ಬಿಬಿಎಂಪಿ ಚುನಾವಣೆಗೆ ತಯಾರಿ ಆರಂಭಿಸಿದ ಎಎಪಿ
ಬೆಂಗಳೂರು, ಮೇ 11 : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಹುಮತಗಳಿಸಿ ಸರ್ಕಾರ ರಚನೆ ಮಾಡಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿದೆ. ಮೂರು ತಿಂಗಳಿನಲ್ಲಿ ಚುನಾವಣೆ ಎದುರಾಗಲಿದ್ದು, ಎಎಪಿ ಸಿದ್ಧತೆ ಆರಂಭಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಎಎಪಿ ಬಹಳ ಹಿಂದೆಯೇ ಘೋಷಿಸಿತ್ತು. ಇದರ ಮೊದಲ ಹಂತವಾಗಿ ಪಕ್ಷ 'ಬೊಂಬಾಟ್ ಬೆಂಗಳೂರು' ಎಂಬ ಘೋಷಣೆಯೊಂದಿಗೆ ಮನೆ-ಮನೆಗಳ ಸಮೀಕ್ಷೆಗೆ ಚಾಲನೆ ನೀಡಿದೆ. [ಬೊಂಬಾಟ್ ಬೆಂಗಳೂರಿಗಾಗಿ ಎಎಪಿಯಿಂದ ವೆಬ್ ಸೈಟ್]

ಸಮೀಕ್ಷೆ ಹೇಗೆ : ಆಮ್ ಆದ್ಮಿ ಪಕ್ಷ 8 ಪ್ರಶ್ನೆಗಳೊಂದಿಗೆ ಮನೆ-ಮನೆ ಸಮೀಕ್ಷೆಯನ್ನು ಆರಂಭಿಸಿದೆ. ಮುಂಬರುವ ಬಿಬಿಎಂಪಿ ಚುನಾವಣೆ ಬಗ್ಗೆ ನಿಮಗೆ ಅರಿವಿದೆಯೇ? ಎಂಬುದರಿಂದ ಹಿಡಿದು ನಿಮಗೆ ಆಮ್ ಆದ್ಮಿ ಪಕ್ಷದ ಬೆಂಗಳೂರು ಪಾಲಿಕೆ ಬೇಕೆ? ಎಂಬುವ ತನಕ ಹಲವು ಪ್ರಶ್ನೆಗಳಿವೆ. [ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ : ಸುಪ್ರೀಂ]
5 ವರ್ಷಗಳಲ್ಲಿ ನಿಮ್ಮ ಪಾಲಿಕೆ ಸದಸ್ಯರನ್ನು ನೀವು ಭೇಟಿಯಾಗಿದ್ದೀರಾ?, ಬಿಬಿಎಂಪಿಯಲ್ಲಿ ಲಂಚವಿಲ್ಲದೇ ಏನಾದರೂ ಕೆಲಸವಾಗುತ್ತದೆ ಎಂದು ನಿಮಗೆ ಅನ್ನಿಸುತ್ತಿದೆಯೇ?, ದೆಹಲಿ ಚುನಾವಣೆಯಲ್ಲಿ ಎಎಪಿ ಹಣಬಲವಿಲ್ಲದೇ ಬಿಜೆಪಿ ಮತ್ತು ಕಾಂಗ್ರೆಸ್ ಅನ್ನು ಸೋಲಿಸಿರುವುದು ನಿಮಗೆ ಅರಿವಿದೆಯೇ? ಎಂಬ ಪ್ರಶ್ನೆಗಳನ್ನು ಜನರಿಗೆ ಕೇಳಲಾಗುತ್ತಿದೆ.
ಹೌದು ಅಥವ ಇಲ್ಲ ಎಂದು ಜನರು ಸಮೀಕ್ಷೆ ವೇಳೆ ಉತ್ತರ ನೀಡಬಹುದಾಗಿದೆ. ನಿಮ್ಮ ವಿಧಾನಸಭಾ ಕ್ಷೇತ್ರ, ವಾರ್ಡ್, ಮತದಾನದ ಬೂತ್ ಮಾಹಿತಿಯನ್ನು ಸಮೀಕ್ಷೆ ವೇಳೆ ಸಂಗ್ರಹಣೆ ಮಾಡಲಾಗುತ್ತದೆ. ನಿಮ್ಮ ಹೆಸರು, ವಿಳಾಸ, ಮೊಬೈಲ್ ನಂ, ಇ-ಮೇಲ್ ವಿಳಾಸವನ್ನು ನೀವು ನೀಡಬಹುದಾಗಿದೆ.

ಬಿಬಿಎಂಪಿ ಚುನಾವಣೆ ಎಂದು? : ಅಂದಹಾಗೆ ಪಾಲಿಕೆಯ ಆಡಳಿತಾವಧಿ ಏಪ್ರಿಲ್ನಲ್ಲಿ ಅಂತ್ಯಗೊಂಡಿದ್ದು, ಸರ್ಕಾರ ಪಾಲಿಕೆಯನ್ನು ವಿಸರ್ಜಿಸಿ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ. ಹಲವಾರು ದಿನಗಳ ಕಾನೂನು ಹೋರಾಟದ ಬಳಿಕ ಮೂರು ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ ಎಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮೇ 5ರಂದು ಆದೇಶ ನೀಡಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ












Click it and Unblock the Notifications