ಬೆಂಗಳೂರು : ಬೊಮ್ಮನಹಳ್ಳಿ ಬಿಬಿಎಂಪಿ ಕಚೇರಿ ಮೇಲೆ ಎಸಿಬಿ ದಾಳಿ
ಬೆಂಗಳೂರು, ಫೆಬ್ರವರಿ 07 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬೊಮ್ಮನಹಳ್ಳಿ ವಾರ್ಡ್ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 20ಕ್ಕೂ ಹೆಚ್ಚು ಅಧಿಕಾರಿಗಳು ದಾಖಲೆಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಗುರುವಾರ ಭಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬೊಮ್ಮನಹಳ್ಳಿ ವಾರ್ಡ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಪೌರ ಕಾರ್ಮಿಕರ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದು, ಪಿಎಫ್ ಪಡೆದು, ಅವ್ಯವಹಾರ ನಡೆಸಲಾಗಿದೆ ಎಂಬ ಆರೋಪದ ಮೇಲೆ ದಾಳಿ ನಡೆಸಲಾಗಿದೆ.

ಎಸಿಬಿ ಅಧಿಕಾರಿಗಳು ಎಸಿಎಫ್ ರಾಜಲಕ್ಷ್ಮೀ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ವಾರ್ಡ್ ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಪೌರ ಕಾರ್ಮಿಕರ ಭವಿಷ್ಯದ (ಪಿಎಫ್), ನೌಕರರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್)ನಿಂದ 380 ಕೋಟಿ ಹಣವನ್ನು 6,600 ನಕಲಿ ಪೌರ ಕಾರ್ಮಿಕರ ಹೆಸರಿನಲ್ಲಿ ನಡೆದ 550 ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ.
ಕಾರ್ಮಿಕರಿಗೆ ಸಂಬಂಧಿಸಿದ ಹಣವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಹಿಂದಿನಿಂದಲೂ ಹೇಳಿಬಂದಿತ್ತು. ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.












Click it and Unblock the Notifications