ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿ ಪರಪ್ಪನ ಅಗ್ರಹಾರದಲ್ಲೇ ಸಾವಿಗೆ ಶರಣು

ಬೆಂಗಳೂರು, ಏಪ್ರಿಲ್‌ 14: ತನ್ನ ಇಬ್ಬರು ಮಕ್ಕಳನ್ನು ಕೊಂದು ಜೈಲು ಪಾಲಾಗಿದ್ದ ಮಹಿಳೆಯೊಬ್ಬರು ಈಗ ಜೈಲಿನಲ್ಲೇ ಸಾವಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಜಾಲಹಳ್ಳಿಯಲ್ಲಿ ತನ್ನಿಬ್ಬರು ಮಕ್ಕಳನ್ನು ಕೊಲೆ ಮಾಡಿ ಬಂಧನ ಆಗಿದ್ದ ಆರೋಪಿ ಗಂಗಾದೇವಿ ಎನ್ನುವ ಮಹಿಳೆ ಪರಪ್ಪನ ಅಗ್ರಹಾರ ಶೌಚಾಲಯದಲ್ಲಿ ತನ್ನ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

A Woman Who Was Jailed For Killing Her Children Died In Parappana Agrahara

ಗಂಗಾದೇವಿ ಜೈಲಿಗೆ ಹೋಗಿದ್ದ ದಿನ ಏಪ್ರಿಲ್​ 11 ರಂದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೈಲಿನಲ್ಲಿರುವ ಶೌಚಾಲಯಕ್ಕೆ ಹೋಗಿ ಅಲ್ಲಿ ತನ್ನ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಸದ್ಯ ಗಂಗಾದೇವಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಬಳಿಕ ಶವವನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಪ್ರಕರಣದ ಹಿನ್ನೆಲೆ ಏನು..?

ಮೃತ ಆರೋಪಿ ಗಂಗಾದೇವಿ ಏಪ್ರಿಲ್ 9ರಂದು ಮನೆಯಲ್ಲಿ ಯಾರೂ ಇಲ್ಲದಾಗ ಮಗಳು ಲಕ್ಷ್ಮೀ (9) ಹಾಗೂ ಮಗ ಗೌತಮ್​​ (7)ನನ್ನು ಉಸಿರುಗಟ್ಟಿಸಿ ಸಾಯಿಸಿದ್ದಾಳೆ. ಬಳಿಕ ಆಕೆಯೇ ಪೊಲೀಸರಿಗೆ ಕರೆ ಮಾಡಿ ಮಕ್ಕಳನ್ನು ಸಾಯಿಸಿದ್ದೇನೆ. ಇದೀಗ ತಾನು ಆತ್ಮಹತ್ಯೆ ‌ಮಾಡಿಕೊಳ್ಳುವುದಾಗಿ ಮಾಹಿತಿ ನೀಡಿದ್ದರು. ಈ ವಿಚಾರ ತಿಳಿದ ತಕ್ಷಣ ಪೊಲೀಸರು ಆರೋಪಿಯ ಮನೆಗೆ ದೌಡಾಯಿಸಿ ಆಕೆಯನ್ನು ಬಂಧಿಸಿದ್ದರು. ಮಕ್ಕಳ ಮೃತದೇಹಗಳ ಮರಣೋತ್ತರ ಪರೀಕ್ಷೆ ಹಾಗೂ ಸಂಬಂಧಿಕರಿಗೆ ಹಸ್ತಾಂತರದ ನಂತರ, ಗಂಗಾದೇವಿಯನ್ನು ವಿಚಾರಣೆ ನಡೆಸಿ ಏಪ್ರಿಲ್‌ 11ರಂದು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಮಾಡಲಾಗಿತ್ತು.

ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

ಬೆಂಗಳೂರು: ಸ್ಕೂಟರ್​ಗೆ ಅಪರಿಚಿತ ವಾಹನವೊಂದು ಯುವಕ ಸಾವನ್ನಪ್ಪಿದ ದಾರುಣ ಘಟನೆ ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಖೇಶ್ (22) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಮುಖೇಶ್ ತನ್ನ ಬೈಕ್ ನಲ್ಲಿ ನೈಸ್ ರಸ್ತೆಯ ಹೊಸಕೆರೆಹಳ್ಳಿ ಕಡೆಯಿಂದ ತೆರಳುತ್ತಿದ್ದರು. ಈ ವೇಳೆ ಅತೀ ವೇಗ ಮತ್ತು ನಿರ್ಲಕ್ಷತೆಯಿಂದ ಬಂದ ಅಪರಿಚಿತ ವಾಹನವೊಂದು ಮುಖೇಶ್​ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮುಖೇಶ್​ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ .ಘಟನಾ ಸ್ಥಳಕ್ಕೆ ಕೆಂಗೇರಿ‌ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+