• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿ. ಎಚ್. ಅನಿಲ್ ಕುಮಾರ್ ವಿರುದ್ಧ ತನಿಖೆ; ಸರ್ಕಾರಕ್ಕೆ ಎಸಿಬಿ ಪತ್ರ

|

ಬೆಂಗಳೂರು, ಸೆಪ್ಟೆಂಬರ್ 09: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವಿದೆ. ಈ ಕುರಿತು ಎಸಿಬಿ ತನಿಖೆ ನಡೆಸುತ್ತಿದ್ದು, ಪಾಲಿಕೆಯ ಆಯುಕ್ತರಾಗಿದ್ದ ಬಿ. ಎಚ್. ಅನಿಲ್ ಕುಮಾರ್ ಅವರನ್ನು ವಿಚಾರಣೆ ನಡೆಸಬೇಕಿದೆ.

ಪ್ರಸ್ತುತ ಸಾರ್ವಜನಿಕ ಉದ್ಯಮಗಳ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿರುವ ಅನಿಲ್ ಕುಮಾರ್ ವಿಚಾರಣೆಗೆ ಅನುಮತಿ ನೀಡುವಂತೆ ಎಸಿಬಿ ಸರ್ಕಾರಕ್ಕೆ ಪತ್ರವನ್ನು ಬರೆದಿದೆ. ಮಾಹಿತಿ ಹಕ್ಕು ಕಾರ್ಯಕರ್ತ ಬಿ. ಎಚ್. ವಿರೇಶ್ ನೀಡಿದ ದೂರಿನ ಅನ್ವಯ ಎಸಿಬಿ ತನಿಖೆ ನಡೆಸುತ್ತಿದೆ.

ಎಸಿಬಿ ದಾಳಿ; ಮಹಿಳಾ ಅಧಿಕಾರಿಗಳ ಬಳಿ 4.47 ಕೋಟಿ ಪತ್ತೆ

ಬಿ. ಎಚ್. ಅನಿಲ್ ಕುಮಾರ್ 2019ರ ಆಗಸ್ಟ್‌ನಿಂದ 2020ರ ಜುಲೈ 17ರ ತನಕ ಬಿಬಿಎಂಪಿ ಆಯುಕ್ತರಾಗಿದ್ದರು. ಬಿಬಿಎಂಪಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಅನಿಲ್ ಕುಮಾರ್ ಭಾಗಿಯಾಗಿದ್ದಾರೆ ಎಂದು ಬಿ. ಎಚ್. ವಿರೇಶ್ ದೂದಿನಲ್ಲಿ ಉಲ್ಲೇಖಿಸಿದ್ದರು.

ಬಿಬಿಎಂಪಿ ಆಸ್ತಿ ತೆರಿಗೆ ಹಗರಣ; ಎಸಿಬಿ ತನಿಖೆಗೆ ಆದೇಶ

ಈ ಪ್ರಕರಣದ ಬಗ್ಗೆ ಪ್ರಾಥಮಿಕ ಮಾಹಿತಿಯನ್ನು ಎಸಿಬಿ ಸಂಗ್ರಹ ಮಾಡಿದೆ. ಅನಿಲ್ ಕುಮಾರ್ ವಿಚಾರಣೆ ನಡೆಸುವ ಅಗತ್ಯವಿದೆ. ಆದ್ದರಿಂದ, ವಿಚಾರಣೆಗೆ ಅನುಮತಿ ನೀಡಬೇಕು ಎಂದು ಎಸಿಬಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಆದಾಯಕ್ಕಿಂತ ಅಧಿಕ ಆಸ್ತಿ: ಕರ್ನಾಟಕದ 14 ಕಡೆ ಎಸಿಬಿ ದಾಳಿ

ಸರ್ಕಾರದಿಂದ ಬಿಬಿಎಂಪಿಗೆ ಬಿಡುಗಡೆ ಮಾಡಲಾದ ಅನುದಾನವನ್ನು ಆಯಾ ಕ್ರಿಯಾ ಯೋಜನೆಯಡಿ ಅನುಮೋದನೆ ಆಗಿರುವ ಕಾಮಗಾರಿಗಳಿಗೆ ನೀಡಬೇಕು. ಆದರೆ, ಪಾಲಿಕೆಯ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗೆ ಅನುದಾನ ನೀಡಲಾಗಿದೆ ಎಂಬುದು ಆರೋಪವಾಗಿದೆ.

ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆ ನಡೆಸಲು ನೇಮಕಾತಿ ಪ್ರಾಧಿಕಾರದ ಪೂರ್ವಾನುಮತಿ ಅಗತ್ಯವಿದೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಪ್ರಕಾರ ವಿಚಾರಣೆ ನಡೆಸಲು ಅನುಮತಿ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

English summary
ACB which probing scam in BBMP writes Karnataka government seeking permission to investigate senior IAS officer B. H. Anil Kumar who worked as commissioner of BBMP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X