ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಕೆಎಎಸ್ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

|
Google Oneindia Kannada News

ಬೆಂಗಳೂರು, ನವೆಂಬರ್ 07: ಎಸಿಬಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಬೆಂಗಳೂರಲ್ಲಿ ಕೆಎಎಸ್ ಅಧಿಕಾರಿಯೊಬ್ಬರ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪ ಕುರಿತಂತೆ ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮತ್ತು ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ.

ಎಸಿಬಿ ದಾಳಿ; ಅಧಿಕಾರಿಗಳ ಮನೆಯಲ್ಲಿ ಸಿಕ್ಕಿದ್ದು 82 ಲಕ್ಷ ರೂ.! ಎಸಿಬಿ ದಾಳಿ; ಅಧಿಕಾರಿಗಳ ಮನೆಯಲ್ಲಿ ಸಿಕ್ಕಿದ್ದು 82 ಲಕ್ಷ ರೂ.!

ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಡಾ. ಸುಧಾ ಭೂ ಪರಿಹಾರ ನೀಡುವ ವಿಚಾರದಲ್ಲಿ ತಮ್ಮ ಗಂಡ ಮತ್ತು ದಲ್ಲಾಳಿಗಳ ಮೂಲಕ ಲಂಚ ಪಡೆಯುತ್ತಿದ್ದರು.

ACB Raids KAS Officers House In Bengaluru

ಅಲ್ಲದೆ, ತಮ್ಮ ಸಂಬಳಕ್ಕಿಂತಲೂ ಆದಾಯದ ಮೊತ್ತ ಜಾಸ್ತಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.

ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಸೇರಿದಂತೆ ಉಡುಪಿಯಲ್ಲಿರುವ ಡಾ. ಸುಧಾ ಅವರ ಮನೆ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರಿನ ಮನೆ, ಕಚೇರಿ ಸೇರಿದಂತೆ 6 ಕಡೆ ದಾಳಿ ನಡೆಸಲಾಗಿದೆ . ಈ ಹಿಂದೆ ಬಿಡಿಎಯಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಡಾ. ಬಿ. ಸುಧಾ ಅವರ ವಿರುದ್ಧ ಎಸಿಬಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಕುರಿತು ದೂರು ದಾಖಲಾಗಿತ್ತು ಎಂದು ಹೇಳಲಾಗಿದೆ.

ಈಗಿರುವ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನದ ಆಡಳಿತ ಅಧಿಕಾರಿ ಆಗಿರುವ ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆಸಲಾಗಿದೆ.

ಬೆಂಗಳೂರಿನ ಕೊಡಿಗೇಹಳ್ಳಿ ನಿವಾಸ, ಯಲಹಂಕದಲ್ಲಿ ಒಂದು ಫ್ಲ್ಯಾಟ್, ಬ್ಯಾಟರಾಯನಪುರ ಹಾಗೂ ಬಿಇಎಂಎಲ್ ಮನೆ ಹಾಗೂ ಉಡುಪಿ ಜಿಲ್ಲೆಯ ಹೆಬ್ರಿ ಮನೆಯ ಮೇಲೂ ದಾಳಿ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
Sleuths of Anti-Corruption Bureau (ACB) on Saturday raided houses of KAS officer B Sudha and seized 10 lakh cash, gold, documents pertaining to properties which are allegedly disproportionate to her known sources of income.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X