ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ತಪಾಸಣೆಗೆ ತೆರಳಿದ್ದ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ

|
Google Oneindia Kannada News

ಬೆಂಗಳೂರು ಏಪ್ರಿಲ್ 2: ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆಗೆ ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ.

ಥಣಿಸಂದ್ರ ಮುಖ್ಯ ರಸ್ತೆ ಸಾರಾಯಿಪಾಳ್ಯದ ಸಾದಿಕ್ ಕಾಲೊನಿಯಲ್ಲಿ ವ್ಯಕ್ತಿಯೊಬ್ಬನಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದರಿಂದ ವೈದ್ಯಕೀಯ ಸಿಬ್ಬಂದಿ ಆರೋಗ್ಯ ತಪಾಸಣೆಗೆ ತೆರಳಿದ್ದರು. ಈ ವೇಳೆ ಕೆಲವರು ಆಶಾ ಕಾರ್ಯಕರ್ತೆಯರ ಜೊತೆ ವಾಗ್ವಾದ ನಡೆಸಿದ್ದಾರೆ. ಹಲ್ಲೆ ಕೂಡ ಮಾಡಿದ್ದಾರೆ ಎಂದು ಆಶಾ ಕಾರ್ಯಕರ್ತೆಯರು ದೂರಿದ್ದಾರೆ.

ಕೊರೊನಾಗೆ ಬಲಿ: 5 ಸಾವಿರ ಗಡಿ ದಾಟಿದ ಅಮೆರಿಕಾ ಸಾವಿನ ಸಂಖ್ಯೆಕೊರೊನಾಗೆ ಬಲಿ: 5 ಸಾವಿರ ಗಡಿ ದಾಟಿದ ಅಮೆರಿಕಾ ಸಾವಿನ ಸಂಖ್ಯೆ

ವಾಗ್ವಾದ ನಡೆದ ಸಂದರ್ಭದಲ್ಲಿ ಕೆಲವರು ಮೈಕ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ಕೊಡಬಾರದು, ಪೋನ್ ನಂಬರ್ ಕೊಡಬಾರದು ಎಂದು ಬೆದರಿಕೆ ಹಾಕಿ, ಕಾಗದಗಳನ್ನು ಹರಿದು ಹಾಕಿದ್ದಾರೆ ಎಂದು ಕೃಷ್ಣವೇಣಿ ಎನ್ನುವ ಆಶಾ ಕಾರ್ಯಕರ್ತೆಯರು ದೂರಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

A Mass Attack On Asha Health Workers In Bengaluru

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಸ್ಥಳಕ್ಕೆ ನಮ್ಮ ಪೊಲೀಸರು ಹೋಗಿ ಮಾಹಿತಿ ಪಡೆದುಕೊಂಡಿದ್ದಾರೆ. ಆಶಾ ಕಾರ್ಯಕರ್ತೆಯರು ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

English summary
A Mass Attack On Asha Health Workers In Bengaluru. while asha health workers check up for coronavirus in thanisandra bengaluru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X