗಳೂರು, ಅಕ್ಟೋಬರ್ 14: ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಿತ್ತಾಟ ಅತಿರೇಕಕ್ಕೆ ಹೋಗಿದೆ. ಬಿಜೆಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಿಎಂ ಯಡಿಯೂರಪ್ಪ ಬೆಂಬಲಿಗ ಕಾರ್ಯಕರ್ತನಿಗೆ ಹಲ್ಲೆ ಮಾಡಿ ಕೊರಳ ಪಟ್ಟಿ ಹಿಡಿದು ಕಚೇರಿಯಿಂದ ಹೊರಹಾಕಿ ಧಮಕಿ ಆರೋಪ ಕೇಳಿ ಬಂದಿದ್ದು ಬಿಜೆಪಿ ಕಚೇರಿಯಲ್ಲಿ ಯಡಿಯೂರಪ್ಪ ಬೆಂಬಲಿಗರಾಗಿದ್ದ 9 ಸಿಬ್ಬಂದಿಗೆ ಗೇಟ್ ಪಾಸ್ ನೀಡಲಾಗಿದೆ.

   Sonia Gandhi Helps Siddaramaiah Secure Leader of Opposition In Karnataka Assembly |Oneindia Kannada

   ನಂಜುಂಡಸ್ವಾಮಿಯವರ ಮೇಲೆ ಹಲ್ಲೆ ನಡೆಸಿ, ಕಪಾಳಮೋಕ್ಷ ಮಾಡಿ ಅವರ ಕೊರಳಪಟ್ಟಿ ಹಿಡಿದು ಬಿಜೆಪಿ ಕಚೇರಿಯಿಂದ ಹೊರಹಾಕಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದ್ದು, ಇದರ ಸಂಬಂಧ ಒಟ್ಟು9 ಮಂದಿ ಕಾರ್ಯಕರ್ತರಿಗೆ ಗೇಟ್ ಪಾಸ್ ನೀಡಲಾಗಿದೆ.

   ಕಳೆದ ವಾರ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದಿರುವ ಘಟನೆ ಇದಾಗಿದೆ. ರಾಜ್ಯ ಬಿಜೆಪಿ ಪ್ರಮುಖ ನಾಯಕರ ಉಪಸ್ಥಿತಿಯಲ್ಲೇ ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಪ್ರೋಟೋಕಾಲ್ ನೋಡಿಕೊಳ್ಳುತ್ತಿದ್ದ ಸಿಬ್ಬಂದಿಗೆ ಹಲ್ಲೆ ಆರೋಪ ಮಾಡಲಾಗಿದೆ.

   ಅಡುಗೆ ಭಟ್ಟ, ಕಂಪ್ಯೂಟರ್ ಆಪರೇಟರ್, ಫೋಟೋಗ್ರಾಫರ್, ವೀಡಿಯೋಗ್ರಾಫರ್, ಸೂಪರ್ ವೈಸರ್, ರಿಸೆಪ್ಷನಿಸ್ಟ್ ಸೇರಿದಂತೆ ಯಡಿಯೂರಪ್ಪ ಬೆಂಬಲಿಗರಿಗೆ ಗೇಟ್ ಪಾಸ್ , ಸಿಎಂ ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರಗೆ ಬೆಂಬಲಿಗರು ದೂರು ನೀಡಿದ್ದಾರೆ. ವಿಜಯೇಂದ್ರ ಎಲ್ಲಾ ವ್ಯವಸ್ಥೆ‌ ಮಾಡುವುದಾಗಿ ಭರವಸೆ ನೀಡಿದ್ದಾರೆ ಎನ್ನು ಮಾಹಿತಿ ಲಭ್ಯವಾಗಿದೆ.

   English summary
   The contention of the state BJP office has gone rampant. Information has been received that an activist working in the BJP office has been assaulted.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X