ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ವಿದೇಶಿ ಮಹಿಳೆಯರ ಹೆಸರಿನಲ್ಲಿ ಆಧಾರ್ ಕಾರ್ಡ್

|
Google Oneindia Kannada News

ಬೆಂಗಳೂರು, ಏಪ್ರಿಲ್ 19 : ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ದೇಶದ ಭದ್ರತೆಗೆ ಅಪಾಯಕಾರಿಯಾಗುವ ಕೃತ್ಯ ಎಸಗಿರುವ ಸಂಗತಿ ಬೆಳಕಿಗೆ ಬಂದಿದೆ. ಹೊರ ದೇಶದಿಂದ ಕಳ್ಳ ಸಾಗಣೆ ಮೂಲಕ ಕರೆ ತಂದು ವೇಶ್ಯಾವಾಟಿಕೆ ದಂಧೆಗೆ ತಳ್ಳಿರುವ ಮಹಿಳೆಯರಿಗೆ ಸ್ಥಳೀಯ ಆಧಾರ್ ಕಾರ್ಡ್ ಸೃಷ್ಟಿಸಿರುವ ಆಘಾತಕಾರಿ ಸಂಗತಿ ಹೊರ ಬಿದ್ದಿದೆ. ಸಿಸಿಬಿ ಪೊಲೀಸರನ್ನು ಬೆಚ್ಚಿಬೀಳಿಸಿದ ಈ ಪ್ರಕರಣದ ವಿವರ ಇಲ್ಲಿದೆ ನೋಡಿ.

ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು. ಖಚಿತ ಮಾಹಿತಿ ಮೇರೆಗೆ ಎಸಿಪಿ ಎಸ್. ಎಂ. ನಾಗರಾಜ್ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್ ಅಂಜುಮಾಲ ಟಿ. ನಾಯಕ್ ಮತ್ತು ತಂಡ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದೆ. ಬಾಂಗ್ಲಾದೇಶ ಹಾಗೂ ಪಶ್ಚಿಮ ಬಂಗಾಳ ರಾಜ್ಯದ ಹೆಣ್ಣು ಮಕ್ಕಳನ್ನು ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳಿದ್ದು ಬಾಡಿಗೆ ಮನೆಯಲ್ಲಿ ದಂಧೆ ನಡೆಸುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ಬಾಂಗ್ಲಾ ಮೂಲದ ಮಹಿಳೆಯರನ್ನು ರಕ್ಷಣೆ ಮಾಡಿ ರಾಜ್ಯ ನಿಲಯಕ್ಕೆ ಒಪ್ಪಿಸಿದ್ದಾರೆ. ಈ ದಂಧೆ ನಡೆಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ ನೌಶದ್ ಆಲಿ, ರಿಯಾಜುಲ್ ಶೇಖ್, ಸಮೀರ್ ಬಂಧಿತ ಆರೋಪಿಗಳು.

ಆರೋಪಿಗಳ ಬಳಿ ಹನ್ನೊಂದು ಆಧಾರ್ ಕಾರ್ಡ್ ಸಿಕ್ಕಿದ್ದು, ಪರಿಶೀಲಿಸಿದಾಗ ಅದು ನಕಲಿ ಐಡಿ ಕಾರ್ಡ್ ಎಂಬ ಆತಂಕಕಾರಿ ಗೊತ್ತಾಗಿದೆ. ಹೊರ ದೇಶದ ಮಹಿಳೆಯರಿಗೆ ನಕಲಿ ಆಧಾರ್ ಕಾರ್ಡ್ ತಯಾರಿಸಿ ಭಾರತೀಯರು ಅಂತ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಇವರ ನಕಲಿ ದಾಖಲೆಗಳ ಸೃಷ್ಟಿ ಜಾಲ ಹಿಡಿದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Bengaluru: Aadhaar card created in the name of foreign women!

Recommended Video

ಭಾರತದಲ್ಲಿ ದಾಖಲಾಗಿರುವ ಒಟ್ಟು ಕೋವಿಡ್ ಪ್ರಕರಣ ಎಷ್ಟು ಗೊತ್ತಾ? | Oneindia Kannada

ಅಪ್ಪಿ ತಪ್ಪಿ ಭಯೋತ್ಪಾದಕರಿಗೆ ಈ ರೀತಿಯ ದಾಖಲೆಗಳನ್ನು ಸೃಷ್ಟಿಕೊಟ್ಟರೆ ಆಗುವ ಅನಾಹುತಗಳನ್ನು ಊಹೆ ಮಾಡಲಿಕ್ಕೂ ಸಾಧ್ಯವಿಲ್ಲ. ನಕಲಿ ದಾಖಲೆ ಸೃಷ್ಟಿಸಿ ಮಾಡಿಕೊಟ್ಟವರ ಮೂಲ ಪತ್ತೆಗೆ ಮುಂದಾಗಿದ್ದಾರೆ. ಈ ಪ್ರಕರಣ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.

English summary
CCB police raid on prostitution racket and seized fake Aadhar id cards which is created in the name of foreign women's know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X