ದೇಶದ ಕೋಟಿ ಕೋಟಿ ರೈತರಿಗೆ ತೊಂದರೆ: ಅಮೆರಿಕಾ ವ್ಯಾಪಾರ ಒಪ್ಪಂದ ವಿರುದ್ಧ ಎಎಪಿ ಪ್ರತಿಭಟನೆ: ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದದಿಂದ ಭಾರತದ ಕೋಟ್ಯಾಂತರ ಕೃಷಿಕರಿಗೆ ತೊಂದರೆ ಆಗುತ್ತದೆ. ಈ ಒಪ್ಪಂದವು ರೈತರಿಗೆ ನೀಡಿರುವ ಮರಣ ಶಾಸನವೇ ಸರಿ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಾದ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ದೂರಿದ್ದಾರೆ. ಈ ಒಪ್ಪಂದ ಹೇಗೆ ದೇಶದ ಕೃಷಿಕರಿಗೆ ತೊಂದರೆ ಆಗುತ್ತದೆ ಎಂಬುದನ್ನು ಎಎಪಿ ನಾಯಕರು ವಿವರಿಸಿದ್ದಾರೆ.
ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ವಿರುದ್ಧ ಆಮ್ ಆದ್ಮಿ ಪಕ್ಷದ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮುಖ್ಯಮಂತ್ರಿ ಚಂದ್ರು ಅವರು ಮಾತನಾಡಿ, ಭಾರತ ದೇಶವು ಪರಂಪರಾನುಗತವಾಗಿ ಕೃಷಿ ಕ್ಷೇತ್ರವನ್ನು ತನ್ನ ಆರ್ಥಿಕತೆಯ ಬೆನ್ನೆಲುಬಾಗಿ ಕಾಪಾಡಿಕೊಂಡು ಬಂದಿದೆ. ಕೋಟ್ಯಾಂತರ ಸಂಖ್ಯೆಯ ಸಣ್ಣ ಸಣ್ಣ ರೈತರುಗಳು ಇಂದಿಗೂ ಸಹ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಿದ್ದಾರೆ.

ಕೃಷಿ ಪ್ರಧಾನದ ದೇಶದಲ್ಲಿ ಅಮೆರಿಕ ದೇಶದ ಒತ್ತಡ ಹಾಗೂ ಹಿತಾಸಕ್ತಿಗೆ ಬಲಿಯಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಎರಡು ದೇಶಗಳ ನಡುವಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕವೆಂದು ಹೇಳುತ್ತಲೇ ಭಾರತೀಯ ರೈತರುಗಳಿಗೆ ಮರಣ ಶಾಸನವನ್ನೇ ಬರೆದುಬಿಟ್ಟಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ರೈತರಿಗೆ ಈ ಒಪ್ಪಂದಿಂದ ತೊಂದರೆ ಹೇಗೆ?
ಭಾರತದ 145 ಕೋಟಿ ಜನಸಂಖ್ಯೆಯಲ್ಲಿ 85 ರಿಂದ 90 ಕೋಟಿ ಜನತೆ ಕೃಷಿ ಚಟುವಟಿಕೆಗಳು ಹಾಗೂ ಕೃಷಿ ಸಂಬಂಧಿತ ಉದ್ಯೋಗಗಳಲ್ಲಿ ತೊಡಗಿಕೊಂಡಿದ್ದಾರೆ. ಇಲ್ಲಿ ರೈತರು ಯಾವುದೇ ಯಾಂತ್ರಿಕೃತ ವ್ಯವಸ್ಥೆಗಳಿಲ್ಲದೆ ಕೃಷಿ ಬದುಕಿನಲ್ಲಿ ನಿರತವಾಗಿದ್ದಾರೆ. ಇದಕ್ಕೆ ತದ್ವಿರುದ್ಧವಾಗಿ ಅಮೆರಿಕ ದೇಶವು ಸಂಪೂರ್ಣ ಯಾಂತ್ರಿಕೃತ ವ್ಯವಸ್ಥೆಗಳಿಂದ ಲಕ್ಷಾಂತರ ಎಕರೆ ಭೂಪ್ರದೇಶಗಳಲ್ಲಿ ಲಕ್ಷಾಂತರ ಬೆಳೆಗಳನ್ನು ಬೆಳೆಯುತ್ತದೆ. ಭಾರತದ ರೈತರು ಬೆಳೆಯುವ ಬೇಳೆ ಕಾಳುಗಳು, ಧಾನ್ಯಗಳು, ಕೆಂಪು ಜೋಳ, ವಿಧಳ ಧಾನ್ಯಗಳು, ಸೋಯಾ, ಹಣ್ಣು ಮತ್ತು ತರಕಾರಿಗಳು ಸೇರಿದಂತೆ ಅನೇಕ ಬೆಳೆಗಳನ್ನು ಇದುವರೆಗೂ ವಿದೇಶಗಳಿಗೆ ರಫ್ತು ಮಾಡುವ ಮೂಲಕ ಉತ್ತಮವಾದ ಬೆಲೆಗಳನ್ನು ನಿರೀಕ್ಷಿಸಬಹುದಾಗಿತ್ತು.
ಆದರೆ ಮೋದಿ ಹಾಗೂ ಟ್ರಂಪ್ ನಡುವಿನ ಈ ವ್ಯಾಪಾರ ಒಪ್ಪಂದದಲ್ಲಿ ಯಾಂತ್ರಿಕೃತ ವ್ಯವಸ್ಥೆಯಿಂದ ಬೆಳೆದಿರುವ ಅಮೆರಿಕಾ ದೇಶದ ಲಕ್ಷಾಂತರ ಕೃಷಿ ಬೆಳೆಗಳನ್ನು ಭಾರತವು ಶೂನ್ಯ ಅಥವಾ ಕಡಿಮೆ ಸುಂಕದ ರೂಪದಲ್ಲಿ ಮಾರುಕಟ್ಟೆ ಸೃಷ್ಟಿಸಲು ಹೊರಟಿದೆ. ಇದು ನಿಜಕ್ಕೂ ರೈತರು ಕಂಗಾಲಾಗುವ ಸಂಗತಿ. ಅಂದಾಜು 45 ಲಕ್ಷ ಕೋಟಿಗು ಹೆಚ್ಚಿನ ಮೊತ್ತದ ಅಮೆರಿಕಾದ ಕೃಷಿ ಬೆಳೆಗಳನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಬೇಕಿದೆ. ಆ ದೇಶಗಳ ಕೃಷಿ ಬೆಳೆಗಳು ಮಾರುಕಟ್ಟೆ ಪ್ರವೇಶಿಸಿದರೆ ನಮ್ಮ ರೈತರಿಗೆ ಹೊಡತ ಬೀಳುತ್ತದೆ.
ಭಾರತದ ಬಡ ರೈತರು ಬೆಳೆಯುತ್ತಿರುವ ಕೃಷಿ ಬೆಳೆಗಳನ್ನು ಅಮೆರಿಕ ದೇಶಕ್ಕೆ ರಫ್ತು ಮಾಡಬೇಕಿದ್ದಲ್ಲಿ 18ರಷ್ಟು ಸುಂಕ ಬೆಚ್ಚವನ್ನು ತೆರಬೇಕಿದೆ. ಇದುವೇ ಭಾರತೀಯ ರೈತರುಗಳಿಗೆ ಮೋದಿಯವರು ನೀಡುತ್ತಿರುವ ಗಲ್ಲು ಶಿಕ್ಷೆ . ಪ್ರಧಾನಿ ನರೇಂದ್ರ ಮೋದಿಯವರು ಯಾವುದೋ ಒತ್ತಡಕ್ಕೆ, ಬಾಹ್ಯ ಹಿತಾಸಕ್ತಿಗೆ ಮಣಿದು ದೇಶದ ರೈತರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಅವರು ಗುಡುಗಿದರು.
ಭಾರತೀಯ ರೈತರ ಬೆಳೆಗೆ ಬೆಲೆ ಸಿಗಲ್ಲ!
ಎಎಪಿ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ ಮಾತನಾಡಿ, "ಅಮೆರಿಕ ದೇಶವು ತನ್ನ ಯಾಂತ್ರಿಕೃತ ಕೃಷಿ ವ್ಯವಸ್ಥೆಯಿಂದ ಬೆಳೆದಿರುವ ಕೃಷಿ ಬೆಳೆಗಳು ತೀರ ಅಗ್ಗ ವಾಗಿರುತ್ತವೆ. ಇವುಗಳನ್ನು ನಮ್ಮ ಭಾರತೀಯ ಮಾರುಕಟ್ಟೆಗಳಿಗೆ ಪರಿಚಯಿಸಿದಾಗ ನಮ್ಮ ರೈತರು ಬೆಳೆದಿರುವ ಬೆಳೆಗಳಿಗೆ ಕವಡೆ ಕಾಸಿನ ಕಿಮ್ಮತ್ತು ಸಹ ಸಿಗುವುದಿಲ್ಲ. ಮಧ್ಯ ತಯಾರಿಕ ಕಾರ್ಖಾನೆಗಳಿಂದ ಬರುವ ಉಳಿದ ಉತ್ಪನ್ನಗಳನ್ನು ಇದುವರೆಗೂ ಕೋಳಿ, ಕುರಿ, ಮೇಕೆ ಹಸು ಇನ್ನಿತರ ಪ್ರಾಣಿಗಳಿಗೆ ಆಹಾರ ರೂಪದಲ್ಲಿ ನೀಡಲಾಗುತ್ತಿತ್ತು. ಇವುಗಳನ್ನು ಸಹ ಅಮೆರಿಕ ದೇಶದಿಂದ ಆಮದು ಮಾಡಿಕೊಳ್ಳುವುದರಿಂದ ನಮ್ಮ ಕೃಷಿ ವಲಯದ ಆರ್ಥಿಕತೆಗೆ ಸಂಪೂರ್ಣ ಪೆಟ್ಟು ಬೀಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿವರಿಸಿದರು.
ನಮ್ಮ ರೈತರಗಳು ಬೆಳೆಯುವ ಸೋಯಾಬೀನ್ ತೈಲದಿಂದ ಇದುವರೆಗೂ ಭಾರತೀಯ ಕಾರ್ಖಾನೆಗಳ ಉತ್ಪನ್ನಗಳಿಗೆ ಬಹುಪಾಲು ಪೂರೈಕೆ ಆಗುತ್ತಿತ್ತು. ಆದರೆ ಅಮೆರಿಕದಿಂದ ಆಮದಾಗುವ ಈ ತೈಲದಿಂದ ಬಹುದೊಡ್ಡ ಹೊಡೆತ ಬೀಳಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ.ಸತೀಶ್ ಕುಮಾರ್, ಭಾರತವು ವೈಮಾನಿಕ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ಡ್ರೋನ್ಸ್, ರೇರ್ ಅರ್ಥ್ ಮ್ಯಾಗ್ನೆಟಿಕ್, ಸೋಲಾರ್ ನಂತಹ ಅತ್ಯುತ್ತಮ ಉತ್ಪನ್ನಗಳನ್ನು ತಂತ್ರಜ್ಞಾನದ ಸಮೇತ ಆಮದು ಮಾಡಿಕೊಳ್ಳವುದನ್ನು ಬಿಟ್ಟು ಭಾರತೀಯ ರೈತರುಗಳ ಕೃಷಿ ಉತ್ಪನ್ನಗಳನ್ನು ಅಮೆರಿಕ ದೇಶದಿಂದ ಶೂನ್ಯ ಸುಂಕ ವೆಚ್ಚದಲ್ಲಿ ಭಾರತೀಯ ಮುಕ್ತ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವುದು ನಿಜಕ್ಕೂ ಭಾರತೀಯ ರೈತರುಗಳಿಗೆ ಮಾಡಿರುವ ಅನ್ಯಾಯ ಎಂದು ಕಿಡಿ ಕಾರಿದರು.
ಕಿಸಾನ್ ಮೋರ್ಚಾಗೆ ಎಎಪಿ ಸಂಪೂರ್ಣ ಬೆಂಬಲ
"ಆಮ್ ಆದ್ಮಿ ಪಕ್ಷವು ರೈತರೊಂದಿಗೆ ಸದಾ ಕಾಲ ಇದ್ದು ಸಂಯುಕ್ತ ಕಿಸಾನ್ ಮೋರ್ಚಾ ರಾಜ್ಯದಲ್ಲಿ ನಡೆಸುವ ಎಲ್ಲ ಪ್ರತಿಭಟನೆಗಳಿಗೆ ಸಂಪೂರ್ಣ ಬೆಂಬಲ ನೀಡುತ್ತದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಸಹ ಪಕ್ಷದ ಮುಖಂಡರುಗಳು ಕೇಂದ್ರ ಸರ್ಕಾರದ ಈ ನಡೆಯ ವಿರುದ್ಧ ತೀವ್ರ ಪ್ರತಿಭಟನೆ ಮಾಡಲಿದ್ದಾರೆ ಎಂದು ತಿಳಿಸಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications