ಕಮಿಷನ್ ದಂಧೆ: ಸಚಿವ ಶಿವರಾಜ ತಂಗಡಗಿ ರಾಜೀನಾಮೆಗೆ ಆಗ್ರಹಿಸಿ ಸಿಎಂಗೆ ಪತ್ರ
ಬೆಂಗಳೂರು, ಆಗಸ್ಟ್ 24: ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ನಿಲಯ ಪಾಲಕರ ಬಡ್ತಿ ಹೆಸರಿನಲ್ಲಿ ನಡೆಯುತ್ತಿರುವ ಅವ್ಯವಹಾರ ಕುರಿತು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಜೊತೆಗೆ ಸಚಿವ ಶಿವರಾಜ ತಂಗಡಗಿ ಅವರ ರಾಜೀನಾಮೆಗೆ ಅವರು ಒತ್ತಾಯಿಸಿದ್ದಾರೆ.
ಅಧಿಕಾರಿಗಳ ವರ್ಗಾವಣೆ, ಕಮಿಷನ್ ದಂಧೆಗೆ ಸಂಬಂಧಿಸಿದ ಸಾಕ್ಷ್ಯಾಧಾರ ಕಲೆ ಹಾಕಿ ಶಿವರಾಜ ತಂಗಡಗಿ ವಿರುದ್ಧ ಲೋಕಾಯುಕ್ತರಲ್ಲಿ ದೂರು ದಾಖಲಿಸಬೇಕು. ಈ ವಿಚಾರವಾಗಿ ಮುಖ್ಯಮಂತ್ರಿಗಳು ಖುದ್ದಾಗಿ ಮುತವರ್ಜಿ ವಹಿಸಿ ಉನ್ನತ ಮಟ್ಟದಲ್ಲಿರುವ ಮಂತ್ರಿಗಳು ಹಾಗೂ ಅಧಿಕಾರಿಗಳು ತನಿಖೆಯ ಮೇಲೆ ಪ್ರಭಾವ ಬೀರದಂತೆ ನೋಡಿಕೊಳ್ಳಬೇಕು ಎಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಆಮ್ ಆದ್ಮಿ ಪಾರ್ಟಿಯ ಪಂಜಾಬ್ ಸರ್ಕಾರದಲ್ಲಿ ಒಬ್ಬ ಮಂತ್ರಿ ಒಂದು ಪರ್ಸೆಂಟ್ (1%) ಕಮೀಷನ್ ಕೇಳಿದರು ಎಂಬ ಸುಳಿವು ಸಿಕ್ಕ ತಕ್ಷಣ ಪಂಜಾಬ್ ಮುಖ್ಯಮಂತ್ರಿ ಆ ಮಂತ್ರಿಯನ್ನು ವಜಾ ಮಾಡಿ ಜೈಲಿಗೆ ಕಳುಹಿಸಿದರು. ಇಂತಹ ಕ್ರಮ ನೀವು ಕರ್ನಾಟಕದಲ್ಲಿ ಜರುಗಿಸದೇ ಇದ್ದಲ್ಲಿ ಈ ಅಕ್ರಮದಲ್ಲಿ ನೀವೂ ಶಾಮೀಲಿದ್ದಿರಿ ಎಂದೆನಿಸುವುದು ಸಹಜ ಎಂದರು.
ಸಿಎಂಗೆ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಚಂದ್ರು
ಶಿಕ್ಷೆಯ ಕ್ರಮಗಳನ್ನು ತಾವು ತೆಗೆದುಕೊಳ್ಳದೇ ಹೋದರೆ ಕಮಿಷನ್ ಸರ್ಕಾರ ತೊಲಗಿಸಿ ಕಲೆಕ್ಷನ್ ಸರ್ಕಾರ ತಂದಿರುವ ನಿಮ್ಮ ವಿರುದ್ಧ ಆಮ್ ಆದ್ಮಿ ಪಾರ್ಟಿ ಹೋರಾಟಕ್ಕೆ ಇಳಿಯಲಿದೆ ಎಂದು ಮುಖ್ಯಮಂತ್ರಿ ಚಂದ್ರು ಅವರು ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅವರು ನಿಯಮವನ್ನು ಉಲ್ಲಂಘಿಸಿ ಮುಖ್ಯಮಂತ್ರಿಗಳ ಹಾಗು ಸಂಪುಟದ ಗಮನಕ್ಕೂ ತರದೇ ಇಲಾಖೆಯಿಂದ ಅನಧಿಕೃತವಾಗಿ ನಿಲಯ ಪಾಲಕರ ಹುದ್ದೆಗೆ 312 ಅಧಿಕಾರಿಗಳನ್ನು ಕಾನೂನು ಬಾಹಿರವಾಗಿ ಮುಂಬಡ್ತಿ ಮಾಡಿ ಆದೇಶ ಹೊರಡಿಸಿದ್ದಾರೆ.
ಇದರಿಂದ ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗದೆ. ಈ ಕಾನೂನು ಬಾಹಿರವಾಗಿ ತೆಗೆದುಕೊಂಡ ಕ್ರಮಕ್ಕೆ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರ ಸಮ್ಮತಿ ಇದೆ ಎಂದು ಶಿವರಾಜ ತಂಗಡಗಿ ಹೇಳಿದ್ದಾರೆ. ಕಾನೂನು ಬಾಹಿರವಾದ ಈ ಅವ್ಯವಹಾರಕ್ಕೆ ಕಾನೂನು ಸಚಿವರು ಒಪ್ಪಿಗೆ ಸೂಚಿಸಿರುವುದು ಯಾವ ಒತ್ತಡದಿಂದ ಎಂಬ ಅನುಮಾನ ಹುಟ್ಟಿಕೊಂಡಿದೆ ಎಂದು ತಿಳಿಸಿದರು.
ವೇತನ ಶ್ರೇಣಿಯಲ್ಲಿ ಬದಲಾವಣೆ ಇಲ್ಲ ಎಂದು ಹಣಕಾಸಿನ ವಿಚಾರವಾಗಿ ಸಬೂಬು ಕೊಡುತ್ತಿರುವ ಸಚಿವರು ಹಾಗಾದರೆ ಈ ಮುಂಬಡ್ತಿ ಯಾವ ಪುರಷಾರ್ಥಕ್ಕೆ, ಇದರಿಂದ ಲಾಭ ಯಾರಿಗೆ ಹಾಗೂ ಅದರಲ್ಲಿ ಸಚಿವರ ಪಾಲೆಷ್ಟು ಎಂಬ ಪ್ರಶ್ನೆಗೆ ಉತ್ತರ ಕೊಡುತ್ತಿಲ್ಲ. ಇಷ್ಟೆಲ್ಲಾ ಭ್ರಷ್ಟಾಚಾರ ನಡೆಯುತ್ತಿರುವಾಗ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ಆಶ್ಚರ್ಯಕರ. ಜನರು ತಾವೂ ಇದರಲ್ಲಿ ಶಾಮೀಲಿದ್ದಿರಿ ಎಂದು ಭಾವಿಸುವ ಮುಂಚೆ ಕೆಲವು ಕಠಿಣ ಕ್ರಮ ತಾವು ತೆಗೆದುಕೊಳ್ಳಲೇಬೇಕು ಎಂದು ಹೇಳಿದರು.
ಕಳ್ಳರ ವಿರುದ್ಧ ಕ್ರಮ ಕೈಗೊಳ್ಳಿ, ರಕ್ಷಣೆ ಕೊಡಿ
ಬೆಂಗಳೂರಿನ ಬಿನ್ನಿಪೇಟೆಯಲ್ಲಿ ಹಗಲು ಹೊತ್ತಿನಲ್ಲಿಯೇ ಸರಣಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಪ್ರಕರಣವನ್ನು ಸರ್ಕಾರ, ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು. ಕಳ್ಳತನ ಮಾಡುವ ದುಷ್ಕರ್ಮಿಗಳನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸಬೇಕು. ಈ ಸಂಬಂಧ ಗುರುವಾರ ಬಿನ್ನಪೇಟಿ ಸ್ಥಳಕ್ಕೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಬೇಟಿ ನೀಡಿದರು. ಸ್ಥಳಿಯರ ಅಳಲು ಕೇಳಿದರು. ಬಳಿಕ ಮಾತನಾಡಿದ ಅವರು ಕಳ್ಳತನಕ್ಕೆ ಬ್ರೇಕ್ ಹಾಕುವಂತೆ ಆಗ್ರಹಿಸಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications