Breaking: ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಮನೆ ಮೇಲೆ ಎಸಿಬಿ ದಾಳಿ
ಬೆಂಗಳೂರು, ಮಾರ್ಚ್ 25: ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿನ ಮನೆ, ದೊಡ್ಡಬಳ್ಳಾಪುರದಲ್ಲಿನ ಟ್ರಸ್ಟ್, ಕಚೇರಿ, ಶಾಲೆ ಹಾಗೂ ಸಂಬಂಧಿಕರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
42 ಜನ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ 5 ತಂಡಗಳಿಂದ ದಾಳಿ ಮಾಡಿದ್ದು, ಸರಕಾರಿ ಗೋಮಾಳ ಜಮೀನನ್ನು ಅಕ್ರಮವಾಗಿ ಪರಬಾರೆ ಮಾಡಿದ್ದ ಆರೋಪ ರಂಗನಾಥ್ ಅವರ ಮೇಲಿದೆ.

ಬೆಂಗಳೂರು ಉತ್ತರ ಎಸಿಯಾಗಿ 3 ತಿಂಗಳು ಕರ್ತವ್ಯ ನಿರ್ವಹಿಸಿದ್ದ ರಂಗನಾಥ್, ಪ್ರಸ್ತುತ ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮ ನಿಯಮಿತದಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸರ್ಕಾರದಿಂದಲೇ ದೂರು
ಸರ್ಕಾರದಿಂದಲೇ ದೂರು ದಾಖಲಾಗಿದ್ದರಿಂದ ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಮನೆ ಹಾಗೂ ಸಂಬಂಧಿಕರ ಮನೆ ಎಸಿಬಿ ದಾಳಿ ನಡೆಸಲಾಗಿದೆ. ವಿಧಾನಸಭೆ ಅಧಿವೇಶನದಲ್ಲಿ ಕೆ. ರಂಗನಾಥ್ ಅಕ್ರಮದ ಬಗ್ಗೆ ಚರ್ಚೆ ನಡೆದಿತ್ತು.
ಬೆಂಗಳೂರು ಉತ್ತರದಲ್ಲಿ ಕೆ. ರಂಗನಾಥ್ ಎಸಿಯಾಗಿದ್ದ ಸಂದರ್ಭದಲ್ಲಿ ಕೋಟಿ ಕೋಟಿ ವಂಚನೆ ನಡೆದಿತ್ತು. 40 ಎಕರೆ ಗೋಮಾಳದ ಜಾಗವನ್ನು ಪಟ್ಟಭದ್ರ ಹಿತಾಸಕ್ತಿಯಲ್ಲಿ ಖಾಸಗಿಯವರಿಗೆ ರಂಗನಾಥ್ ನೀಡಿದ್ದರು ಎಂಬ ಆರೋಪ ಇದೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಜಾಗವನ್ನೇ ಪರಭಾರೆ ಮಾಡುವಂತೆ ಕೆ. ರಂಗನಾಥ್ ಮಾಡಿದ್ದರು. 2020ರಲ್ಲಿ ನಡೆದಿದ್ದ ಮಹಾ ಅಕ್ರಮವನ್ನು ಬಯಲಿಗೆಳೆಯಲು ಸರ್ಕಾರದಿಂದಲೇ ಮುನ್ನುಡಿ ಬರೆಯಲಾಗಿದೆ.
ಗೋಮಾಳದ ಅಕ್ರಮ ದಾಖಲೆ ಹಾಗೂ ರಂಗನಾಥ್ರ ಆಸ್ತಿಪಾಸ್ತಿಯ ವಿವರಗಳನ್ನು ಕಲೆಹಾಕಲು ಎಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ. ಯಲಹಂಕ, ನಾಗರಭಾವಿ ಸೇರಿದಂತೆ ಬೆಂಗಳೂರಿನ ಹಲವು ಕಡೆ ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಆಸ್ತಿಪಾಸ್ತಿ ಹುಡುಕಾಟದಲ್ಲಿ ಎಸಿಬಿ ಅಧಿಕಾರಿಗಳು ಬ್ಯುಸಿಯಾಗಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications