ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರಿ ಕಚೇರಿಯಲ್ಲಿ ಹಣ ಕೇಳಿದ್ರೆ ಹುಷಾರ್‌: ಎಸಿಬಿಯಿಂದ ಸಭೆ

By Nayana
|
Google Oneindia Kannada News

ಬೆಂಗಳೂರು, ಜು.17: ಸರ್ಕಾರಿ ಕಚೇರಿಗಳಲ್ಲಿ ಕೆಸಲ ಮಾಡಿಕೊಡಲು ಹಣ ಕೇಳಿದರೆ ನಮಗೆ ತಿಳಿಸಿ ನಾವು ಕಾನೂನು ರೀತಿಯ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಹೇಳಿದೆ.

ಮೊದಲ ಬಾರಿಗೆ ಎಸಿಬಿ ನಗರ ಮೂರು ಕಡೆಗಳಲ್ಲಿ ಸಾರ್ವಜನಿಕ ಸಭೆ ಏರ್ಪಡಿಸಿದೆ, ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ಲಂಚಕ್ಕಾಗಿ ಪೀಡಿಸುವ ಕುರಿತು ದೂರು ಸ್ವೀಕರಿಸಲು ಎಸಿಬಿ ಈ ಬಹಿರಂಗ ಸಭೆಯನ್ನು ಆಯೋಜಿಸಿದೆ.

ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಎಸಿಬಿಗೆ ಸಿಕ್ಕಿ ಬಿದ್ದ 7 ಅಧಿಕಾರಿಗಳುಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಎಸಿಬಿಗೆ ಸಿಕ್ಕಿ ಬಿದ್ದ 7 ಅಧಿಕಾರಿಗಳು

ಜು.18ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ನಡುವೆ ಎರಡು ತಾಸುಗಳ ಕಾಲ ಸ್ವತಃ ಡಿವೈಎಸ್‌ಪಿ ದರ್ಜೆಯ ಅಧಿಕಾರಿಗಳು ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿ, ಬಿಡಿಎ ಕೇಂದ್ರ ಕಚೇರಿ ಹಾಗೂ ಕಂದಾಯ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಸಭೆ ನಡೆಯಲಿದೆ.

ACB will conduct open hearing from public on corruption

ಒಬ್ಬರು ಡಿವೈಎಸ್‌ಪಿ ಮತ್ತು ಒಬ್ಬರು ಇನ್‌ಸ್ಪೆಕ್ಟರ್‌ ಸೇರಿ ತಲಾ ಇಬ್ಬರಂತೆ ಭ್ರಷ್ಟಾಚಾರದ ಕುರಿತು ದೂರು ಸ್ವೀಕಾರದ ಪೋಸ್ಟರ್‌ಗಳನ್ನು ಹಾಕಿಕೊಂಡು ಕಚೇರಿಗಳಲ್ಲಿ ಕುಳಿತುಕೊಳ್ಳಲಿದ್ದಾರೆ. ಕಚೇರಿಗಳಲ್ಲಿನ ಭ್ರಷ್ಟಾಚಾರದ ಕುರಿತು ಸಾರ್ವಜನಿಕರು ಮುಕ್ತವಾಗಿ ದೂರು ಸಲ್ಲಿಸಬಹುದಾಗಿದೆ.

English summary
In a first of its kind that Anti Corruption Bureau will conduct open meeting to hear complaints about corruption in government offices at three different places in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X