Get Updates
Get notified of breaking news, exclusive insights, and must-see stories!

ಪಂಜಾಬ್‌ನಂತೆ ಕರ್ನಾಟಕದಲ್ಲೂ ರಸ್ತೆ ಟೋಲ್ ರದ್ದಿಗೆ ಆಗ್ರಹ: ಬಿಜೆಪಿ ಮುಖಂಡನ 1300 ಕೋಟಿ ರೂ. ಅವ್ಯವಹಾರ: ಎಎಪಿ

ಬೆಂಗಳೂರು, ಏಪ್ರಿಲ್ 04: ಪಂಜಾಬ್‌ ರಾಜ್ಯದಲ್ಲಿ ಆಡಳಿತದಲ್ಲಿರುವ ಪಕ್ಷವಾದ ಆಮ್‌ ಆದ್ಮಿ ಪಾರ್ಟಿ ಇದುವರೆಗೆ ಎಂಟು ಟೋಲ್ ಪ್ಲಾಜಾಗಳನ್ನು ಮುಚ್ಚಿವೆ. ಅದರಂತೆ ಕರ್ನಾಟಕದಲ್ಲೂ ರಸ್ತೆ ಟೋಲ್ ರದ್ದುಗೊಳಿಸುವ ಮೂಲಕ ವಾಹನಸವಾರರಿಗೆ ಇದೇ ಮಾದರಿಯನ್ನು ಅನುಸರಿಸಿ ಪ್ರಯಾಣಿಕರಿಗೆ ನೆರವಾಗಬೇಕು ಎಎಪಿಯ ಕರ್ನಾಟಕ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಒತ್ತಾಯಿಸಿದರು.

ಬೆಂಗಳೂರಿನಲ್ಲಿನ ಎಎಪಿ ರಾಜ್ಯ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ರಾಜಧಾನಿ ದೆಹಲಿಯ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹಾಗೂ ಪಂಜಾಬ್‌ ಮುಖ್ಯಮಂತ್ರಿಳಾದ ಭಗವಂತ್‌ ಮಾನ್‌ ಅಲ್ಲಿನ ರಸ್ತೆ ಟೋಲ್‌ ಪ್ಲಾಜಾಗೆ ಹೋಗಿ ಪರಿಶೀಲಿಸಿದ್ದಾರೆ.

AAP demands to abolish toll in Karnataka: BJP candidate Anil Kumar 1300 crore scam exposed

ಪಿಪಿಪಿ ಮಾದರಿಯ ಅಗ್ರಿಮೆಂಟ್‌ನಲ್ಲಿ ಏನಿತ್ತು, ಎಷ್ಟು ಹಣ ಸಂಗ್ರಹವಾಗಬೇಕಿತ್ತು? ಎಷ್ಟು ಹಣ ಸಂಗ್ರಹವಾಗಿದೆ, ಯಾವು ಟೋಲ್‌ ಸ್ಥಗಿತಗೊಳಿಸಬೇಕಿತ್ತು - ಮುಂತಾದ ಮಾಹಿತಿಗಳನ್ನು ತಿಳಿದುಕೊಂಡು ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಮ್ಮ ಪಕ್ಷವು ಅಧಿಕಾರಿದಲ್ಲಿರುವ ರಾಜ್ಯಗಳಲ್ಲಿನ ಟೊಲ್ ಪ್ಲಾಜ್ ಮೇಲಿನ ಕ್ರಮ ಬಗ್ಗೆ ಅವರು ವಿವರಿಸಿದರು.

ಪಂಜಾಬ್‌ ರಾಜ್ಯದಲ್ಲಿ ಆಮ್‌ ಆದ್ಮಿ ಪಾರ್ಟಿ ಸರ್ಕಾರ ರಚನೆಯಾದಾಗಿನಿಂದ ಈವರೆಗೆ ಎಂಟು ಟೋಲ್‌ ಪ್ಲಾಜಾಗಳನ್ನು ರದ್ದು ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಕಮಿಷನ್‌ ಆಸೆಗಾಗಿ ಅವಧಿ ಮುಗಿದರೂ ಟೋಲ್‌ ಮುಂದುವರಿಸಲು ಅವಕಾಶ ಕಲ್ಪಿಸಲಾಗಿದೆ.

ತುಮಕೂರು ಟೋಲ್‌ ಪ್ಲಾಜಾ ಸೇರಿದಂತೆ ವಿವಿಧ ಟೋಲ್ ಪ್ಲಾಜಾಗಳ 20 ವರ್ಷದ ಅವಧಿ ಮುಗಿದಿದ್ದರೂ ಅವುಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಪೆಟ್ರೋಲ್‌ ಬೆಲೆ ಏರಿಕೆಯಿಂದ ಈಗಾಗಳೇ ಹೈರಾಣಾಗಿರುವ ಜನರಿಗೆ ಟೋಲ್‌ಗಳಿಂದಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

AAP demands to abolish toll in Karnataka: BJP candidate Anil Kumar 1300 crore scam exposed

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ರಾಷ್ಟ್ರೀಯ ಹೆದ್ದಾರಿಯು ದಶಪಥವಲ್ಲ. ಆರು ಪಥವೆಂದು ಎಎಪಿ ಹೇಳಿದೆ. ನಂತರ ಸರ್ಕಾರ ಕೂಡ ಇದನ್ನು ಒಪ್ಪಿಕೊಂಡಿದೆ. ಆ ಹೆದ್ದಾರಿಯನ್ನು 2 ಪಥದಿಂದ 4 ಪಥ ಮಾಡುವಾಗ ಟೋಲ್‌ ವಿಧಿಸಿರಲಿಲ್ಲ. ಅದೇ ರೀತಿ ಈಗ 4 ಪಥದಿಂದ 6 ಪಥ ಮಾಡುವುದಾಗಲೂ ಟೋಲ್‌ ವಿಧಿಸದೇ ಜನಸಾಮಾನ್ಯರಿಗೆ ನೆರವಾಗಬೇಕಿತ್ತು. ಉಚಿತವಾಗಿ ರಸ್ತೆ ನೀಡಿ ಸರ್ಕಾರ ಜಂಭದಿಂದ ಪ್ರಚಾರ ಪಡೆದಿದ್ದರೆ, ಅದಕ್ಕೊಂದು ಅರ್ಥವಿರುತ್ತಿತ್ತು. ದೆಹಲಿಯ ಆಮ್‌ ಆದ್ಮಿ ಪಾರ್ಟಿಯು ಸರ್ಕಾರಿ ಶಾಲೆಗಳಲ್ಲಿ ಈಜುಕೊಳ ತೆರೆದರೆ, ಬಿಜೆಪಿ ಸರ್ಕಾರಗಳು ತೆರೆದ ರಸ್ತೆಗಳಲ್ಲಿ ಈಜುಕೊಳಗಳು ತನ್ನಿಂದತಾನೇ ಸೃಷ್ಟಿಯಾಗಿವೆ ಎಂದು ವ್ಯಂಗ್ಯವಾಡಿದರು.

ಕೊರಟಗೆರೆ ಬಿಜೆಪಿ ಅಭ್ಯರ್ಥಿ 1,300 ಕೋಟಿ ಹಗರಣ ಬಯಲು

ಕಳೆದ 2019-20ರಲ್ಲಿ ಹಿರಿಯ ಐಎಎಸ್‌ ಅಧಿಕಾರಿ ಅನಿಲ್‌ ಕುಮಾರ್‌ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರು ಆಗಿದ್ದರು. ಈಗವರು ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಅವರು ಬಿಬಿಎಂಪಿ ಕಮಿಷನರ್‌ ಆಗಿದ್ದ ವೇಳೆ ಮೂರು ಪ್ರಮುಖ ಅಕ್ರಮಗಳು ನಡೆದಿವೆ. ಸ್ಮಾರ್ಟ್‌ ಪಾರ್ಕಿಂಗ್‌ಗೆ 31.6 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಅಷ್ಟು ಹಣ ಖರ್ಚಾಗದಿದ್ದರೂ ಹೆಚ್ಚುವರಿಯಾಗಿ 2ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಅನಿಲ್‌ ಕುಮಾರ್‌ರವರು ಗುತ್ತಿಗೆ ಸಂಸ್ಥೆಯಾದ ಬಿಲ್ಡಿಂಗ್ಸ್ ಕಂಟ್ರೋಲ್‌ ಸೊಲ್ಯೂಷನ್‌ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಇದನ್ನು ಬಿಡುಗಡೆ ಮಾಡಿಸಿದ್ದಾರೆ ಎಂದು ಬ್ರಿಜೇಶ್‌ ಕಾಳಪ್ಪ ಆಪಾದಿಸಿದ್ದಾರೆ.

AAP demands to abolish toll in Karnataka: BJP candidate Anil Kumar 1300 crore scam exposed

ಅಲ್ಲದೇ ಅನಿಲ್‌ ಕುಮಾರ್‌ ಅವಧಿಯಲ್ಲಿ ನಗರದಲ್ಲಿ ಮಳೆ ನೀರಿನ ಹೂಳು ತೆಗೆಯುವ ಕಾಮಗಾರಿಯಲ್ಲೂ ಅಕ್ರಮ ನಡೆದಿದೆ. ನಗರದ 8 ವಲಯಗಳ ಗುತ್ತಿಗೆಯನ್ನು ಮೆಸರ್ಸ್‌ ಯೋಗ ಅಂಡ್‌ ಕಂಪನಿ ಎಂಬ ಒಂದೇ ಸಂಸ್ಥೆಗೆ 36 ಕೋಟಿ ರೂ. ಮೊತ್ತಕ್ಕೆ ನೀಡಲಾಗಿದೆ. ಈ ಕಾಮಗಾರಿ ಸರಿಯಾಗಿ ನಡೆಯದ ಪರಿಣಾಮವಾಗೇ ಬೆಂಗಳೂರಲ್ಲಿ ಪ್ರವಾಸ ಸ್ಥಿತಿ ಉಂಟಾಗಿದೆ. ಅಗತ್ಯಕ್ಕಿಂತಲೂ ಅಧಿಕ ಅನುದಾನ ನೀಡುವ ಮೂಲಕ ತೆರಿಗೆ ಹಣ ಲೂಟಿ ಹೊಡೆಯಲಾಗಿದೆ ಎಂದರು.

ಕೋಟ್ಯಂತರ ರೂಪಾಯಿ ಅಕ್ರಮಗಳ ಮಾಹಿತಿ?

ಅಷ್ಟೇ ಅಲ್ಲದೇ ಕೊಳವೆ ಬಾವಿಗಳ ಕಾಮಗಾರಿಗೆಂದು ಬಿಬಿಎಂಪಿಯು 969 ಕೋಟಿ ರೂಪಾಯಿ ಬಿಡುಗಡೆ ಮಾಡಿತ್ತು. ಇಷ್ಟು ದೊಡ್ಡ ಪ್ರಮಾಣದ ಹಣವು ಹೇಗೆ ಬಳಕೆಯಾಗಿದೆ ಎಂಬ ಬಗ್ಗೆ ಸೂಕ್ತ ತನಿಖೆ ಮಾಡಬೇಕು. ಇದರಲ್ಲಿ ಒಂದೇ ಕಡೆ 49 ಕೋಟಿ ರೂ. ಖರ್ಚು ಮಾಡಿರುವುದೂ ಇದೆ.
9
ಇನ್ನು ಕೋವಿಡ್‌ ಚಿಕಿತ್ಸೆಗಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಯಲಯದಲ್ಲಿ (BIEC) ಚಿಕಿತ್ಸಾ ಕೇಂದ್ರ ತೆರೆಯಲಾಗಿತ್ತು. ಅಲ್ಲಿಗೆ ಹಾಸಿಗೆ ಮುಂತಾದವುಗಳಿಗೆ ಕೋಟ್ಯಂತರ ಹಣ ಖರ್ಚು ಮಾಡಿರುವುದರಲ್ಲಿಯೂ ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಅನಿಲ್‌ ಕುಮಾರ್‌ ಕಮಿಷನರ್‌ ಆಗಿದ್ದಾಗ ಸುಮಾರು 1300 ಕೋಟಿ ರೂ. ಮೊತ್ತದ ಅಕ್ರಮಗಳು ನಡೆದಿವೆ. ಇವೆಲ್ಲವುಗಳ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ ಎಂದು ಅವರು ತಿಳಿಸಿದರು.

ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯಾಧ್ಯಕ್ಷರಾದ ಬಿ.ಟಿ.ನಾಗಣ್ಣ ಅವರು, ಪ್ರತಿ ಲೀಟರ್‌ ಪೆಟ್ರೋಲ್‌ಗೆ 9 ರೂ. ಸೆಸ್ ವಿಧಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗಾಗಿಗೇ ಈ ಸೆಸ್‌ ಸಂಗ್ರಹಿಸಲಾಗುತ್ತಿದೆ. ಹೀಗಿರುವಾಗ ಪ್ರತ್ಯೇಕವಾಗಿ ಟೋಲ್‌ ಸಂಗ್ರಹಿಸುವ ಅವಶ್ಯಕತೆ ಏನಿದೆ? ಬೆಂಗಳೂರಿನಿಂದ ಮೈಸೂರಿಗೆ ಹೋಗಿ ಹಿಂದಿರುಗಲು ವಾಹನಸವಾರರು ಸೆಸ್‌ ಹಾಗೂ ಟೋಲ್‌ಗಾಗಿ ಒಟ್ಟು 450 ರೂಪಾಯಿ ಖರ್ಚು ಮಾಡಬೇಕಾಗಿದೆ" ಎಂದು ಅವರು ವಿವರಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+