ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನ 19ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು!

ಬೆಂಗಳೂರು ಏಪ್ರಿಲ್ 8: ಪ್ರತಿಷ್ಠಿತ ಹೋಟೆಲ್‌ನ 19ನೇ ಮಹಡಿಯಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಾದವನಗರದಲ್ಲಿರುವ ಪ್ರತಿಷ್ಠಿತ ಹೋಟೆಲ್‌ನ 19ನೇ ಮಹಡಿಯಿಂದ ವ್ಯಕ್ತಿ ಬಿದ್ದು ಉಸಿರು ಚೆಲ್ಲಿದ್ದಾರೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಕಂಡು ಬಂದಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಆದರೆ ವ್ಯಕ್ತಿಯ ಗುರುತು ಮಾತ್ರ ಇನ್ನೂ ಪತ್ತೆಯಾಗಿಲ್ಲ.

A man died after falling from the 19th floor of a prestigious hotel in Bengaluru

ವ್ಯಕ್ತಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರಾ? ಹೋಟೆಲ್ ಅಲ್ಲೇ ಇರುವ ವ್ಯಕ್ತಿನಾ? ಅಥವಾ ಆತ್ಮಹತ್ಯೆ ಮಾಡಿಕೊಳ್ಳಲೆಂದು ಹೋಟೆಲ್‌ಗೆ ಬಂದಿದ್ದರಾ? ಎಂದು ಈ ಎಲ್ಲಾ ಕೋನಗಳಿಂದ ಪೊಲೀಸರು ತನಿಖೆ ನಡೆಸಿದ್ದಾರೆ. ಮಾತ್ರವಲ್ಲದೆ ವ್ಯಕ್ತಿಗೂ ಹಾಗೂ ಹೋಟೆಲ್‌ಗೂ ಸಂಬಂಧ ಇದಿಯಾ ಎನ್ನುವ ಬಗ್ಗೆಯೂ ವಿಚಾರಣೆ ಮಾಡಲಾಗುತ್ತಿದೆ.

ತಕ್ಷಣದಲ್ಲಿ ಪೊಲೀಸರಿಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣ ದಾಖಲಿಸಿಕೊಂಡ ಮಾದವನಗರ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+