ಕೆಜೆ ಜಾರ್ಜ್ ಚಾರ್ಚ್ ತಗೊಳ್ಳಿ, ಇಲ್ಲ ರಾಜೀನಾಮೆ ಕೊಡಿ
ಬೆಂಗಳೂರು, ಜು. 22 : ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ನೈತಿಕ ಹೊಣೆ ಹೊತ್ತು ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಸೌತ್ ಎಂಡ್ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.
ಮಂಗಳವಾರ ಬೆಳಗ್ಗೆ ಜಯನಗರದ ಎನ್ಎಂಕೆ ಆರ್ ವಿ ಕಾಲೇಜು ಬಳಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಿದ ನೂರಾರು ವಿದ್ಯಾರ್ಥಿಗಳು ಆನೆಬಂಡೆ ರಸ್ತೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಸಾಗಿ, ಸೌತ್ ಎಂಡ್ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಸಿ, ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿದರು. [ಹೊಸ ಪೊಲೀಸ್ ಆಯುಕ್ತರ ಭರವಸೆಗಳು]
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ತಮ್ಮ ತಪ್ಪನ್ನು ಮುಚ್ಚಿ ಹಾಕಿಕೊಳ್ಳಲು ಬೆಂಗಳೂರು ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಿದ್ದಾರೆ ಎಂದು ದೂರಿದ ವಿದ್ಯಾರ್ಥಿಗಳು ಗೃಹ ಸಚಿವರು ಘಟನೆಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯ ಚಿತ್ರಗಳು

ಬೆಂಗಳೂರಿನಲ್ಲಿ ಎಬಿವಿಪಿ ಪ್ರತಿಭಟನೆ
ಬೆಂಗಳೂರು ಮತ್ತು ರಾಜ್ಯದಲ್ಲಿ ನಡೆದ ಸರಣಿ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಗೃಹ ಸಚಿವರು ರಾಜೀನಾಮೆ ನೀಡಬೇಕು
ಜಯನಗರದ ಎನ್ಎಂಕೆಆರ್ ವಿ ಕಾಲೇಜಿನ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಗೃಹ ಸಚಿವ ಕೆ.ಜೆ.ಜಾರ್ಜ್ ಅತ್ಯಾಚಾರ ಪ್ರಕರಣಗಳ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸೌತ್ ಎಂಡ್ ವೃತ್ತದಲ್ಲಿ ಪ್ರತಿಭಟನೆ
ಎನ್ಎಂಕೆಆರ್ ವಿ ಕಾಲೇಜಿನಿಂದ ಆನೆಬಂಡೆ ರಸ್ತೆಯ ಮೂಲಕ ಸೌರ್ ಎಂಡ್ ವೃತ್ತ ತಲುಪಿದ ನೂರಾರು ವಿದ್ಯಾರ್ಥಿಗಳು ಅಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸಿದ್ದರಾಮಯ್ಯ ನಿದ್ದೆಯಿಂದ ಏಳಬೇಕು
ರಾಜ್ಯದಲ್ಲಿ ಸರಣಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗಾಢವಾಗಿ ನಿದ್ದೆ ಮಾಡುತ್ತಿದ್ದಾರೆ. ಅವರು ನಿದ್ದೆಯಿಂದ ಎದ್ದು ಮಹಿಳೆಯರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಮ್ಮ ತಪ್ಪಿಗೆ ಯಾರನ್ನು ಹೊಣೆ ಮಾಡುತ್ತೀರಿ?
ಸರಣಿ ಅತ್ಯಾಚಾರ ಪ್ರಕರಣಗಳಲ್ಲಿ ತಮ್ಮ ತಪ್ಪನ್ನು ಮುಚ್ಚಿ ಹಾಕಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವರು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಿದ್ದೀರಿ. ನಿಮ್ಮ ತಪ್ಪಿಗೆ ಏನು ಶಿಕ್ಷೆ? ಎಂದು ಪ್ರಶ್ನಿಸಿದರು.

ಗೃಹ ಸಚಿವರ ರಾಜೀನಾಮೆ ಪಡೆಯಿರಿ
ಅತ್ಯಾಚಾರ ಪ್ರಕರಣಗಳ ಸಂಬಂಧ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದಂತೆ ಗೃಹ ಸಚಿವರ ಕೆ.ಜೆ.ಜಾರ್ಜ್ ಅವರ ರಾಜೀನಾಮೆಯನ್ನು ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಚಾರ್ಜ್ ಆಗಿ ಜಾರ್ಜ್
ಬೆಂಗಳೂರು ಮತ್ತು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವ ಕೆ.ಜೆ.ಜಾರ್ಜ್ ವಿಫಲರಾಗಿದ್ದಾರೆ. ಗೃಹ ಸಚಿವರು ಜಾರ್ಜ್ ಆಗಬೇಕು ಎಂದು ವಿದ್ಯಾರ್ಥಿಗಳು ಲೇವಡಿ ಮಾಡಿದರು.

ತ್ವರಿತವಾಗಿ ವಿಚಾರಣೆ ಮುಗಿಸಿ, ಶಿಕ್ಷಿಸಿ
ಬೆಂಗಳೂರಿನಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ನಮಗೆ ರಕ್ಷಣೆ ಕೊಡಿ
ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ ವಿದ್ಯಾರ್ಥಿಗಳು, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಹಸ್ತಕ್ಷೇಪ ಬೇಡ
ಗೃಹ ಇಲಾಖೆಯಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬೇಡಿ, ಪೊಲೀಸರ ಮೇಲೆ ಒತ್ತಡ ಹೇರದೆ ತನಿಖೆ ನಡೆಸಲು ಅವಕಾಶ ಮಾಡಿಕೊಡಿ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಜ್ಯದಂತ ಪ್ರತಿಭಟನೆ
ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯದ್ಯಂತ ಪ್ರತಿಭಟನೆ ನಡೆಸುತ್ತಿದೆ. ಅದರ ಭಾಗವಾಗಿ ಜಯನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.












Click it and Unblock the Notifications