ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಕೇಂದ್ರ ಕಚೇರಿ ಸೇರಿ 27 ಕಡೆ ಎಸಿಬಿ ದಾಳಿ: ಭ್ರಷ್ಟರು ಬಾಗ್!

|
Google Oneindia Kannada News

ಬೆಂಗಳೂರು, ಫೆ. 25: ಬೆಳ್ಳಂ ಬೆಳಗ್ಗೆ ಬೆಂಗಳೂರು ಮಹಾ ನಗರ ಪಾಲಿಕೆಯ ಭ್ರಷ್ಟರಿಗೆ ಭ್ರಷ್ಟಾಚಾರ ನಿಗ್ರಹ ದಳ ಶಾಕ್ ಕೊಟ್ಟಿದೆ. ಬಿಬಿಎಂಪಿ ಕೇಂದ್ರ ಕಚೇರಿ ಸೇರಿ ಬರೋಬ್ಬರಿ 27 ಕಚೇರಿಗಳ ಮೇಲೆ ಎಸಿಬಿಯ ಅಧಿಕಾರಿಗಳು ದಾಳಿ ಮಾಡಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ, ಜಂಟಿ ಆಯುಕ್ತರ ಕಚೇರಿಗಳು, ರೆವಿನ್ಯೂ ವಿಭಾಗ, ಮೂಲ ಸೌಕರ್ಯ ವಿಭಾಗ, ಆರೋಗ್ಯ ವಿಭಾಗದ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.

ಬಿಬಿಎಂಪಿಯ ಕಂದಾಯ, ಆರೋಗ್ಯ ವಿಭಾಗದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ಎಸಗಿರುವ ಸಂಬಂಧ ಎಸಿಬಿಗೆ ಅನೇಕ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ವಿಚಾರಣೆ ನಡೆಸಿದ್ದ ಎಸಿಬಿ ಅಧಿಕಾರಿಗಳು ಅಕ್ರಮಗಳು ನಡೆದಿರುವ ಬಗ್ಗೆ ಮೇಲಾಧಿಕಾರಿಗಳಿಗೆ ಮೂಲ ವರದಿ ತಯಾರಿಸಿ ನೀಡಿದ್ದರು. ವರದಿ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಎಸಿಬಿ ಠಾಣೆಯಲ್ಲಿ ಸ್ವಯಂ ಪ್ರೇರಿತ ಕೇಸು ದಾಖಲಿಸಿರುವ ಎಸಿಬಿ ಅಧಿಕಾರಿಗಳು ಶುಕ್ರವಾರ ಏಕ ಕಾಲಕ್ಕೆ 27 ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.

ACB raid on BBMP head office and 27 zonal offices across Bengaluru

ಅಕ್ರಮಗಳ ಸರಮಾಲೆ:

ಬಿಬಿಎಂಪಿ ಕಂದಾಯ ವಿಭಾಗ, ಆರೋಗ್ಯ ವಿಭಾಗ ಮತ್ತು ಮೂಲ ಸೌಕರ್ಯ ವಿಭಾಗದಲ್ಲಿ ಅಕ್ರಮಕ್ಕೆ ಸಂಬಂಧಿಸಿದ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ದಾಳಿ ವೇಳೆ ಕೆಲವು ಅಧಿಕಾರಿಗಳು ಓಡಿ ಹೋಗಿದ್ದಾರೆ. ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಬಿಬಿಎಂಪಿ ಮೇಲೆ ದಾಳಿ ನಡೆದಿದ್ದು, ಬಿಬಿಎಂಪಿ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ.

ACB raid on BBMP head office and 27 zonal offices across Bengaluru

ಬಿಬಿಎಂಪಿ ಅಕ್ರಮಗಳಿಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬಂದಿದ್ದವು. ದೂರುಗಳ ವಿಚಾರಣೆ ನಡೆದಾಗ ಅಕ್ರಮಗಳು ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದವು. ಕೆಲವು ಅಧಿಕಾರಿಗಳು ಹಣದಾಸೆಗೆ ಬಿಬಿಎಂಪಿ ನಿಯಮ ಗಾಳಿಗೆ ತೂರಿ ಅಕ್ರಮ ನಡೆದಿರುವುದು ಪ್ರಾಥಮಿಕ ವಿಚಾರಣೆ ವೇಳೆ ಬಂದಿತ್ತು. ಈ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

English summary
ACB raid on BBMP head office and 27 zonal offices across Bengaluru on February 25 morning seized important documents.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X