ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉತ್ತಮ ಬೆಂಗಳೂರಿಗಾಗಿ ಎಎಪಿ ತ್ರಿವರ್ಣ ಸಂಭ್ರಮ ಬೈಕ್‌ ರ‍್ಯಾಲಿ

|
Google Oneindia Kannada News

ಬೆಂಗಳೂರು ಆಗಸ್ಟ್ 10: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಭ್ರಷ್ಟಾಚಾರ ಮುಕ್ತ ಬೆಂಗಳೂರು ಎಂಬ ಘೋಷವಾಕ್ಯದೊಂದಿಗೆ ಆಮ್‌ ಆದ್ಮಿ ಪಾರ್ಟಿಯ (ಎಎಪಿ) 'ತ್ರಿವರ್ಣ ಸಂಭ್ರಮ' ಬೈಕ್‌ ರ‍್ಯಾಲಿಗೆ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಚಾಲನೆ ನೀಡಿದರು.

ನಗರದ ಸ್ವಾತಂತ್ರ್ಯ ಉದ್ಯಾನಕ್ಕೆ ತ್ರಿವರ್ಣ ಧ್ವಜ ಸಹಿತ ಆಗಮಿಸಿದ್ದ ನೂರಾರು ದ್ವಿಚಕ್ರ ವಾಹನಗಳು ರ‍್ಯಾಲಿ ಆರಂಭಿಸಿದವು. ಕಾರ್ಯಕರ್ತರು ಸಂಭ್ರಮದಿಂದ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, "ಅಧಿಕಾರದಲ್ಲಿರುವ ರಾಜ್ಯ ಬಿಜೆಪಿ ಸರ್ಕಾರವು ಅವ್ಯಾಹತವಾಗಿ ಭ್ರಷ್ಟಾಚಾರ ನಡೆಸಿದೆ. ಈ ಕಾರಣದಿಂದ ರಾಜ್ಯ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ. ಸರ್ಕಾರದ ಬೊಕ್ಕಸದಿಂದ ಸಾವಿರಾರು ಕೋಟಿ ರೂ. ಹಣ ಬಿಡುಗಡೆಯಾದರೂ ಜನರ ಸಮಸ್ಯೆಗಳು ಮಾತ್ರ ಹಾಗೆಯೇ ಉಳಿದಿವೆ. ಜನರ ತೆರಿಗೆ ಹಣವು ಜನಪ್ರತಿನಿಧಿಗಳ ಜೇಬು ಸೇರುತ್ತಿದ್ದು, ಬಿಜೆಪಿ ನಾಯಕರು ತಾವು ಮಾತ್ರ ಅಭಿವೃದ್ಧಿ ಹೊಂದುತ್ತಿದ್ದಾರೆ. ಬೆಂಗಳೂರಿನ ಜನತೆಯು ಈ ಭ್ರಷ್ಟ ವ್ಯವಸ್ಥೆಗೆ ಬದಲಾವಣೆ ತರುವ ಸಂಕಲ್ಪ ಮಾಡುವ ಸಮಯ ಬಂದಿದೆ," ಎಂದು ಬಿಬಿಎಂಪಿ ಚುನಾವಣೆ ಕುರಿತು ಅವರು ಹೇಳಿದರು.

AAP tricolor celebration bike rally for a better Bangalore

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್‌ರಾವ್‌ ಮಾತನಾಡಿ, "ಇಂದು ಆರಂಭವಾದ ಬೈಕ್‌ ರ‍್ಯಾಲಿಯು ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳನ್ನು ತಲುಪಲಿದೆ. ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆ ವರೆಗೆ ರ‍್ಯಾಲಿ ಮುಂದುವರಿಯಲಿದೆ," ಎಂದರು.

ರ‍್ಯಾ:ಬಿಜೆಪಿ ಭ್ರಷ್ಟಾಚಾರ ಕುರಿತು ಜಾಗೃತಿ

ಆಗಸ್ಟ್ 15ರಂದು ಬನ್ನಪ್ಪ ಪಾರ್ಕ್‌ನಲ್ಲಿ ಸಮಾರೋಪ ಸಮಾರಂಭ ನಡೆಸಿ ರ‍್ಯಾಲಿಯನ್ನು ಮುಕ್ತಾಯಗೊಳಿಸಲಾಗುವುದು. ಅಲ್ಲಿಯವರೆಗೆ ಈ ರ‍್ಯಾಲಿ ಮೂಲಕ ಬೆಂಗಳೂರಿನಲ್ಲಿ ನಡೆದ ವ್ಯಾಪಕ ಭ್ರಷ್ಟಾಚಾರ, ಬಿಜೆಪಿ ದುರಾಡಳಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಅವರು ತಿಳಿಸಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು, ಸರ್ಕಾರಿ ಕಚೇರಿಗಳಲ್ಲಿ ಸಣ್ಣ ಸೇವೆ ಪಡೆಯಲು ಕೂಡ ಲಂಚ ನೀಡಬೇಕಾದ ವಾತಾವರಣವನ್ನು ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ನಿರ್ಮಿಸಿವೆ ಎಂದರು.

AAP tricolor celebration bike rally for a better Bangalore

75 ವರ್ಷವಾದರೂ ಸೂಕ್ತ ಮೂಲ ಸೌಕರ್ಯಇಲ್ಲ

ನಗರದಾದ್ಯಂತ ಬಿದ್ದ ರಸ್ತೆ ಗುಂಡಿಗಳು, ಅಸಮರ್ಪಕ ಪಾದಚಾರಿ ಮಾರ್ಗಗಳು, ಅವ್ಯವಸ್ಥಿತ ಕಸ ವಿಲೇವಾರಿ, ಮೂಲ ಸೌಕರ್ಯಗಳಿಲ್ಲದ ಆರೋಗ್ಯ ಕೇಂದ್ರಗಳು, ನಿರ್ಲಕ್ಷ್ಯಕ್ಕೆ ಒಳಗಾದ ಸರ್ಕಾರಿ ಶಾಲೆಗಳು, ರಾಜಕಾಲುವೆ ಒತ್ತುವರಿ ಮುಂತಾದ ಅನೇಕ ಸಮಸ್ಯೆಗಳು ಬೆಂಗಳೂರನ್ನು ಕಾಡುತ್ತಿದ್ದರೂ ಸರ್ಕಾರ ಮಾತ್ರ ಈ ಸಮಸ್ಯೆಗಳ ಪರಿಹಾರಗಳತ್ತೆ ಗಮನ ಹರಿಸಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಜನತೆಗೆ ಸೂಕ್ತ ಮೂಲ ಸೌಕರ್ಯಗಳು ದೊರೆಯದಿರುವುದು ದುರಂತ ಸಂಗತಿ ಎಂದು ವಿಷಾಧಿಸಿದರು.

ಸಮಾರಂಭದಲ್ಲಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ಪಕ್ಷದ ಹಿರಿಯ ಮುಖಂಡರುಗಳಾದ ಸಂಚಿತ್ ಸೆಹ್ವಾನಿ ,ಕೆ ಮಥಾಯಿ, ಜಗದೀಶ್.ವಿ ಸದಂ, ಸುರೇಶ್ ರಾಥೋಡ್, ಫರೀದ್, ಚನ್ನಪ್ಪಗೌಡ ನಲ್ಲೂರು, ಜ್ಯೋತಿಷ್ ಕುಮಾರ್ ಸೇರಿದಂತೆ ಮುಖಂಡರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Recommended Video

Bihar Politics : ಬಿಹಾರದ ಸಿಎಂ ನಿತೀಶ್ ಕುಮಾರ್ ಮಹಾ ಪಲ್ಟಿ ರಾಜಕೀಯ | Oneindia Kannada

English summary
Tricolor celebratory bike rally inaugurated by Aam Aadmi Party (APP) for a better Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X