ಕಿಟಕಿ ತೆರೆದು ದಂಪತಿ ಸರಸ ಸಲ್ಲಾಪ, ಪಕ್ಕದ ಮನೆ ಮಹಿಳೆಯಿಂದ ಪೊಲೀಸ್ ಠಾಣೆಗೆ ದೂರು-ಎಲ್ಲಿ?
ಬೆಂಗಳೂರು, ಮಾರ್ಚ್ 20: ಇತ್ತೀಚಿನ ದಿನಗಳಲ್ಲಿ ಯುವಕ, ಯುವತಿಯರು ಮೈಮರೆತು ಸರಸ ಸಲ್ಲಾಪದಲ್ಲಿ ತೊಡಗುವುದು ಹೆಚ್ಚಾಗುತ್ತಿವೆ ಎನ್ನುವ ಸುದ್ದಿಗಳು ಆಗುತ್ತಲೇ ಇರುತ್ತವೆ. ಆದರೆ ಬೆಂಗಳೂರಿನ ಈ ನಗರದಲ್ಲಿ ವಿಚಿತ್ರ ಪ್ರಕರಣವೊಂದು ದಾಖಲಾಗಿದೆ. ಹಾಗಾದರೆ ಆ ಪ್ರಕರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ. ಪಕ್ಕದ ಮನೆ ದಂಪತಿಯು ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗುತ್ತಿದ್ದಾರೆ. ಇದರಿಂದ ನಮಗೆ ತುಂಬಾ ಸಮಸ್ಯೆ ಆಗುತ್ತಿದೆ ಎಂದು 44 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಮಹಿಳೆ ಆವಲಹಳ್ಳಿ, ಬಿಡಿಎ ಲೇಔಟ್‌ನಲ್ಲಿ ವಾಸ ಆಗಿದ್ದಾರೆ. ಈ ಮಹಿಳೆಯ ಮನೆಯ ಬಾಗಿಲಿನ ಪಕ್ಕದಲ್ಲೇ ಮನೆಯ ಬೆಡ್ ರೂಮ್ ಇದೆ. ಇನ್ನು ಪಕ್ಕದ ಮನೆಯಲ್ಲಿ ವಾಸ ಆಗಿರುವ ದಂಪತಿ ಬೆಡ್ ರೂಮ್ ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗುವುದನ್ನು ಇವರು ನೋಡಿದ್ದು, ಈ ದಂಪತಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ದಂಪತಿಗಳಿಬ್ಬರ ಸರಸ ಸಲ್ಲಾಪವನ್ನು ನೋಡಿದ ಪಕ್ಕದ ಮನೆ ಮಹಿಳೆಯು ಮುಜುಗರಕ್ಕೆ ಒಳಗಾಗಿದ್ದಾರೆ. ನಂತರ ಅವರೊಗೆ ಬೆಡ್ ರೂಮ್ ಕಿಟಕಿ ಹಾಕಿಕೊಳ್ಳುವಂತೆಯೂ ಮನವಿ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪಕ್ಕದ ಮನೆಯ ವ್ಯಕ್ತಿ ಅವಾಚ್ಯ ಶಬ್ದಗಳಿಂದ ಮಹಿಳೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಬೈದಿದ್ದಾನೆ.
ಅಲ್ಲದೆ ಮಹಿಳೆ ಮೇಲೆ ಅತ್ಯಾಚಾರ ಮಾಡುವುದಾಗಿ ಮತ್ತು ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಅಷ್ಟೇ ಅಲ್ಲದೆ ಪಕ್ಕದ ಮನೆಯ ಮನೆ ಮಾಲೀಕ ಚಿಕ್ಕಣ್ಣ ಮತ್ತು ಅವರ ಮಗ ಮಂಜುನಾಥ್ ಕಿಟಕಿ ಹಾಕಿಕೊಳ್ಳುವಂತೆ ಮನವಿ ಮಾಡಿದ ಮಹಿಳೆ ಕುಟುಂಬದ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ನಂತರ ಕೆಲವು ಯುವಕರನ್ನು ಕರೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಹಿಳೆ ಮತ್ತು ಆಕೆಯ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ.
ಇವರಿಂದ ಮನನೊಂದ ಮಹಿಳೆಯು ನನಗೆ ಸೂಕ್ತ ರಕ್ಷಣೆ ನೀಡಿ ಹಾಗೂ ಬೆದರಿಕೆ ಹಾಕಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ದೂರು ದಾಖಲಿಸಿದ್ದಾರೆ. ಇನ್ನು ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 504, 506, 509, 34ರಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ











Click it and Unblock the Notifications