ಬೆಂಗಳೂರಲ್ಲಿ ಮೇಲ್ಸೇತುವೆಯಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ವ್ಯಕ್ತಿ ಸಾವು

ಬೆಂಗಳೂರು, ಮಾರ್ಚ್ 05: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರೂಪದ ಘಟನೆಯೊಂದು ಬೆಳಕಿಗೆ ಬಂದಿದೆ. ಮೇಲ್ಸೇತುವೆಯಿಂದ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ವ್ಯಕ್ತಿಯೊಬ್ಬ ಬಿದ್ದ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಹೌದು, ನಗರದ ಹೃದಯ ಭಾಗದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ಈತ ವಿಂಡ್ಸರ್‌ ಮ್ಯಾನರ್ ಬ್ರಿಡ್ಜ್‌ ಮೇಲಿನಿಂದ ಕೆಳಗೆ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದಾರೆ. ಪರಿಣಾಮ ಕಾರಿ ಗ್ಲಾಜು ಪುಡಿ ಪುಡಿಯಾಗಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ.

A Man Died After Falling Down on Car top From Windsor Manor Bridge at Bengaluru

ಈ ವಿಂಡ್ಸರ್ ಮ್ಯಾನರ್ ಬ್ರೀಡ್ಜ್ ರೈಲ್ವೆ ಮೇಲ್ಸೇತುವೆಯಾಗಿದೆ. ಈ ಮೃತ ವ್ಯಕ್ತಿಯು ಹೊರಡುವ ರೈಲ್ವೆಯಿಂದ ಆಯತಪ್ಪಿ ಕೆಳಗೆ ಬಿದ್ದನಾ? ಅಥವಾ ಆತ್ಮಹತ್ಯೆಗೆ ಯತ್ನಿಸಿ ಮೇಲಿಂದ ಜಿಗಿದನಾ? ಎಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವ್ಯಕ್ತಿ ಚಲಿಸುತ್ತಿದ್ದ ಕಾರಿನ ಮೇಲೆ ಬೀಳಲು ಕಾರಣವೇನು? ಎಂಬುದು ಸ್ಪಷ್ಟವಾಗಿಲ್ಲ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿ ಜನರು ಗುಂಪುಗೂಡಿದ್ದಾರೆ. ಸುದ್ದಿ ತಿಳಿದ ಹೌಗ್ರೌಂಡ್ಸ್‌ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕೂಡಲೇ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದರು ಸಹ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ನಡೆದಿದೆ.

ಈ ವ್ಯಕ್ತಿ ರೈಲಿನಲ್ಲಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಚಳಿಸುತ್ತಿದ್ದ ರೈಲಿನಿಂದ ರಸ್ತೆಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+