ಕಾಂಗ್ರೆಸ್ ಪ್ರಚಾರ ವೇಳೆ ನಟಿ ಖುಷ್ಬೂ ಜತೆ ಶಾಂತಿನಗರದಲ್ಲಿ ಯುವಕನ ಅಸಭ್ಯ ವರ್ತನೆ
ಬೆಂಗಳೂರು, ಏಪ್ರಿಲ್ 10: ಚಿತ್ರ ನಟಿ ಖುಷ್ಬೂ ಅವರು ಬುಧವಾರ ಚುನಾವಣೆ ಪ್ರಚಾರ ನಡೆಸುವ ವೇಳೆ ಯುವಕನೊಬ್ಬ ಅನುಚಿತವಾಗಿ ನಡೆದುಕೊಂಡಿದ್ದು, ಆ ವೇಳೆ ಅವರು ಆತನ ವಿರುದ್ಧ ಅಕ್ರೋಶಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಶಾಂತಿನಗರದ ವ್ಯಾಪ್ತಿಯ ಹೊಯ್ಸಳ ನಗರದಲ್ಲಿ ಕಾಂಗ್ರೆಸ್ ಪರ ಪ್ರಚಾರ ಕೈಗೊಂಡಿದ್ದಾಗ ಹೀಗಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರವಾಗಿ ಬುಧವಾರ ನಟಿ ಖುಷ್ಬೂ ಅವರು ಪ್ರಚಾರ ಕೈಗೊಂಡಿದ್ದರು. ಭಾರೀ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಸಾರ್ವಜನಿಕರು, ಪೊಲೀಸರು ಹೀಗೆ ಅಪಾರ ಪ್ರಮಾಣದಲ್ಲಿ ಜನರು ಇದ್ದ ಸಮಯದಲ್ಲೇ ಹೀಗೆ ನಡೆದಿದೆ.
ವಾಹನ ಹತ್ತಲು ತೆರಳುತ್ತಿದ್ದ ಖುಷ್ಬೂ ಅವರ ಜತೆಗೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮುಜುಗರ ಆಗುವಂತೆ ನಡೆದುಕೊಂಡಿದ್ದಾನೆ. ಅತನ ವರ್ತನೆಯಿಂದ ಸಿಟ್ಟಾದ ಖುಷ್ಬೂ ಅವರು, ಸರಿಯಾಗಿ ಬಾರಿಸಲು ಮುಂದಾಗಿದ್ದಾರೆ. ಹೀಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಿಲ್ಲ. ಅದರೆ ಖುಷ್ಬೂ ಅವರು ಸಿಟ್ಟಾಗಿರುವ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.

ಚಿತ್ರ ನಟಿಯರಿಗೆ ಇಂಥ ಕೆಟ್ಟ ಅನುಭವಗಳು ಆಗಿರುವ ಬಗ್ಗೆ ಹಲವು ಬಾರಿ ಮಾಧ್ಯಮಗಳಲ್ಲಿ ವರದಿ ಆಗಿದೆ. ಆದ್ದರಿಂದ ನಟಿಯರು ಪ್ರಚಾರಕ್ಕೆ ಬಂದ ವೇಳೆ ಅಥವಾ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಹೆಚ್ಚಿನ ಭದ್ರತೆ ಒದಗಿಸುವುದು ಅತ್ಯಗತ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದರ ಜತೆಗೆ ಮಹಿಳೆಯರ ಜತೆಗೆ ಅಶ್ಲೀಲವಾಗಿ ನಡೆದುಕೊಳ್ಳುವ ಮನಸ್ಥಿತಿಯೇ ಬದಲಾಗಬೇಕಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications