ನೆಲಮಂಗಲ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಭೀಕರ ಅಪಘಾತ, ಪ್ರಾಣಬಿಟ್ಟ ಐವರು ಯುವಕರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅತಿವೇಗದಲ್ಲಿ ಚಲಿಸುತ್ತಿದ್ದ ಇಂಡಿಕಾ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ನಂತರ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತವು ರಾತ್ರಿ ಸುಮಾರು 12 ಗಂಟೆ ವೇಳೆಗೆ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಜಿಂದಾಲ್‌ ಫ್ಲೈಓವರ್ ಬಳಿ ನಡೆದಿದೆ.

ಮೃತರನ್ನು ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಮತ್ತು ಧನುಷ್ (20) ಎಂದು ಗುರುತಿಸಲಾಗಿದೆ. ಇವರು ಎಲ್ಲರೂ ದೊಡ್ಡಬಳ್ಳಾಪುರ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಇಂಡಿಕಾ ಕಾರು ತುಮಕೂರಿನಿಂದ ಬೆಂಗಳೂರಿಗೆ ಕಡೆಗೆ ಚಲಿಸುತ್ತಿತ್ತು. ಈ ವೇಳೆ ಚಾಲಕ ನಿಯಂತ್ರಣ ಕಳೆದುಕೊಂಡು ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಕಾರು ವಿರುದ್ಧ ದಿಕ್ಕಿಗೆ ಸಾಗಿ, ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.

Nelamangala

ಅಪಘಾತದ ತೀವ್ರತೆಯಿಂದ ಕಾರಿನ ಮುಂಭಾಗ ಸಂಪೂರ್ಣ ಜಜ್ಜಿ ಹೋಗಿದ್ದು, ವಾಹನದ ಅವಶೇಷಗಳು ರಸ್ತೆ ಮೇಲೆ ಚದುರಿದವು. ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಬಸ್‌ನ ಮುಂಭಾಗಕ್ಕೂ ಹಾನಿಯಾಗಿದೆ.

ಬಸ್‌ನಲ್ಲಿದ್ದವರು ಅಪಾಯದಿಂದ ಪಾರು

ಆದರೆ ಬಸ್‌ನಲ್ಲಿದ್ದ 43 ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಮಾಹಿತಿ ತಿಳಿದ ಕೂಡಲೇ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಅಪಘಾತ ನಡೆದ ಪ್ರದೇಶವು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅತಿವೇಗ, ಚಾಲಕನ ಅಲಕ್ಷ್ಯ, ಅಥವಾ ರಾತ್ರಿ ವೇಳೆ ದೃಶ್ಯಮಾನತೆಯ ಕೊರತೆ ಅಪಘಾತಕ್ಕೆ ಕಾರಣವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಸಿಸಿಟಿವಿ ದೃಶ್ಯಗಳ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಅತಿವೇಗದ ಚಾಲನೆ ಸಾಮಾನ್ಯವಾಗಿದ್ದು, ವಿಶೇಷವಾಗಿ ಫ್ಲೈಓವರ್ ಪ್ರದೇಶಗಳಲ್ಲಿ ಎಚ್ಚರಿಕೆ ಅಗತ್ಯ. ಇತ್ತೀಚಿನ ದಿನಗಳಲ್ಲಿ ಈ ಮಾರ್ಗದಲ್ಲಿ ಸಂಭವಿಸುತ್ತಿರುವ ಅಪಘಾತಗಳು ಹೆಚ್ಚುತ್ತಿರುವುದರಿಂದ ಕಠಿಣ ಕ್ರಮಗಳ ಅಗತ್ಯವಿದೆ ಎಂಬ ಸಾರ್ವಜನಿಕ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಡೊಡ್ಡಬಳ್ಳಾಪುರದ ಮೃತ ಯುವಕರ ಕುಟುಂಬಗಳಲ್ಲಿ ಶೋಕ ಆವರಿಸಿದೆ. ಒಂದೇ ವಾಹನದಲ್ಲಿ ಹೊರಟಿದ್ದ ಐದು ಮಂದಿ ಸ್ನೇಹಿತರ ಸಾವಿನಿಂದ ಊರೇ ಮಂಕಾಗಿದೆ. ಸಂಬಂಧಿಕರು ಮತ್ತು ಸ್ನೇಹಿತರು ಆಸ್ಪತ್ರೆಗೆ ಹಾಗೂ ಅಪಘಾತ ಸ್ಥಳಕ್ಕೆ ಧಾವಿಸಿ ಕಂಬನಿ ಮಿಡಿದಿದ್ದು, ಪೊಲೀಸರು ಮುಂದಿನ ಕ್ರಮವಾಗಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಿದ್ದಾರೆ. ಅಪಘಾತದ ನಿಖರ ಕಾರಣ ತಿಳಿದುಬಂದ ಬಳಿಕ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+