Bengaluru: ರಸ್ತೆಯಲ್ಲಿಯೇ ಬೆಂಗಳೂರು ಟ್ರಾಫಿಕ್ ಪೊಲೀಸ್ ಕೈ ಕಚ್ಚಿದ ಯುವಕ!

ಬೆಂಗಳೂರು, ಫೆಬ್ರವರಿ.12: ರಾಜ್ಯ ರಾಜಧಾನಿಯಲ್ಲಿ ಸಂಚಾರಿ ನಿಯಮ ಪಾಲಿಸಬೇಕು ಎಂದು ಪೊಲೀಸರು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆ ಕೂಡ ಹಲವು ನಿಯಮಗಳನ್ನು ಮಾಡಿದೆ. ರಸ್ತೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳು, ಎಐ ಕ್ಯಾಮೆರಾಗಳು ಕಾರ್ಯ ನಿರ್ವಹಿಸುತ್ತಿವೆ. ಆದರೂ ಕೂಡ ಟ್ರಾಫಿಕ್ ನಿಯಮ ಉಲ್ಲಂಘನೆ ಕಡಿಮೆಯಾಗುತ್ತಿಲ್ಲ.

ಹೀಗಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ತಾವೇ ರಸ್ತೆಗಿಳಿಯುತ್ತಿದ್ದಾರೆ. ಸಾವಿರಾರು ರೂಪಾಯಿ ದಮಡಕ್ಕೂ ಹೆದರದ ಜನ, ಪೊಲೀಸರಿಗೂ ಹೆದರುತ್ತಿಲ್ಲ. ಹೆಲ್ಮೆಟ್ ಇಲ್ಲದೆ ರಸ್ತೆಗಿಳಿಯುತ್ತಿದ್ದಾರೆ. ಅವರನ್ನು ಹಿಡಿದರೇ ಪೊಲೀಸರ ಮೇಲೆಯೇ ಹಲ್ಲೆಗಳಾಗುತ್ತಿವೆ. ಇಂತಹದ್ದೆ ಘಟನೆ ಸೋಮವಾರ ವರದಿಯಾಗಿದೆ.

A Man Assaulted and bit Bengaluru traffic Police Constables In Public

ಪೊಲೀಸ್ ಕಾನ್‌ಸ್ಟೆಬಲ್‌ ಕೈ ಕಚ್ಚಿದ ವ್ಯಕ್ತಿ!

ಸಾರ್ವಜನಿಕ ಸ್ಥಳದಲ್ಲಿಯೇ ವ್ಯಕ್ತಿಯೊಬ್ಬ ಪೊಲೀಸ್ ಕಾನ್‌ಸ್ಟೆಬಲ್‌ ಒಬ್ಬರ ಮೇಲೆ ಹಲ್ಲೆ ನಡೆಸಿ, ಅವರ ಕೈ ಕಚ್ಚಿದ್ದಾರೆ. ವಿಲ್ಸನ್ ಗಾರ್ಡನ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ವರದಿಯಾಗಿದೆ. ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ತಡೆ ಹಿಡಿದಿದ್ದಾರೆ. ಈ ವೇಳೆ ಹೆಲ್ಮೆಟ್ ಇಲ್ಲದ ಫೋಟೋ ಅಪ್‌ಲೋಡ್ ಮಾಡುವುದಾಗಿ ಹೇಳಿದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋಗೆ ಬೆಂಗಳೂರು ಸಂಚಾರಿ ಪೊಲೀಸರು ಕೂಡ ಅಧಿಕೃತವಾಗಿ ಸ್ಪಷ್ಟನೆ ನೀಡಿದ್ದಾರೆ. "ವಿಲ್ಸನ್ ಗಾರ್ಡನ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಹೆಲ್ಮೆಟ್ ರಚಿತ ಚಾಲನೆ ಉಲ್ಲಂಘನೆಗಾಗಿ ಆತನನ್ನು ನಿಲ್ಲಿಸಿದಾಗ, ಕಾನ್‌ಸ್ಟೆಬಲ್‌ ಒಬ್ಬರ ಮೇಲೆ ಹಲ್ಲೆ ನಡೆಸಿ ಕಚ್ಚಿರುತ್ತಾರೆ. ಎಫ್‌ಟಿವಿಆರ್ (ಟ್ರಾಫಿಕ್ ಕಾನ್‌ಸ್ಟೆಬಲ್ ಬಳಸುವ ಮೊಬೈಲ್ ಫೋನ್) ಬಳಸಿ ಪ್ರಕರಣವನ್ನು ಬುಕ್ ಮಾಡಲಾಗುತ್ತಿದೆ ಎಂದಿದೆ.

A Man Assaulted and bit Bengaluru traffic Police Constables In Public

ಸಂಚಾರಿ ನಿಯಮ ಉಲ್ಲಂಘಿಸಿದ ವ್ಯಕ್ತಿ ಮೊಬೈಲ್ ಫೋನ್ ಕಸಿದುಕೊಂಡಿದ್ದಾನೆ. ಟ್ರಾಫಿಕ್ ಕಾನ್‌ಸ್ಟೆಬಲ್‌ ಒಬ್ಬರ ಮೇಲೆ ಹಲ್ಲೆ ನಡೆಸಿ ಕಚ್ಚಿದ್ದಾರೆ. ಉಲ್ಲಂಘಿಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+