ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಸರ್ಕಾರ ಹೊಸ ಪಾರ್ಕಿಂಕ್‌ ನೀತಿ ಹಿಂಪಡೆಯುವಂತೆ ಎಎಪಿ ಆಗ್ರಹ

|
Google Oneindia Kannada News

ಬೆಂಗಳೂರು, ಸೆಪ್ಟಂಬರ್ 20: ಬೆಂಗಳೂರಿನ ವಾಹನ ಸವಾರರಿಗೆ ಗುಣಮಟ್ಟದ ರಸ್ತೆ ಕಲ್ಪಿಸಿಕೊಡಲು ಬಿಜೆಪಿ ವಿಫಲವಾಗಿದೆ. ಹೀಗಿದ್ದರೂ ನೂತನ ಪಾರ್ಕಿಂಗ್‌ ನೀತಿ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ ಹೇಳಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ವಾಹನ ಸವಾರರಿಗೆ ಉತ್ತಮ ರಸ್ತೆ ಮೂಲಸೌಕರ್ಯ ಒದಗಿಸಲಾಗದ ಬಿಜೆಪಿಯ 40 ಪರ್ಸೆಂಟ್‌ ಸರ್ಕಾರ ಹೊಸ ನೀತಿ ತರಲು ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ರಜಾದಿನ ಭಾನುವಾರ (ಸೆಪ್ಟಂಬರ್ 18)ಸಹ ಟೆಂಡರ್ ಕರೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ತಿಳಿಸಿದರು.

Breaking: ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ನಿರ್ಮಾಣಕ್ಕೆ 5 ಲಕ್ಷ ಧನ ಸಹಾಯBreaking: ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ನಿರ್ಮಾಣಕ್ಕೆ 5 ಲಕ್ಷ ಧನ ಸಹಾಯ

ಸರ್ಕಾರದ ಕೆಟಿಪಿಪಿ ಕಾಯಿದೆ ಪ್ರಕಾರ ಟೆಂಡರ್‌ಗೆ 40 ದಿನಗಳ ಕಾಲಾವಕಾಶ ನೀಡಬೇಕು. ಆದರೂ ಸಹ ಕೇವಲ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಎಂಟು ವಲಯಗಳಲ್ಲೂ ಎಂಟು ಗುತ್ತಿಗೆದಾರರನ್ನು ಪೂರ್ವ ನಿಗದಿ ಮಾಡಿಕೊಂಡಿದ್ದು, ಕೇವಲ ನಾಮಕಾವಸ್ತೆಗಾಗಿ ಟೆಂಡರ್‌ ಕರೆಯಲಾಗಿದೆ ಎಂದು ಅವರು ಆರೋಪಿಸಿದರು.

AAP urge to Karnataka government for withdraw new Parking Policy

ರಸ್ತೆ ಬದಿ ವಾಹನ ನಿಲ್ಲಿಸುವುದಕ್ಕೂ ಪ್ರಿಪೇಯ್ಡ್ ಶುಲ್ಕ ವಿಧಿಸುವ ನೂತನ ಪಾರ್ಕಿಂಗ್‌ ನೀತಿಯು ಸಾಮಾನ್ಯ ವಾಹನ ಸವಾರರಿಗೆ ಭಾರೀ ಹೊರೆಯಾಗಲಿದೆ. ಪ್ರತಿ ಗಂಟೆಗೆ 15ರಿಂದ 30 ರೂಪಾಯಿವರೆಗೆ ಪಾರ್ಕಿಂಗ್‌ ಶುಲ್ಕ ವಿಧಿಸುವುದರಿಂದ ಬಡ ಹಾಗೂ ಮಧ್ಯಮ ವರ್ಗದ ವಾಹನ ಸವಾರರ ಆದಾಯಕ್ಕೆ ದೊಡ್ಡ ಪಾಲು ಈ ಶುಲ್ಕ ಪಾವತಿಸಲೆಂದೇ ಖರ್ಚಾಗಲಿದೆ. ಆದ್ದರಿಂದ ಈ ಜನವಿರೋಧಿ ನೀತಿಯನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಅವರ ಆಗ್ರಹಿಸಿದರು.

ಹಾಫ್ ಹೆಲ್ಮೆಟ್ ಧರಿಸಿಸುವ ಪೊಲೀಸರಿಗೆ ಸಂಚಾರಿ ಪೊಲೀಸರಿಂದ ದಂಡ: ಮುಂದೆ ಜನಸಾಮಾನ್ಯರಿಗೂ ಇದೇ ರೂಲ್ಸ್?ಹಾಫ್ ಹೆಲ್ಮೆಟ್ ಧರಿಸಿಸುವ ಪೊಲೀಸರಿಗೆ ಸಂಚಾರಿ ಪೊಲೀಸರಿಂದ ದಂಡ: ಮುಂದೆ ಜನಸಾಮಾನ್ಯರಿಗೂ ಇದೇ ರೂಲ್ಸ್?

ಜನವಿರೋಧಿ ನೀತಿ ಹಿಂಪಡೆಯದಿದ್ದರೆ ಹೋರಾಟ

ಇದರೊಂದಿಗೆ ತಮ್ಮ ಮನೆ ಮುಂದೆ ಕಾರು ಪಾರ್ಕಿಂಗ್ ಮಾಡುವುದಕ್ಕೂ 3,000 ರಿಂದ 5,000 ರೂಪಾಯಿ ನೀಡಿ ಪರವಾನಗಿ ಪಡೆಯಬೇಕೆಂಬ ನಿಯಮ ರೂಪಿಸಲಾಗಿದೆ. ವಾಹನ ಸವಾರರಿಗೆ ನೆರವಾಗುವಂತಹ ನೀತಿ ರೂಪಿಸುವ ಬದಲು ಅವರನ್ನು ಲೂಟಿ ಮಾಡಲು ಸರ್ಕಾರ ಮುಂದಾಗಿದೆ. ಜನವಿರೋಧಿ ನೀತಿಯನ್ನು ಹಿಂಪಡೆಯದಿದ್ದರೆ ಎಎಪಿ ಪಕ್ಷದ ವತಿಯಿಂದ ಬೃಹತ್‌ ಹೋರಾಟ ರೂಪಿಸಬೇಕಾಗುತ್ತದೆ ಎಂದು ಮೋಹನ್‌ ದಾಸರಿ ಎಚ್ಚರಿಸಿದ್ದಾರೆ.

200 ಕೋಟಿ ರೂ. ಸಂಗ್ರಹಿಸಲು ಹುನ್ನಾರ

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಸುರೇಶ್‌ ರಾಥೋಡ್‌ ಮಾತನಾಡಿ, ಪಾರ್ಕಿಂಗ್‌ಗೆ ದುಬಾರಿ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿರುವುದನ್ನು ಬೆಂಗಳೂರಿನ ಜನರು ಈಗ ಸಹಿಸಿಕೊಂಡರೆ, ಮುಂದಿನ ದಿನಗಳಲ್ಲಿ ಸರ್ಕಾರವು ಶುಲ್ಕವನ್ನು ಇನ್ನಷ್ಟು ಏರಿಕೆ ಮಾಡುವ ಸಾಧ್ಯತೆಯಿದೆ. ಈ ಮೂಲಕ ವಾರ್ಷಿಕವಾಗಿ ಸುಮಾರು 200ಕೋಟಿ ರೂ. ಮೂಲಕ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ ಎಂದರು.

ಇದೊಂದು ದಂಧೆಯಾಗಿ ಮಾರ್ಪಾಡಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜನರು ಕಟ್ಟುವ ಶುಲ್ಕವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜೇಬು ಸೇರಲಿದೆ. ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆಯನ್ನು ಬಗೆಹರಿಸಲು ಮೀನಾಮೀಷ ಎಣಿಸುವ ಜನವಿರೋಧಿ ಸರ್ಕಾರವು ಜನರಿಂದ ವಸೂಲಿ ಮಾಡಲು ಮಾತ್ರ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

English summary
Aam Aadmi Party (AAP) urge to Karnataka government for withdraw new parking policy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X