ಹಣಕಾಸು ಅವ್ಯವಹಾರ ಪ್ರಕರಣ: ಶ್ರೀ ಗುರುರಾಘವೇಂದ್ರ ಬ್ಯಾಂಕ್ ದಾಖಲೆ ಜಪ್ತಿ

ಬೆಂಗಳೂರು, ಜೂನ್ 20: ಹಣಕಾಸು ಅವ್ಯವಹಾರ ಸಂಬಂಧ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರಿ ಬ್ಯಾಂಕಿನ ಕೇಂದ್ರ ಕಚೇರಿ ಸೇರಿದಂತೆ ಐದು ಸ್ಥಳಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿ ಬ್ಯಾಂಕ್ ದಾಖಲೆಗಳನ್ನು ಜಪ್ತಿ ಮಾಡಿದೆ.

Recommended Video

      ಭಾರತೀಯ ಸೇನೆ ಸೇರಿಕೊಳ್ಳಲು ಮುಂದಾದ ನಾಗಸಾಧುಗಳು | NagaSadhus | Oneindia Kannada

      ಸಾವಿರಾರು ಗ್ರಾಹಕರ ಠೇವಣಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಕೊಂಡ, ಭಾರೀ ಅವ್ಯವಹಾರ ನಡೆಸಿದ ಆರೋಪಕ್ಕೊಳಗಾಗಿರುವ ಶ್ರೀ ಗುರು ರಾಘವೇಂದ್ರ ಬ್ಯಾಂಕಿನ ಕೇಂದ್ರ ಕಚೇರಿ ಸೇರಿದಂತೆ ಐದು ಕಡೆ ಗುರುವಾರ ಎಸಿಬಿ ದಾಳಿ ನಡೆಸಿತ್ತು. ಈ ದಾಳಿ ವೇಳೆ ದಾಖಲೆಗಳನ್ನು ಪರಿಶೀಲಿಸಿದ್ದು, ಶುಕ್ರವಾರ ಬೆಳಗಿನ ಜಾವ ಪರಿಶೀಲನೆ ಅಂತ್ಯಗೊಂಡಿದೆ.

      ಬ್ಯಾಂಕಿನ ಪ್ರಧಾನ ಕಚೇರಿ, ಬಸವನಗುಡಿ ಶಾಖೆ, ಶ್ರೀ ಗುರುಸಾರ್ವಭೌಮ ಸೌಹಾರ್ಧ ಸಹಕಾರ ಸಂಘ, ಬ್ಯಾಂಕಿನ ಮಾಜಿ ಅಧ್ಯಕ್ಷ ರಾಮಕೃಷ್ಣ ಮತ್ತು ಬಸವನಗುಡಿ ಮನೆ ಮತ್ತು ಸಿಇಒ ಮಣೂರು ವಾಸುದೇವ ಮಯ್ಯ ಅವರ ಮನೆಗಳಲ್ಲಿ ಗುರುವಾರ ಬೆಳಿಗ್ಗೆಯಿಂದ ಶೋಧ ನಡೆಸಿದ ಎಸಿಬಿ ಅಧಿಕಾರಿಗಳ ತಂಡ ಶುಕ್ರವಾರ ಬೆಳಗಿನ ಜಾವ 2 ಗಂಟೆಗೆ ಸುಮಾರಿಗೆ ದಾಖಲೆಗಳೊಂದಿಗೆ ಹಿಂತಿರುಗಿದೆ.

      Sri Guru Raghavendra Co-op Bank: ACB Seized Bank Documents

      ಬ್ಯಾಂಕ್ ಅಧಿಕಾರಿಗಳು ತೆರೆದಿದ್ದಾರೆನ್ನಲಾದ ನಕಲಿ ಖಾತೆಗಳಿಗೆ ಸಂಬಂಧಿಸಿದ ದಾಖಲೆ, ಬ್ಯಾಂಕ್ ನೀಡಿದ ಸಾಲದ ವಿವರ, ವಸೂಲಾಗದ ಸಾಲದ ದಾಖಲೆ, ಬ್ಯಾಂಕ್‌ನ ಕಂಪ್ಯೂಟರ್ ಡೇಟಾ ಜಪ್ತಿ ಮಾಡಲಾಗಿದೆ.

      ಬೆಂಗಳೂರು ನಗರದಲ್ಲಿಯೇ ಶ್ರೀ ಗುರುರಾಘವೇಂದ್ರ ಸಹಕಾರಿ ಬ್ಯಾಂಕ್ 12 ಶಾಖೆಗಳನ್ನು ಹೊಂದಿದೆ. ಆಕರ್ಷಕ ಬಡ್ಡಿ ದರ ನೀಡುವ ಘೋಷಣೆಯನ್ನು ಬ್ಯಾಂಕ್ ಮಾಡಿತ್ತು. ಆದ್ದರಿಂದ ಗ್ರಾಹಕರು ಸುಮಾರು 2,400 ಕೋಟಿ ಠೇವಣಿ ಇಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ.

      ಬ್ಯಾಂಕ್ ಸುಮಾರು 1,700 ಕೋಟಿ ಸಾಲ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಆರ್‌ಬಿಐ ನಿಯಮಗಳನ್ನು ಪಾಲನೆ ಮಾಡಿಲ್ಲ ಎಂಬ ಆರೋಪವೂ ಇದ್ದು. ಬ್ಯಾಂಕ್ ಅವ್ಯವಹಾರದ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿಯೂ ಪ್ರಕರಣ ದಾಖಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+