ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ವಿಪಕ್ಷ ನಾಯಕ ಸ್ಥಾನ ಕಾಂಗ್ರೆಸ್‌ಗೆ: ಜೆಡಿಎಸ್‌ಗೆ ಹಿನ್ನಡೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 22: ಬೆಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷದ ಸ್ಥಾನ ಕಾಂಗ್ರೆಸ್‌ಗೆ ಸಿಕ್ಕಿರುವುದು ಜೆಡಿಎಸ್‌ಗೆ ತೀವ್ರ ಹಿನ್ನಡೆಯಾದಂತಾಗಿದೆ.

ಬೆಂಗಳೂರು ಮಹಾನಗರ ಪಾಲಿಕೆ-33 ಮನೋರಾಯನಪಾಳ್ಯ ವಾರ್ಡಿನ ಕಾಂಗ್ರೆಸ್ ಪಕ್ಷದ ಸದಸ್ಯರಾದ ಅಬ್ದುಲ್ ವಾಜಿದ್‌ನ್ನು ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದೆ.

ಬಿಬಿಎಂಪಿ ನೂತನ ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆನಾಲ್ಕು ವರ್ಷವೂ ಕೂಡ ಬಿಬಿಎಂಪಿಯಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಕಾಯ್ದುಕೊಂಡು ಬಂದಿತ್ತು.

ಬಿಬಿಎಂಪಿಯಲ್ಲಿ ಅತಿ ಹೆಚ್ಚು ಕಾರ್ಪೊರೇಟರ್‌ಗಳನ್ನು ಹೊಂದಿದ್ದರೂ ಕಳೆದ ನಾಲ್ಕು ವರ್ಷಗಳಿಂದ ಅಧಿಕಾರ ಹಿಡಿಯಲು ಬಿಜೆಪಿ ವಿಫಲವಾಗಿತ್ತು.

ಬಿಜೆಪಿಯು ಬಿಬಿಎಂಪಿ ಚುನಾವಣೆಯಲ್ಲಿ ಒಂದೆರೆಡು ಮತಗಳಿಂದ ಸೋಲುಕಾಣುತ್ತಿತ್ತು. ಹಾಗೆಯೇ ಬಿಬಿಎಂಪಿ ಚುನಾವಣೆಯಲ್ಲೂ ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು.

ಇದೀಗ ಈ ಬಾರಿ ಬಿಜೆಪಿಗೆ ಮೇಯರ್ ಸ್ಥಾನ ಒಲಿದಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರು ಯಾರಾಗಬೇಕು ಎನ್ನುವ ಕುತೂಹಲವಿತ್ತು. ಇದೀಗ ಜೆಡಿಎಸ್‌ನ್ನು ಹಿಂದಿಕ್ಕಿ ವಿರೋಧಪಕ್ಷ ನಾಯಕ ಸ್ಥಾನವನ್ನು ಕಾಂಗ್ರೆಸ್ ಅಲಂಕರಿಸಿದೆ.

ಸಾಕಷ್ಟು ಗೊಂದಲಗಳ ನಡುವೆ ಬಿಬಿಎಂಪಿ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಎಂ. ಗೌತಮ್ ಕುಮಾರ್ ಜೈನ್ ಆಯ್ಕೆಯಾಗಿದ್ದರು.ಚುನಾವಣೆ ಖಚಿತವಾದರೂ ಬಿಜೆಪಿ ಪಕ್ಷದೊಳಗಿನ ಭಿನ್ನಮತ ಮಾತ್ರ ಹಾಗೆಯೇ ಮುಂದುವರೆದಿತ್ತು. ಇದಕ್ಕೆ ಸಿಎಂ ಬಿಎಸ್​ವೈ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಡುವಿನ ಮುಸುಕಿನ ಗುದ್ದಾಟವೇ ಕಾರಣವಾಗಿತ್ತು.

A Setback For The JDS In BBMP

ಅಲ್ಲದೇ ಇವರು ಆರಂಭದಿಂದಲೂ ಬಿಎಸ್​ವೈ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಪಕ್ಷ ಈ ಬಾರಿ ಇವರನ್ನೇ ಮೇಯರ್ ಸ್ಥಾನದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಿದೆ ಎಂದು ಹೇಳಲಾಗುತ್ತಿತ್ತು.

ಒಟ್ಟು 249 ಮತಗಳು,ಮ್ಯಾಜಿಕ್ ನಂಬರ್ 125, ಗೌತಮ್ ವಿರುದ್ಧ 110 ಮತಗಳು, ಸತ್ಯನಾರಾಯಣ ಪರ 112 ಮತಗಳು ಬಂದಿತ್ತು.

English summary
Congress member become the BBMP Opposition leader it is Major setback to the JDS.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X