ಅನಂತ್ ಕುಮಾರ್ ರವರ ನಿಧನಕ್ಕೆ ಅಭಾವಿಪ ತೀವ್ರ ಸಂತಾಪ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹಿರಿಯ ಕಾರ್ಯಕರ್ತರು, ಕೇಂದ್ರ ಸಚಿವರು ಆದ ಎಚ್. ಎನ್. ಅನಂತ್ ಕುಮಾರ್‌ರವರ ನಿಧನವು ದೇಶ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು ಶ್ರೀಯುತರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಮತ್ತು ಅವರ ಅಸಂಖ್ಯಾತ ಅಭಿಮಾನಿ ಬಳಗಕ್ಕೆ ಭಗವಂತ ನೀಡಲೆಂದು ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.

ವಿದ್ಯಾರ್ಥಿದೆಸೆಯಿಂದಲೇ ವಿದ್ಯಾರ್ಥಿಪರಿಷತ್ತಿನ ಕಾರ್ಯಕರ್ತರಾಗಿದ್ದ ಶ್ರೀಯುತರು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜೈಲುವಾಸ ಅನುಭವಿಸಿದರು. ಹುಬ್ಬಳ್ಳಿಯ ಮಹಾನಗರ ಕಾರ್ಯದರ್ಶಿಯಾಗಿ, ಅಭಾವಿಪ ಕರ್ನಾಟಕ ಪ್ರಾಂತದ ರಾಜ್ಯ ಕಾರ್ಯದರ್ಶಿಯಾಗಿ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ 1985ರಲ್ಲಿ ರಾಷ್ಟ್ರಿಯ ಕಾರ್ಯದರ್ಶಿಯಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕ ರಾಜ್ಯದ ಹಲವಾರು ಶೈಕ್ಷಣಿಕ ಹಾಗೂ ಸಾಮಾಜಿಕ ಹೋರಾಟದ ಜವಾಬ್ದಾರಿ ನೇತೃತ್ವವನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

ಶ್ರೀಯುತರ ನಿಧನಕ್ಕೆ ಅಭಾವಿಪ ಕರ್ನಾಟಕ ಬಳಗ ತೀವ್ರ ಸಂತಾಪವನ್ನು ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೆ.

ABVP mourns the death of Ananth Kumar

1985ರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಕಾರ್ಯದರ್ಶಿಯಾದ ಅನಂತ್ ಕುಮಾರ್ ಅವರು ನಂತರ ಭಾರತೀಯ ಜನತಾ ಪಕ್ಷವನ್ನು ಸೇರಿದರು. ಭಾರತೀಯ ಜನತಾ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು. ಅವರನ್ನು 1996ರಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಅದೇ ವರ್ಷ 1996ರಲ್ಲಿ ಅವರು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸತ್ತನ್ನು ಪ್ರವೇಶಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+