ಡ್ರಗ್ಸ್ ಸಾಗಾಟ: ಬೆಂಗಳೂರು ಏರ್‌ಪೋಟ್‌ನಲ್ಲಿ ಪ್ರಯಾಣಿಕನ ಬಂಧನ

ಬೆಂಗಳೂರು, ನ. 20: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತುಗಳೊಂದಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಆರೋಪಿಯು ಇಥಿಯೋಪಿಯಾದ ಅಡಿಸ್ ಅಬಾಬಾದಿಂದ ಪ್ರಯಾಣಿಸುತ್ತಿದ್ದರು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಆರೋಪಿಯು 1926 ಗ್ರಾಂ ಹೆರಾಯಿನ್ ಅನ್ನು ರಟ್ಟಿನ ಪೆಟ್ಟಿಗೆಯ ಪದರಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದನು ಎಂದಿದ್ದಾರೆ.

ನಾರ್ಕೋಟಿಕ್ ಡ್ರಗ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸಸ್ ಆಕ್ಟ್ (ಎನ್‌ಡಿಪಿಎಸ್) 1985 ರ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

A Passenger Held With Drugs At KIA Bengaluru

ಬೆಂಗಳೂರು ಕಸ್ಟಮ್ಸ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ''ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ, ಕಸ್ಟಮ್ಸ್ ಅಧಿಕಾರಿಗಳು ಅಡಿಸ್ ಅಬಾಬಾದಿಂದ ಬೆಂಗಳೂರಿಗೆ ಬರುತ್ತಿದ್ದ ಡ್ರಗ್ಸ್ ಸಾಗಾಟ ತಡೆದಿದ್ದಾರೆ. ಎನ್‌ಡಿಪಿಎಸ್ ಕಾಯಿದೆ, 1985 ರ ಅಡಿಯಲ್ಲಿ ಒಟ್ಟು 1926 ಗ್ರಾಂ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಎನ್‌ಡಿಪಿಎಸ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ" ಎಂದಿದೆ.

ಈ ತಿಂಗಳ ಆರಂಭದಲ್ಲಿ, ನಗರದ ಹೆಣ್ಣೂರು ಪ್ರದೇಶದಲ್ಲಿ ಮಾದಕ ವಸ್ತು ಸಾಗಾಟದಲ್ಲಿ ತೊಡಗಿಸಿಕೊಂಡಿದ್ದ ಆರೋಪದ ಮೇಲೆ ನೈಜೀರಿಯಾದ ಡ್ರಗ್ ಮಾರಾಟಗಾರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಆರೋಪಿಗಳಿಂದ 230 ಗ್ರಾಂ ಎಂಡಿಎಂಎ ಹರಳು ಸೇರಿದಂತೆ 20 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದರು.

A Passenger Held With Drugs At KIA Bengaluru

ರಾಜ್ಯದಲ್ಲಿ ಡ್ರಗ್ಸ್ ಬಳಕೆಯನ್ನು ಸಂಪೂರ್ಣವಾಗಿ ತಡೆಯಲು ಪೊಲೀಸರು 'ಆಪರೇಷನ್ ನಾರ್ಕೋಸ್' ಘೋಷಿಸಿದ್ದಾರೆ. ರಾಜ್ಯದಲ್ಲಿ ಮಾದಕ ದ್ರವ್ಯ ಸಾಗಾಟಗಾರರನ್ನು ಹಿಡಿಯಲು ಆಪರೇಷನ್ ನಾರ್ಕೋಸ್ ಅಂಗವಾಗಿ ವಿಶೇಷ ಕಾರ್ಯಾಚರಣೆಯನ್ನೂ ನಡೆಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+