ಕನ್ನಡಪರ ಹೋರಾಟಗಾರರನ್ನು ಸರ್ಕಾರ ಹತ್ತಿಕ್ಕುತ್ತಿದೆ: ಬಂಧಿತರ ಬಿಡುಗಡೆ ಎಎಪಿ ಆಗ್ರಹ

ಬೆಂಗಳೂರು, ಡಿಸೆಂಬರ್ 29: ರಾಜ್ಯಗಳು ಉದಯವಾಗಿರುವುದೇ ಭಾಷೆಯ ಆಧಾರದ ಮೇಲೆ ಕನ್ನಡ ಕಡ್ಡಾಯ ಎನ್ನುವ ಕಾನೂನು ಇದ್ದರೂ ಪಾಲಿಸದೇ ಇದ್ದಾಗ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದರು. ರಾಜ್ಯದಲ್ಲಿ ಕನ್ನಡ ಕಡ್ಡಾಯವಾಗಬೇಕು ಎಂಬುದನ್ನು ಎತ್ತಿ ತೋರಿಸಿದ್ದಕ್ಕೆ ಕನ್ನಡ ಪರ ಹೋರಾಟಗಾರರನ್ನು ಬಂಧಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿನ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳು ಕನ್ನಡದಲ್ಲಿಯೇ ಇರಬೇಕು ಎಂಬ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಹಾಗೂ ಕರ್ನಾಟಕ ಜಲಸಂರಕ್ಷಣಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ.

 AAP Support to Fight For Kannada Mandatory in Shops: Slams on Karnataka govt

ರಾಜ್ಯ ಸರ್ಕಾರವು ಅಕ್ರಮವಾಗಿ ಬಂಧಿಸಿರುವ ಕನ್ನಡಪರ ಹೋರಾಟಗಾರರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಮತ್ತು ಕನ್ನಡಪರ ಹೋರಾಟಗಾರರ ಮೇಲೆ ದಾಖಲಿಸಿರುವ ಎಲ್ಲಾ ಕೇಸುಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ನಗರದ ಫ್ರೀಡಂಪಾರ್ಕ್‌ನಲ್ಲಿ ಡಾ. ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಾಡು-ನುಡಿಗಾಗಿ ಧ್ವನಿ ಎತ್ತಿದವರ ಬಂಧನ

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಮುಖ್ಯಮಂತ್ರಿ ಚಂದ್ರು, ಕನ್ನಡ ಪರ ಹೋರಾಟಗಾರರು ಯಾರ ಮೇಲಾದರು ಹಲ್ಲೆ ಮಾಡಿದ್ದಾರೆ? ಕಾನೂನಿಗೆ ವಿರುದ್ಧವಾಗಿ ಹಾಕಿರುವ ನಾಮಫಲಕ ಕಿತ್ತು ಹಾಕಿದ್ದಾರೆ. ನಿಯಮ ಪಾಲನೆಯಾಗಿಲ್ಲ ಎನ್ನುವುದನ್ನು ಎತ್ತಿ ತೋರಿಸಿದ್ದಾರೆ ಅಷ್ಟಕ್ಕೆ ಬಂಧಿಸಲಾಗಿದೆ.

ಕೋಟಿ ಕೋಟಿ ಲೂಟಿ ಮಾಡಿದವರು, ಭ್ರಷ್ಟಾಚಾರ ಮಾಡಿವರನ್ನು ಸುಮ್ಮನೆ ಬಿಡುವ ಸರ್ಕಾರ, ನಾಡು ನುಡಿಗಾಗಿ ಧ್ವನಿ ಎತ್ತಿದವರನ್ನು ಬಂಧಿಸುತ್ತಿದೆ. ಈ ಮೂಲಕ ಕನ್ನಡ ಪರ ಹೋರಾಟಗಾರರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಕಿಡಿ ಕಾರಿದರು.

ಮೊದಲೇ ಎಚ್ಚೆತ್ತುಕೊಳ್ಳಬೇಕಿತ್ತು

ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಇರಬೇಕು ಎನ್ನುವ ನಿಯಮ ಇದ್ದರೂ ಯಾಕೆ ಪಾಲನೆಯಾಗುತ್ತಿಲ್ಲ, ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಹೋರಾಟ ಮಾಡುವ ಮುನ್ನವೇ ಎಚ್ಚೆತ್ತು ಕನ್ನಡ ನಾಮಫಲಕ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಂಡಿದ್ದರೆ ಪ್ರತಿಭಟನೆ ಏಕೆ ನಡೆಯುತ್ತಿತ್ತು ಎಂದು ಅವರು ಪ್ರಶ್ನಿಸಿದರು.

ಕಾನೂನು ಪಾಲನೆಯಾಗಿಲ್ಲ ಅಂದಾಗ ಬಿಬಿಎಂಪಿ ಅಧಿಕಾರಿಗಳು ಆ ನಾಮಫಲಕಗಳನ್ನು ತೆರವು ಮಾಡಬೇಕಿತ್ತು, ಅವರ ನಿರ್ಲಕ್ಷ್ಯ ಇದಕ್ಕೆಲ್ಲ ಕಾರಣ. ಹೋರಾಟ ಮಾಡುವವರೆಗೂ ಸುಮ್ಮನೆ ಇದ್ದು, ಈಗ ಫೆಬ್ರುವರಿ 28ರವರೆಗೆ ಗಡುವು ನೀಡಲಾಗಿದೆ. ರಾಜ್ಯದಾದ್ಯಂತ ಎಲ್ಲ ಕಡೆ ನಾಮಫಲಕಗಳಲ್ಲಿ ನಿಯಮದಂತೆ ಕನ್ನಡ ಕಡ್ಡಾಯ ಆಗಬೇಕು ಎಂದು ಹೇಳಿದರು.

 AAP Support to Fight For Kannada Mandatory in Shops: Slams on Karnataka govt

ಸಿಎಂ-ಡಿಸಿಎಂ ನೀವು ಯಾರ ಪರ?

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಮಾತನಾಡುತ್ತಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ ಎಂಬಿ ಪಾಟೀಲ್ ಅವರು ಯಾರ ಪರವಾಗಿ ಇದ್ದೀರಾ?. ನಾಡದ್ರೋಹಿಗಳು, ಶ್ರೀಮಂತರು, ನೆಲದ ಕಾನೂನು ಪಾಲಿಸದವರ ಪರವಾಗಿ ನಿಲ್ಲಬೇಡಿ. ಹೀಗೆ ಮಾಡಿದ್ರೆ ಬಂಡವಾಳ ಹೂಡಲ್ಲ ಅನ್ನುವ ಸಬೂಬು ಹೇಳುವುದು ಬಿಡಿ. ನಿಮಗೆ ಕಿಕ್ ಬ್ಯಾಕ್ ಬರುತ್ತೆ ಎಂದು ರಾಜ್ಯವನ್ನು ಬಲಿ ಕೊಡಬೇಡಿ, ಭಾಷೆಗೆ ಧಕ್ಕೆ ತರಬೇಡಿ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಹಾಳಾದರು ಚಿಂತೆ ಇಲ್ಲ, ಕಿಕ್ ಬ್ಯಾಕ್ ಬರಲಿ

ಕನ್ನಡ, ಕನ್ನಡಿಗರು, ಕರ್ನಾಟಕ ಹಾಳಾಗಿ ಹೋದರೂ ಚಿಂತೆಯಿಲ್ಲ ನನಗೆ ಬರಬೇಕಾದ ಕಿಕ್‌ ಬ್ಯಾಕ್ ಬರಲಿ ಎನ್ನುವಂತೆ ಸಚಿವ ಎಂಬಿ ಪಾಟೀಲ್ ಮಾತನಾಡಿದ್ದಾರೆ. ಇಂತಹ ಸರ್ಕಾರ ನಮಗೆ ಬೇಕಾ? ಎಂದರು.

ಕರ್ನಾಟಕದಾದ್ಯಂತ ನಮ್ಮ ಹೋರಾಟವನ್ನು ವಿಸ್ತರಿಸಲಾಗುವುದು. ಕಾನೂನು ಪ್ರಕಾರವೇ ನಮ್ಮ ಹೋರಾಟ ನಡೆಯಲಿದೆ. ನಾಮಫಲಕ ಮಾತ್ರವೇ ಅಲ್ಲ, ಕನ್ನಡಿಗರಿಗೆ ಉದ್ಯೋಗ ಬೇಕು. ಶಿಕ್ಷಣದಲ್ಲಿ ಕನ್ನಡ ಬೇಕು, ಕರ್ನಾಟಕದಲ್ಲಿ ಕನ್ನಡಕ್ಕೆ ಸಿಗಬೇಕಾದ ಆದ್ಯತೆ ಸಿಗಬೇಕು ಅಲ್ಲಿವರೆಗೂ ಹೋರಾಟ ಮುಂದುವರೆಯಲಿದೆ ಎಂದು ಮೋಹನ್ ದಾಸರಿ ತಿಳಿಸಿದರು.

ಪ್ರತಿಭಟನೆಯಲ್ಲಿ ಎಎಪಿ ರಾಜ್ಯ ಉಪಾಧ್ಯಕ್ಷರಾದ ಡಾ. ರಮೇಶ್ ಬೆಲ್ಲಂಕೊಂಡ, ಜಗದೀಶ್ ವಿ ಸದಂ, ಜಗದೀಶ್ ಚಂದ್ರ, ಸುಷ್ಮಾ ವೀರ, ಅಶೋಕ್ ಮೃತ್ಯುಂಜಯ, ಜಗದೀಶ್ ಬಾಬು ಸೇರಿದಂತೆ ಪಕ್ಷದ ಇತರ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದು. ಜೊತೆಗೆ ಕೆಲವು ಸಂಘಟನೆಗಳು ಸಾಥ್ ನೀಡಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+