ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಏಕಾಂಗಿ ಕಾರು ಚಾಲಕನಿಗೆ ಮಾಸ್ಕ್ ಅಗತ್ಯವಿಲ್ಲ: ಬಿಬಿಎಂಪಿ

|
Google Oneindia Kannada News

ಬೆಂಗಳೂರು, ನವೆಂಬರ್.02: ಸಿಲಿಕಾನ್ ಸಿಟಿಯಲ್ಲಿ ಕಾರುಗಳಲ್ಲಿ ಜನರು ಒಬ್ಬರೇ ಇರುವಾಗ, ಕಾರಿನ ಗ್ಲಾಸ್ ಮುಚ್ಚಿದ ಸ್ಥಿತಿಯಲ್ಲಿ ಇರುವಾಗಲೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದಿದ್ದ ಬೆಂಗಳೂರು ಮಹಾನಗರ ಪಾಲಿಕೆ ತನ್ನ ತಪ್ಪನ್ನು ತಿದ್ದಿಕೊಂಡಿದೆ.

ನಗರದಲ್ಲಿ ಇನ್ನು ಮುಂದೆ ಕಾರುಗಳಲ್ಲಿ ಒಬ್ಬರೇ ಪ್ರಯಾಣಿಸುವ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದು ಬಿಬಿಎಂಪಿ ಪರಿಷ್ಕೃತ ಆದೇಶವನ್ನು ಹೊರಡಿಸಿದೆ. ಆದರೆ ಬೈಕ್ ಗಳಲ್ಲಿ ಒಬ್ಬರೇ ಪ್ರಯಾಣಿಕರು ಸಂಚರಿಸುವಾಗ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಕಾರಿನಲ್ಲಿ ಒಬ್ಬರೇ ಇದ್ದರೂ ಮಾಸ್ಕ್ ಕಡ್ಡಾಯ: ಆರೋಗ್ಯ ಇಲಾಖೆಗೆ ಬಿಬಿಎಂಪಿ ಪತ್ರ ಕಾರಿನಲ್ಲಿ ಒಬ್ಬರೇ ಇದ್ದರೂ ಮಾಸ್ಕ್ ಕಡ್ಡಾಯ: ಆರೋಗ್ಯ ಇಲಾಖೆಗೆ ಬಿಬಿಎಂಪಿ ಪತ್ರ

ಈ ಮೊದಲು ಕಾರುಗಳಲ್ಲಿ ಸಂಚರಿಸುವ ಪ್ರಯಾಣಿಕರು ಒಬ್ಬರೇ ಇದ್ದಾಗಲೂ ಕೂಡಾ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿತ್ತು. ಬಿಬಿಎಂಪಿ ಆದೇಶಕ್ಕೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಒಬ್ಬರೇ ಇದ್ದಾಗ ಮಾಸ್ಕ್ ಧರಿಸುವ ಅಗತ್ಯವಾದರೂ ಏನಿದೆ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದ್ದವು.

A Person Driving Alone In Car No Need To Wear Mask: BBMP


ತಪ್ಪು ತಿದ್ದಿಕೊಂಡ ಬಿಬಿಎಂಪಿ:

ಬೆಂಗಳೂರು ನಗರದಲ್ಲಿ ಕಾರುಗಳ ಸಂಖ್ಯೆಯೇ ಹೆಚ್ಚಾಗಿದೆ. ಕಾರುಗಳಲ್ಲಿ ಕುಟುಂಬ ಸಮೇತರಾಗಿ ಪ್ರಯಾಣಿಸುವವರಿಗಿಂತ ಕಚೇರಿ ಕೆಲಸಗಳಿಗಾಗಿ ಒಬ್ಬೊಬ್ಬರೇ ಕಾರುಗಳಲ್ಲಿ ಸಂಚರಿಸುವವರ ಸಂಖ್ಯೆಯೇ ಹೆಚ್ಚಾಗಿದೆ. ಇಂಥ ಸಂದರ್ಭದಲ್ಲಿ ಒಬ್ಬರೇ ಇದ್ದಾಗಲೂ ಏಕೆ ಮಾಸ್ಕ್ ಧರಿಸಬೇಕು ಎನ್ನುವ ಬಗ್ಗೆ ಸಾರ್ವಜನಿಕರು ಪ್ರಶ್ನೆ ಎತ್ತಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬಿಬಿಎಂಪಿ ತನ್ನ ಹಿಂದಿನ ಆದೇಶವನ್ನು ಪರಿಷ್ಕರಿಸಿದೆ. ಬೈಕ್ ಸವಾರರಿಗೆ ಮಾತ್ರ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ತಗ್ಗಿದ ಕೊರೊನಾವೈರಸ್ ಸಂಖ್ಯೆ:

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 2576 ಕೊರೊನಾವೈರಸ್ ಸೋಂಕಿತರು ಪತ್ತೆಯಾಗಿದ್ದು, ರಾಜ್ಯದಲ್ಲಿ ದಿನೇ ದಿನೆ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ. ಒಂದೇ ದಿನ 8334 ಮಂದಿ ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 773595 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 29 ಮಂದಿ ಕಳೆದ ಒಂದು ದಿನದಲ್ಲಿ ಮಹಾಮಾರಿಯಿಂದ ಮೃತಪಟ್ಟಿದ್ದಾರೆ. ಇದುವರೆಗೆ 11221 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 829640ರಷ್ಟಿದ್ದು, ಈ ಪೈಕಿ 44805 ಸಕ್ರಿಯ ಪ್ರಕರಣಗಳಿವೆ.

English summary
A Person Driving Alone In Car No Need To Wear Mask: BBMP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X