ಲಂಚ ಸ್ವೀಕರಿಸುತ್ತಿದ್ದ ಸರ್ಕಾರಿ ಅಧಿಕಾರಿಗಳನ್ನು ಹಿಡಿದ ಎಸಿಬಿ
ಬೆಂಗಳೂರು, ಜುಲೈ 24 : ರಾಜ್ಯದಲ್ಲಿ ಎರಡು ಕಡೆ ಎಸಿಬಿ ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಸರ್ಕಾರಿ ಅಧಿಕಾರಿಗಳನ್ನು ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮೆಣಸಿ ಗ್ರಾಮದ ನಿವಾಸಿಯಾಗಿರುವ ಸಿವಿಲ್ ಗುತ್ತಿಗೆದಾರರಿಂದ ಹಲಗೆರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶೈಲೇಶ ಕುಮಾರ ₹ 5,000/- ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಕಾರವಾರ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದಿದ್ದಾರೆ.
ಲಂಚ ಸ್ವೀಕರಿಸುತ್ತಿದ್ದ ಶೈಲೇಶ ಕುಮಾರ್ ಅವರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರೆದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಕಗ್ಗಲೀಪುರ ಗ್ರಾಮ ಮಂಚಾಯಿತಿ ಬಿಲ್ ಕಲೆಕ್ಟರ್ ಮುನಿಕೃಷ್ಣ ಖಾತಾ ಬದಲಾವಣೆಗಾಗಿ ಅರ್ಜಿದಾರೊಬ್ಬರಿಂದ ರೂ.3,000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಇಂದು ಮುನಿಕೃಷ್ಣ ಅವರು ಲಂಚದ ಹಣ 3,000 ವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ರಾಮನಗರ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದಿರುತ್ತಾರೆ, ಇವರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.












Click it and Unblock the Notifications