Get Updates
Get notified of breaking news, exclusive insights, and must-see stories!

ಬೆಂಗಳೂರಿನ ರಸ್ತೆ ಗುಂಡಿ ಮಚ್ಚಲು ಹೊಸ ಡೆಡ್ ಲೈನ್‌!

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರಿನಲ್ಲಿ ವಿಪತ್ತು ನಿರ್ವಹಣೆ ಅಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಆಡಳಿತಗಾರರಾದ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ವಿವಿಧ ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯ ಆಡಳಿತಗಾರರ ಕಚೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ವಿಪತ್ತು ನಿರ್ವಹಣೆ ಅಡಿ ಯಾವ್ಯಾವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂಬುದನ್ನು ಪಟ್ಟಿ ಮಾಡಿಕೊಂಡು, ಆ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪುರ್ಣಗೊಳಿಸಬೇಕು. ಈ ಸಂಬಂಧ ಯೋಜನಾ ವಿಭಾಗದ ವಿಶೇಷ ಆಯುಕ್ತರಿಗೆ ಕಾಲ-ಕಾಲಕ್ಕೆ ಪರಿಶೀಲನಾ ಸಭೆ ನಡೆಸಲು ಸೂಚನೆ ನೀಡಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 860 ಕಿ.ಮೀ ಉದ್ದದ ಬೃಹತ್ ರಾಜಕಾಲುವೆ ಇದೆ. ಈ ಪೈಕಿ 173 ಕಿ.ಮೀ ಉದ್ದದ ಕಚ್ಚಾ ಡ್ರೈನ್ ಗೆ ಆರ್.ಸಿ.ಸಿ ಗೋಡೆ ನಿರ್ಮಿಸುವ ಕಾಮಗಾರಿಯನ್ನು ಕೈಗೆತ್ತಿಕೊಂಡು ತ್ವರಿತವಾಗಿ ಪಕ್ಕಾ ಡ್ರೈನ್ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

A new dead line to cover road potholes in Bengaluru

ವಲಯ ಆಯುಕ್ತರು ಪ್ರಮಾಣಿಕರಿಸಿ ವರದಿ ಸಲ್ಲಿಸಿ: ನಗರದಲ್ಲಿ ಗುರುತಿಸಿರುವ 209 ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಬಂಧಿಸಿದಂತೆ, ಆಯಾ ವಲಯಗಳಲ್ಲಿ ಬರುವ ಪ್ರವಾಹ ಪೀಡಿತ ಪ್ರದೇಶಗಳನ್ನು ಅಧಿಕಾರಿಗಳಿಂದ ಪರಿಶೀಲಿಸಿ, ಶಾಶ್ವತ ಪರಿಹಾರ ಸಿಕ್ಕಿರುವ ಪ್ರವಾಹ ಪೀಡಿತ ಪ್ರದೇಶಗಳಿಗೆ ವಲಯ ಆಯುಕ್ತರು ಪ್ರಮಾಣಿಕರಿಸಿ ವರದಿ ನೀಡಬೇಕು. ಸಮಸ್ಯೆ ಬಗೆಹರಿಸಬೇಕಿರುವ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಪಂಪ್ ಗಳ ವ್ಯವಸ್ಥೆ ಮಾಡುವುದರ ಜೊತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಿ: ನಗರದ ಪ್ರಮುಖ ರಸ್ತೆಗಳಲ್ಲಿ 137 ಕಡೆ ನೀರು ನಿಲ್ಲುವ ಸ್ಥಳಗಳನ್ನು ಸಂಚಾರಿ ಪೊಲೀಸ್ ವಿಭಾಗವು ಗುರುತಿಸಿ, ಪಾಲಿಕೆಗೆ ಪಟ್ಟಿಯನ್ನು ನೀಡಿದೆ. ಅದರಂತೆ 137 ಸ್ಥಳಗಳಲ್ಲಿ ಸಮಸ್ಯೆ ಬಗೆಹರಿಸಿರುವ ಕುರಿತ ಪಟ್ಟಿಯನ್ನು ಸಂಚಾರಿ ಪೊಲೀಸ್ ಇಲಾಖೆಗೆ ನೀಡಿ ಅವರಿಗೆ ಮರು ಪರಿಶೀಲನೆ ಮಾಡಿ ಸಮಸ್ಯೆ ಬಗೆಹರಿಸಲಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಲು ಸೂಚಿಸಿದರು.

A new dead line to cover road potholes in Bengaluru

ಗಾಳಿ ಮಳೆಗೆ ಬೀಳುವ ಮರ/ರೆಂಬೆ-ಕೊಂಬೆಗಳನ್ನು ಕೂಡಲೇ ತೆರವುಗೊಳಿಸಿ: ನಗರದಲ್ಲಿ ಮಳೆ, ವೇಳೆ ಗಾಳಿಯಿಂದಾಗಿ ಮರಗಳು, ರೆಂಬೆ/ಕೊಂಬೆಗಳು ಧರೆಗುರುಳಲಿರುವುದರಿಂದ ಸಂಚಾರ ದಟ್ಟಣೆ ಆಗುವುದರ ಜೊತೆಗೆ ನಾಗರಿಕರಿಗೆ ಅಪಘಾತಗಳು ಸಂಭವಿಸಿ ಸಾಕಷ್ಟು ಸಮಸ್ಯೆಗಳಾಗಲಿವೆ. ಈ ಪೈಕಿ ಮಲೆಗಾಲದಲ್ಲಿ ಮರಗಳನ್ನು ತೆರವುಗೊಳಿಸುವ ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಸಂಚಾರ ದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಧರೆಗುರುಳುವ ಮರ, ರೆಂಬೆ/ಕೊಂಬೆಗಳನ್ನು ಕೂಡಲೇ ತೆರವುಗೊಳಿಸಲು ಸೂಚಿಸಿದರು.

ರಸ್ತೆ ಗುಂಡಿಗಳನ್ನು ಮುಚ್ಚಿರುವುದನ್ನು ಅನಿರೀಕ್ಷಿತ ಪರಿಶೀಲನೆ: ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಎಲ್ಲಾ ವಲಯಗಳಲ್ಲೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿರುವ ಗುಂಡಿಗಳನ್ನು ಶೀಘ್ರಗತಿಯಲ್ಲಿ ಮುಚ್ಚಬೇಕು. ರಸ್ತೆ ಗುಂಡಿಗಳನ್ನು ಮುಚ್ಚಿದ ನಂತರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮಾತನಾಡಿ, ನಗರದ 8 ವಲಯಗಳಲ್ಲಿಯೂ ಸರಿಯಾದ ಮೈಕ್ರೋ ಫ್ಲಾನ್ ಮಾಡಿಕೊಂಡು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ರಸ್ತೆ ಬದಿಯ ಪಾದಚಾರಿ ಮಾರ್ಗಗಗಳಲ್ಲಿ ಬಹುತೇಕ ಕಡೆ ಮರದ ದಿಮ್ಮಿಗಳು, ಒಣಗಿರುವ ಕೊಂಬೆಗಳು ಹಾಗೆಯೇ ಬಿದ್ದಿದ್ದು, ಅವುಗಳನ್ನೆಲ್ಲಾ ಗುರುತಿಸಿ ತೆರವು ಕಾರ್ಯಾಚರಣೆ ನಡೆಸಬೇಕು. ಜೊತೆಗೆ ಪಾದಚಾರಿ ಮಾರ್ಗಗಳಲ್ಲಿ ನೆಟ್ಟಿರುವ ಸಸಿಗಳ ಸುತ್ತಲೂ ಗ್ರಿಲ್ ಅಳವಡಿಸಿ ಸಸಿ ಸುತ್ತಲೂ ಜೆಲ್ಲಿಕಲ್ಲು ಹಾಕಲು ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ನಗರದಲ್ಲಿ 'ಸ್ವಚ್ಛ ಬೆಂಗಳೂರು ಅಭಿಯಾನ' ದಡಿ ಎಲ್ಲಾ ಕಡೆ ಸ್ವಚ್ಛತಾ ಕಾರ್ಯವನ್ನು ಕೈಗೊಂಡು ಸ್ವಚ್ಛ ಬೆಂಗಳೂರನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕು. ಘನತ್ಯಾಜ್ಯ ತೆರವಿಗಾಗಿ ಶೀಘ್ರ ಸಹಾಯವಾಣಿ ಸಂಖ್ಯೆಯನ್ನು ನೀಡಲು ಕ್ರಮವಹಿಸಲು ಸೂಚನೆ ನೀಡಿದರು.

ಈ ವೇಳೆ ವಿಶೇಷ ಆಯುಕ್ತರುಗಳಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ನವೀನ್ ಕುಮಾರ್ ರಾಜು, ವಲಯ ಆಯುಕ್ತರುಗಳಾದ ಕರೀಗೌಡ, ಸತೀಶ್, ರಮೇಶ್, ದಿಗ್ವಿಜಯ್ ಬೋಡ್ಕೆ, ಎಲ್ಲಾ ವಲಯ ಜಂಟಿ ಆಯುಕ್ತರು, ಪ್ರಧಾನ ಅಭಿಯಂತರರು, ಎಲ್ಲಾ ಮುಖ್ಯ ಅಭಿಯಂತರರು, ಬಿ.ಎಸ್.ಡಬ್ಲ್ಯೂ.ಎಂ.ಎಲ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೌರಕಾರ್ಮಿಕರು ಯಾವುದೇ ಆಮಿಷಗಳಿಗೆ ಒಳಗಾಗಬೇಡಿ!

ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ನೇಮಕಾತಿಗೆ ಒಳಪಟ್ಟಿರುವ ಪೌರಕಾರ್ಮಿಕರ ಸಿಂಧುತ್ವ ಪ್ರಮಾಣ ಪತ್ರಕ್ಕಾಗಿ ಸಲ್ಲಿಸಬೇಕಿರುವ ಇತರೆ ಪ್ರಮಾಣ ಪತ್ರಗಳಿಗೆ ತಗಲುವ ವೆಚ್ಚವನ್ನು ಪಾಲಿಕೆಯಿಂದಲೇ ಭರಿಸಲಾಗುವುದು ಎಂದು ಬಿಬಿಎಂಪಿಯು ಹೇಳಿದೆ.

ಪಾಲಿಕೆಯ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ನೇರಪಾವತಿಯಡಿ (ಡಿಪಿಎಸ್) ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರುಗಳ ಪೈಕಿ, ರೋಸ್ಟರ್ ಅಥವಾ ಮೀಸಲಾತಿ ನಿಯಮಾವಳಿಗಳನ್ವಯ 12,692 ಪೌರಕಾರ್ಮಿಕರ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು 16ನೇ ನವೆಂಬರ್ 2024 ರಂದು ಪ್ರಚುರಪಡಿಸಲಾಗಿರುತ್ತದೆ.

ಈಗಾಗಲೇ ಸುಮಾರು 4,000 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಗಿದ್ದು, ಉಳಿದ ಪೌರಕಾರ್ಮಿಕರಿಗೆ ಅತಿ ಶೀಘ್ರದಲ್ಲೇ ನೇಮಕಾತಿ ಆದೇಶ ಪತ್ರಗಳನ್ನು ನೀಡಲು ಕ್ರಮ ವಹಿಸಲಾಗುತ್ತಿದೆ. ನೇಮಕಗೊಂಡ ಪೌರಕಾರ್ಮಿಕ ಅಭ್ಯರ್ಥಿಗಳ ಸಿಂಧುತ್ವ ಪರಿಶೀಲನೆಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ ವರದಿಯನ್ನು ಪಡೆಯಬೇಕಿದ್ದು, ಈ ಸಲುವಾಗಿ ಸೇವಾಸಿಂಧು ಪೋರ್ಟಲ್ ನಲ್ಲಿ ಈಗಾಗಲೇ ಅರ್ಜಿಗಳನ್ನು ಅಪ್ಲೋಡ್ ಮಾಡಲಾಗಿರುತ್ತದೆ. ಈ ಪೈಕಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಬಿಬಿಎಂಪಿ ವತಿಯಿಂದಲೇ ವೆಚ್ಚ ಭರಿಸಲಾಗುವುದು: ಸೇವಾ ಸಿಂಧು ಅರ್ಜಿದಾರರ ಪ್ರಮಾಣ ಪತ್ರ ಪೋರ್ಟಲ್ ನಲ್ಲಿ ಅರ್ಜಿದಾರರ ಲಾಗಿನ್ ನಿಂದ ಪ್ರಮಾಣ ಪತ್ರ-1 ಹಾಗೂ ಪ್ರಮಾಣ ಪತ್ರ-2 ಆಪ್ಲೋಡ್ ಮಾಡಬೇಕಾಗಿರುತ್ತದೆ. ಈ ಸಂಬಂಧ ಎರಡೂ ಪ್ರಮಾಣ ಪತ್ರಗಳ ಛಾಪಾ ಕಾಗದ ಹಾಗೂ ನೋಟರಿ ಸೇರಿದಂತೆ ಇನ್ನಿತರೆ ದಾಖಲಾತಿಗಳಿಗೆ ತಗಲುವ ವೆಚ್ಚವನ್ನು ನೇಮಕಾತಿ ಆದೇಶ ಪತ್ರಗಳು ನೀಡಿದವರನ್ನು ಹೊರತುಪಡಿಸಿ ಇನ್ನುಳಿದ ಪೌರಕಾರ್ಮಿಕರಿಗೆ ಪಾಲಿಕೆಯಿಂದಲೇ ಭರಿಸಲಾಗುವುದು.

ಪ್ರಮಾಣ ಪತ್ರಗಳಿಗೆ ತಗಲುವ ಮೊತ್ತವನ್ನು ಪ್ರಸಕ್ತ ಸಾಲಿನ ಆಯವ್ಯಯದ ಲೆಕ್ಕ ಶೀರ್ಷಿಕೆ ಸಂಖ್ಯೆ: 02-210999 ಇತರೆ ಸಾಮಾನ್ಯ ಮತ್ತು ವಿವಿಧ ವೆಚ್ಚಗಳಡಿ ಭರಿಸುವಂತೆ ಎಲ್ಲಾ ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

ಯಾವುದೇ ಆಮಿಷಗಳಿಗೆ ಒಳಗಾಗದಿರಿ: ಪೌರಕಾರ್ಮಿಕ ನೇಮಕಾತಿ ವಿಚಾರವಾಗಿ ಪ್ರಮಾಣ ಪತ್ರಗಳನ್ನು ಸಿದ್ಧಪಡಿಸಿ, ಅಪ್ಲೋಡ್ ಮಾಡಲು ಪಾಲಿಕೆಯ ಅಧಿಕಾರಿಗಳು ಸಹಕರಿಸಲಿದ್ದು, ಈ ಸಂಬಂಧ ನೇಮಕಗೊಂಡ ಪೌರಕಾರ್ಮಿಕರು ಯಾವುದೇ ಮಧ್ಯವರ್ತಿಗಳನ್ನು ಭೇಟಿ ಮಾಡಕೂಡದು. ಜೊತೆಗೆ ಯಾವುದೇ ಆಮಿಷಗಳಿಗೆ ಒಳಗಾಗಬಾರದೆಂದು ಪೌರಕಾರ್ಮಿಕ ಹುದ್ದೆಗೆ ಆಯ್ಕೆಯಾಗಿರುವ, ಸಿಂಧುತ್ವ ಪ್ರಮಾಣ ಪತ್ರ ಅಗತ್ಯವಿರುವವರಲ್ಲಿ ಆಡಳಿತ ವಿಭಾಗದ ವಿಶೇಷ ಆಯುಕ್ತರು ಹಾಗೂ ಪೌರಕಾರ್ಮಿಕರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ನವೀನ್ ಕುಮಾರ್ ರಾಜು ರವರು ಕೋರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+