ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಮಾ.4ಕ್ಕೆ ಎಎಪಿ ಪ್ರತಿಭಟನೆ
ಬೆಂಗಳೂರು, ಮಾರ್ಚ್ 4: ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ. ಈಚೆಗೆ ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 86 ರುಪಾಯಿ ಏರಿಕೆ ಮಾಡಲಾಗಿದೆ. ಕೇಂದ್ರ ಸರಕಾರದ ಈ ನಿರ್ಧಾರವನ್ನು ಖಂಡಿಸಿರುವ ಆಮ್ ಆದ್ಮಿ ಪಕ್ಷ, ಜನ ಸಾಮಾನ್ಯರ ಮೇಲೆ ಕಾಳಜಿ ಇಲ್ಲದವರು ತೆಗೆದುಕೊಂಡಿರುವ ನಿರ್ಧಾರ ಎಂದಿದೆ.
ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ, ಮಾರ್ಚ್ 4ರ ಶನಿವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಆನಂದ ರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸಲಿದೆ. ಇದರಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಪಕ್ಷದ ಮುಖಂಡರು ಮನವಿ ಮಾಡಿದ್ದಾರೆ.[ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 86 ರುಪಾಯಿ ಏರಿಕೆ]

19 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 149.50, 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ 86 ರುಪಾಯಿ ಏರಿಸಲಾಗಿತ್ತು. 14.2 ಕೆಜಿ ಅಡುಗೆ ಸಿಲಿಂಡರ್ 751 ರುಪಾಯಿ, 19 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಗೆ 1440 ರುಪಾಯಿಗೆ ಏರಿಕೆ ಆಗಿತ್ತು. ಇದು ಜನವಿರೋಧಿ ಧೋರಣೆ. ಜನಸಾಮಾನ್ಯರ ಮೇಲೆ ದೊಡ್ಡ ಮಟ್ಟದ ಹೊರೆಯಾಗುತ್ತದೆ ಎಂದು ಪಕ್ಷವು ಹೇಳಿದೆ.












Click it and Unblock the Notifications