Rain: ಬೆಂಗಳೂರಲ್ಲಿ ಆಮ್ ಆದ್ಮಿ ಪಾರ್ಟಿ ವಿಚಿತ್ರ ಪ್ರತಿಭಟನೆ: ಏನ್ರಿ ಇದು ಅಂದ್ರು ಜನ
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ಸಾಧಾರಣ ಮಳೆಗೂ ಜನ ಜೀವನ ಅಸ್ತವ್ಯಸ್ತವಾಗುತ್ತಿದೆ. ಮಳೆಯಿಂದ ಬೆಂಗಳೂರಿನಲ್ಲಿ ಮತ್ತೆ ರಸ್ತೆಗುಂಡಿಗಳು ಸೃಷ್ಟಿಯಾಗಿವೆ. ಅಲ್ಲದೇ ರಸ್ತೆಗಳಲ್ಲೇ ನೀರು ನಿಲ್ಲುತ್ತಿದ್ದು, ಜನ ಪರದಾಡುವ ಪರಿಸ್ಥಿತಿ ಇದೆ. ಇದೀಗ ಆಮ್ ಆದ್ಮಿ ಪಾರ್ಟಿಯು ವಿಚಿತ್ರವಾದ ಪ್ರತಿಭಟನೆಯನ್ನು ಮಾಡಿದೆ. ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲೂ ಹಂಚಿಕೊಂಡಿದೆ. ಇದನ್ನು ನೋಡಿದ ಜನ ದಂಗಾಗಿದ್ದಾರೆ. ಏನ್ರಿ ಇದು ಅಂತಿದ್ದಾರೆ.
ಬೆಂಗಳೂರಿನಲ್ಲಿ ಸಣ್ಣ ಮಳೆಯೂ ದೊಡ್ಡ ಅನಾಹುತವನ್ನು ಸೃಷ್ಟಿಸುವುದು ಹೊಸದೇನೂ ಅಲ್ಲ. ಕಳೆದ 15 ದಿನಗಳಿಂದೆಷ್ಟೇ ಬಿಬಿಎಂಪಿಯು ಬರೋಬ್ಬರಿ 14 ಸಾವಿರ ರಸ್ತೆಗುಂಡಿಗಳನ್ನು ಮುಚ್ಚಿರುವುದಾಗಿ ಹೇಳಿತ್ತು. ಆದರೆ, ಸಣ್ಣ ಮಳೆಗೆ ಬೆಂಗಳೂರಿನಲ್ಲಿ ಮತ್ತೆ ರಸ್ತೆಗುಂಡಿಗಳು ನಿರ್ಮಾಣವಾಗಿವೆ. ಕಳೆದೊಂದು ವಾರದಿಂದ ಸುರಿದ ಮಳೆಗೆ ಮಹದೇವಪುರದ ಪ್ರಮುಖ ರಸ್ತೆಗಳು ಕೆಸರು ಗದ್ದೆಯಂತೆ ಬದಲಾಗಿವೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿಯು ಅತ್ಯಂತ ಭಿನ್ನವಾಗಿ ಪ್ರತಿಭಟನೆ ಮಾಡಿದ್ದು, ಜನರ ಗಮನವನ್ನು ಸೆಳೆದಿದೆ. ಮಹದೇವಪುರದಲ್ಲಿ ರಸ್ತೆ ಗುಂಡಿಯಲ್ಲಿ ಮಲಗಿ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಹದೇವಪುರದ ಹಲವು ರಸ್ತೆಗಳು ಮಳೆಯಿಂದ ಕೆಸರುಗದ್ದೆಯಾಗಿ ಬದಲಾಗಿವೆ.

ಮಹದೇವರಪುರದ ಪ್ರಮುಖ ರಸ್ತೆಯಲ್ಲಿ ಆಮ್ ಆದ್ಮಿ ಪಾರ್ಟಿಯ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ರಸ್ತೆ ಗುಂಡಿ ಹಾಗೂ ಕೆಸರು ಗದ್ದೆಯಲ್ಲಿ ಮಲಗಿ ನೋಡಿ ಈ ರಸ್ತೆಯ ಅವ್ಯವಸ್ತೆ. ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ತೆರಿಗೆ ಪಾವತಿಯಾಗುವ ಕ್ಷೇತ್ರಗಳಲ್ಲಿ ಮಹದೇವಪುರ ಕ್ಷೇತ್ರವೂ ಒಂದು. ಆದರೆ, ಈ ರಸ್ತೆಯ ಅವ್ಯವಸ್ತೆ ನೋಡಿ ಎಂದಿದ್ದಾರೆ. ಮಹದೇವಪುರದಲ್ಲಿ ರಸ್ತೆಗುಂಡಿಗಳು ಹೆಚ್ಚಾಗಿವೆ. ಮಳೆಯಿಂದ ಅನಾಹುತ ಸಂಭವಿಸಿದೆ. ಆದರೆ, ಮಹಾದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಪಕ್ಷದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಟೀಕಿಸಲಾಗಿದೆ.
ಸದಸ್ಯತ್ವ ಅಭಿಯಾನಕ್ಕೆ ವಿರೋಧ: ಮಹದೇವಪುರದಲ್ಲಿ ಮಳೆಯಿಂದ ಅನಾಹುತ ಸಂಭವಿಸಿದ್ದರೂ, ಶಾಸಕಿ ಮಂಜುಳಾ ಲಿಂಬಾವಳಿ ಸ್ಪಂದಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ
ಅವರು ಹೂಡಿಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಆರ್. ಡಬ್ಲ್ಯೂ. ಎ. ಕಾರ್ಯಕರ್ತರ ಸದಸ್ಯತ್ವ ಅಭಿಯಾನ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂಬಂಧ ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಅರವಿಂದ ಲಿಂಬಾವಳಿ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್, ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರೊಂದಿಗೆ ಮತಕ್ಷೇತ್ರದ ಹೂಡಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಆರ್. ಡಬ್ಲ್ಯೂ. ಎ. ಕಾರ್ಯಕರ್ತರ ಸದಸ್ಯತ್ವ ಅಭಿಯಾನದ ಕುರಿತು ನಡೆದ ಸಭೆಯಲ್ಲಿ ಭಾಗವಹಿಸಲಾಯಿತು ಎಂದಿದ್ದಾರೆ.
Mahadevapura is sinking in Rain. People are unable to travel on Road. But the MLA @MALimbavali is busy attending BJP membership meeting.
— Ashok Mruthyunjaya (@Ashokmruthyu) October 6, 2024
One simple question - Do we need her as our Constituency MLA?@AAPBangalore @aapkaprithvi @ashwinmahesh @srinualavilli@TOIBengaluru… https://t.co/4pCjCfHd1P pic.twitter.com/5li24LgR13
ಈ ಟ್ವೀಟ್ ಅನ್ನು ರೀ ಟ್ವೀಟ್ ಮಾಡಿರುವ ಆಮ್ ಆದ್ಮಿ ಪಕ್ಷದ ನಾಯಕ ಅಶೋಕ್ ಮೃತ್ಯುಂಜಯ ಅವರು, ಮಹದೇವಪುರದಲ್ಲಿ ಮಳೆ ಅವಾಂತರ ಸೃಷ್ಟಿಯಾಗಿದೆ. ಇದರಿಂದ ಜನ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗುತ್ತಿಲ್ಲ. ಶಾಸಕಿ ಮಂಜುಳಾ ಲಿಂಬಾವಳಿ ಅವರು,ಬಿಜೆಪಿ ಸದಸ್ಯತ್ವ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸರಳ ಪ್ರಶ್ನೆ - ಇವರು ನಮ್ಮ ಕ್ಷೇತ್ರದ ಶಾಸಕಿಯಾಗಿ ನಮಗೆ ಬೇಕೇ ಎಂದು ಪ್ರಶ್ನೆ ಮಾಡಿದ್ದಾರೆ.
ಕೋಟ್ಯಾಂತರ ರೂಪಾಯಿ ತೆರಿಗೆ ಕಟ್ಟಿದರೂ
ಮಹದೇವಪುರದಿಂದ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಹಾಗೂ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ತೆರಿಗೆ ಸಂಗ್ರಹವಾಗುತ್ತಿದೆ. ಆದರೆ, ಕೋಟ್ಯಾಂತರ ರೂಪಾಯಿ ತೆರಿಗೆ ಕಟ್ಟಿದ ಮೇಲೂ ನಾವು ಈ ರೀತಿಯ ಕೆಟ್ಟ ರಸ್ತೆಗಳಲ್ಲಿ ಓಡಾಡುವ ಪರಿಸ್ಥಿತಿ ಇದೆ ಎಂದು ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತ ಅಶೋಕ್ ಮೃತ್ಯುಂಜಯ ಹೇಳಿದ್ದಾರೆ. ಮಂಜುಳಾ ಅರವಿಂದ ಲಿಂಬಾವಳಿ ಅವರೇ ನೀವು ಮಹದೇವಪುರ ಕ್ಷೇತ್ರದ ಶಾಸಕರು. ಆದರೆ, ಫೋಟೋಗಳಲ್ಲಿ ಮಾತ್ರ ನೀವು ಕಾಣಿಸಿಕೊಳ್ಳುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.
-
Siddaramaiah: ಡಿಕೆ ಶಿವಕುಮಾರ್ದು ಕಾಂಗ್ರೆಸ್ಗೆ ರಾಜಿಯಿಲ್ಲದ ನಿಷ್ಠೆ: ಸಿದ್ದರಾಮಯ್ಯ, ಸಿಎಂ ಕುರ್ಚಿ ಚರ್ಚೆ -
ಬೆಂಗಳೂರಿನಂತೆ ಇಲ್ಲಿ ಟ್ರಾಫಿಕ್ ಇಲ್ಲ, ನಮ್ಮ ಹೈದರಾಬಾದ್ ಬೆಸ್ಟ್ ಎಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications