ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದಲ್ಲೂ ಮಾಸ್ಕ್ ಗಳನ್ನು ಕಡ್ಡಾಯಗೊಳಿಸಲು ಎಎಪಿ ಮನವಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 13: ಈಗಾಗಲೇ ದೇಶದ ಹಲವಾರು ರಾಜ್ಯ ಸರ್ಕಾರಗಳು ಮಾಸ್ಕ್ ಬಳಕೆಯನ್ನು ಕಡ್ಡಾಯ ಗೊಳಿಸಿದ್ದು, ಕರ್ನಾಟಕದಲ್ಲಿಯೂ ಈ ನಿಯಮ ಬರಬೇಕು ಎಂದು ಆಮ್ ಆದ್ಮಿ ಪಾರ್ಟಿ ಮನವಿ ಮಾಡಿದೆ.

ಪಶ್ಚಿಮ ಬಂಗಾಳ, ಒರಿಸ್ಸಾ, ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ಇನ್ನು ಮುಂತಾದ ರಾಜ್ಯಗಳು ಈ ಬಗ್ಗೆ ಕಾಯ್ದೆಯನ್ನು ರೂಪಿಸಿ ಕಟ್ಟುನಿಟ್ಟಿನ ಅನುಷ್ಠಾನಗೊಳಿಸುವ ಬಗ್ಗೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಆಂಧ್ರಪ್ರದೇಶ ಸರ್ಕಾರವು ತನ್ನ 5.5 ಕೋಟಿ ಜನತೆಗೆ ಉಚಿತವಾಗಿ ಮಾಸ್ಕ್ ಗಳನ್ನು ಒಬ್ಬರಿಗೆ ಮೂರು ಮಾಸ್ಕ್ ಗಳಂತೆ ಉಚಿತವಾಗಿ ವಿತರಿಸಲು ಆದೇಶವನ್ನು ಸಹ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವೂ ಸಹ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಬಳಸಬೇಕೆಂಬ ಕಾಯ್ದೆಯನ್ನು ಅತಿ ಶೀಘ್ರದಲ್ಲಿ ರೂಪಿಸಬೇಕೆಂದು ಆಮ್ ಆದ್ಮಿ ಪಕ್ಷವು ಒತ್ತಾಯಿಸಿದೆ.

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಸರ್ಕಾರ

ಈ ಕ್ರಮದಿಂದಾಗಿ ಕರೋನಾ ವೈರಸ್ ಸಮುದಾಯದಲ್ಲಿ ಹರಡುವ ಪ್ರಕ್ರಿಯೆಗೆ ಸಾಕಷ್ಟು ಕಡಿವಾಣ ಹಾಕಿದಂತಾಗುತ್ತದೆ. ಈಗಾಗಲೇ ಸಾರ್ವಜನಿಕರು ಮಾರುಕಟ್ಟೆಗಳಲ್ಲಿ, ಬೀದಿಗಳಲ್ಲಿ ಸಾಮಾಜಿಕ ಅಂತರಗಳನ್ನು ಕಾಪಾಡಿಕೊಳ್ಳದೆ ರೋಗವನ್ನು ಹರಡುತ್ತಿದ್ದಾರೆ. ಮಾಸ್ಕ್ ಬಳಕೆ ಕಡ್ಡಾಯದಿಂದ ಈ ರೋಗವನ್ನು ತಡೆಗಟ್ಟುವಲ್ಲಿ ಪ್ರಮುಖ ಹೆಜ್ಜೆಯಾಗಿರುತ್ತದೆ. ಈ ಕೂಡಲೇ ಮುಖ್ಯಮಂತ್ರಿಗಳು ಇತ್ತ ಕಡೆ ಗಮನಹರಿಸಿ ಅತಿ ಶೀಘ್ರದಲ್ಲಿ ಈ ಕಾಯ್ದೆಯನ್ನು ರೂಪಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷವು ಮನವಿ ಮಾಡಿದೆ.

Aam Aadmi Party Requested To State Government To Make Mask Compulsory Rule In Karnataka

ಇದೇ ಸಮಯದಲ್ಲಿ ಉತ್ತಮ ಗುಣಮಟ್ಟದ ಮಾಸ್ಕ್ ಗಳನ್ನು ಪೂರೈಸುವಲ್ಲಿ ಸಹ ಸರ್ಕಾರವು ಹೆಚ್ಚಿನ ಮುತುವರ್ಜಿ ವಹಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದ೦ ತಿಳಿಸಿದ್ದಾರೆ.

English summary
Aam Aadmi Party requested to state government to make mask compulsory rule in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X