Get Updates
Get notified of breaking news, exclusive insights, and must-see stories!

ಕೋವಿಡ್-19: 50 ಲಕ್ಷ ರೂಪಾಯಿ ದೇಣಿಗೆ ನೀಡಿದ ಆದಿಚುಂಚನಗಿರಿ ಮಠ

ಬೆಂಗಳೂರು, ಏಪ್ರಿಲ್ 4: ಮಾರಣಾಂತಿಕ ಕೊರೊನಾ ವೈರಸ್ ಅನ್ನು ತಡೆಗಟ್ಟಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಆದಿಚುಂಚನಗಿರಿ ಮಠದ ವತಿಯಿಂದ 50 ಲಕ್ಷ ರೂಪಾಯಿ ದೇಣಿಗೆ ನೀಡಲಾಗಿದೆ.

ಕೋವಿಡ್-19 ಹರಡದಂತೆ ತಡೆಗಟ್ಟುವ ಕಾರ್ಯದಲ್ಲಿ ಸರ್ಕಾರದೊಡನೆ ಪ್ರತಿಯೊಬ್ಬರೂ ಸಹಕರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆದಿಚುಂಚನಗಿರಿ ಮಠ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ನೀಡಲು ಸಂಕಲ್ಪಿಸಿದೆ ಎಂದು ಪ್ರಕಟನೆಯಲ್ಲಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.

ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಸರ್ಕಾರದ ಜೊತೆಗೆ ಕೈಜೋಡಿಸಿ, ಧನ ಸಹಾಯ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಕೇಳಿಕೊಂಡಿದ್ದರು.

Aadichunchanagiri Nirmalananda Swamiji Donates 50 Lakh Rupees To CM Relief Fund

ಇಲ್ಲಿಯವರೆಗೂ ಭಾರತದಲ್ಲಿ 3210 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ 128 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 11 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+