ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅವಹೇಳನಕಾರಿ ಪೋಸ್ಟ್: ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸಿ ಎಂದ ಮೌಲಾನಾ

|
Google Oneindia Kannada News

ಬೆಂಗಳೂರು, ಆಗಸ್ಟ್.12: ಒಂದು ಸಮುದಾಯದ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಿ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಜಮಾಅತ್ ಪ್ರಧಾನ ಕಾರ್ಯದರ್ಶಿ ಮೌಲಾನಾ ಶಾಫಿ ಸಾದಿ ಆಗ್ರಹಿಸಿದ್ದಾರೆ.

Recommended Video

Akhanda Srinivas Murthy ಘಟನೆ ನಂತರ ಹೇಳಿದ್ದೇನು | Oneindia Kannada

"ಜಗತ್ತಿಗೆ ಮಾನವೀಯತೆ ಮತ್ತು ಸುಸಂಸ್ಕೃತಿಯ ಸಂದೇಶ ನೀಡಿದ ಪೈಗಂಬರ್ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮ್ ಜಾಗತಿಕ ಮುಸಲ್ಮಾನರ ಹೃದಯ ಸಿಮ್ಹಾಸನದ ರಾಜಕುಮಾರ. ಅವರನ್ನು ನಿಂದನೆ ಮಾಡಿದ ಕಿಡಿಗೇಡಿಗೆ ಗರಿಷ್ಠ ಶಿಕ್ಷೆಯಾಗಲಿ" ಎಂದು ಮೌಲಾನಾ ಶಾಫಿ ಸಾದಿ ಟ್ವೀಟ್ ಮಾಡಿದ್ದಾರೆ.

ಒಂದು ಸಮುದಾಯದ ವಿರುದ್ಧ ಪೋಸ್ಟ್: ಆರೋಪಿ ನವೀನ್ ಬಂಧನಒಂದು ಸಮುದಾಯದ ವಿರುದ್ಧ ಪೋಸ್ಟ್: ಆರೋಪಿ ನವೀನ್ ಬಂಧನ

"ಜೊತೆಗೆ ಕಾನೂನನ್ನು ಕೈಗೆತ್ತಿಕೊಂಡು ಪೋಲೀಸರ ವಿರುಧ್ಧ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುವುದು ಪ್ರವಾದಿಯ ಹಿಂಬಾಲಕರಾದ ನಮ್ಮ ಶೈಲಿಯಲ್ಲ. ಎಲ್ಲರೂ ಶಾಂತಿ ಕಾಪಾಡಬೇಕು. ಕಾನೂನಾತ್ಮಕ ಹೋರಾಟದಲ್ಲಿ ನಂಬಿಕೆಯುಳ್ಳವರಾಗಬೇಕು" ಎಂದು ಸಲಹೆ ನೀಡಿದ್ದಾರೆ.

 Accused Should Be Punished Who Derogatory Post Against One Community

ಶಾಸಕರ ಅಳಿಯನನ್ನು ಬಂಧಿಸಿದ ಪೊಲೀಸರು:

ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರ ಅಳಿಯ ನವೀನ್ ತಮ್ಮ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಬಗ್ಗೆ ಆರೋಪಿಸಲಾಗಿದೆ. ಈ ಸಂಬಂಧ ಆರೋಪಿಯನ್ನು ಈಗಾಗಲೇ ಕಾಡುಗೊಂಡನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಮೊಬೈಲ್ ಕಳೆದು ಹೋಗಿರುವ ಬಗ್ಗೆ ಆರೋಪಿ ಹೇಳಿಕೆ:

ಮಂಗಳವಾರ ಸಂಜೆ 6 ಗಂಟೆ ವೇಳೆಗೆ ಫೇಸ್ ಬುಕ್ ನಲ್ಲಿ ಒಂದು ಸಮುದಾಯದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಆದರೆ ಫೇಸ್ ಬುಕ್ ನಲ್ಲಿ ಹಾಕಲಾದ ಅವಹೇಳನಕಾರಿ ಪೋಸ್ಟ್ ತಮ್ಮದಲ್ಲ ಎಂದು ಕೆಜಿ ಹಳ್ಳಿ ಪೊಲೀಸರ ವಶದಲ್ಲಿರುವ ನವೀನ್ ವಿಚಾರಣೆ ವೇಳೆ ಹೇಳಿದ್ದಾರೆ. ಮಂಗಳವಾರ ಸಂಜೆ 4 ಗಂಟೆ ಹೊತ್ತಿಗೆ ಮೊಬೈಲ್ ಕಳೆದಿದ್ದು, ಅದಾಗಿ ಎರಡು ಗಂಟೆಗೆ ತಮ್ಮ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಲಾಗಿದೆ ಎಂದು ಪೊಲೀಸರ ಎದುರು ನವೀನ್ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

English summary
Accused Should Be Punished Who Derogatory Post Against One Community. Moulana Shafi Saadi Tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X