ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ ಕಠಿಣ ಶಿಕ್ಷೆ ಖಚಿತ: ಸಚಿವ ಕೆ. ಸುಧಾಕರ್

|
Google Oneindia Kannada News

ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನ ಸುಂಕದಕಟ್ಟೆ ಬಳಿ ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥ ಯುವತಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ 5 ಲಕ್ಷ ರೂಪಾಯಿಗಳ ವೈಯಕ್ತಿಕ ಧನ ಸಹಾಯ ನೀಡಿದ್ದಾರೆ. ಇದೇ ವೇಳೆ ಅಮಾನುಷ ಕೃತ್ಯವೆಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆ ಕೊಡಿಸುವ ಭರವಸೆಯನ್ನು ನೀಡಿದ್ದಾರೆ.

ಸೇಂಟ್ ಜಾನ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ಥೆಯನ್ನು ಭೇಟಿ ಮಾಡಿ, ನಂತರ ಮಾತನಾಡಿದ ಸಚಿವ ಕೆ. ಸುಧಾಕರ್, ಆ್ಯಸಿಡ್ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಕುಟುಂಬಸ್ಥರು ಮಾನಸಿಕ ಧೈರ್ಯ ತಂದುಕೊಳ್ಳಬೇಕು. ಸರ್ಕಾರ ಸಂತ್ರಸ್ಥೆಯ ಜೊತೆ ಇರಲಿದೆ. ಎಲ್ಲಾ ರೀತಿಯ ಚಿಕಿತ್ಸೆಗಳನ್ನು ಸರ್ಕಾರ ನೀಡಲಿದೆ ಎಂದು ಹೇಳಿದರು.

ಆಸಿಡ್ ದಾಳಿ ಪ್ರಕರಣ: ಪೊಲೀಸರ ಮುಂದೆ ಯುವತಿ ನೀಡಿದ ಹೇಳಿಕೆ ಏನು?ಆಸಿಡ್ ದಾಳಿ ಪ್ರಕರಣ: ಪೊಲೀಸರ ಮುಂದೆ ಯುವತಿ ನೀಡಿದ ಹೇಳಿಕೆ ಏನು?

ಸಂತ್ರಸ್ಥೆಯ ಜೊತೆ ಸರ್ಕಾರ, ಆರೋಗ್ಯ ಇಲಾಖೆ ಇರಲಿದ್ದು, ಆ್ಯಸಿಡ್ ದಾಳಿಗೆ ಒಳಗಾದ ಯುವತಿಯ ಪೋಷಕರ ನೋವು ಸರ್ಕಾರಕ್ಕೆ ಅರ್ಥವಾಗುತ್ತದೆ. ಘಟನೆಯ ವಿಷಯ ತಿಳಿದು ಅತೀವ ದುಃಖವಾಗಿದೆ. ಇದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ. ಮಹಾ ಕ್ರೌರ್ಯವನ್ನು ಒಬ್ಬ ವ್ಯಕ್ತಿ ಹೇಗೆ ಮಾಡುತ್ತಾನೆ ಅನ್ನುವುದು ಅರಗಿಸಿಕೊಳ್ಳಲು ಸಾಧ್ಯವಿಲ್ಲವೆಂದರು.

Acid Attack Culprit Wont be Spared Says Health Minister K Sudhakar

ತಪ್ಪಿತಸ್ಥನ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಿದೆ. ಫಾಸ್ಟ್ ಟ್ರ್ಯಾಕ್ ಕೋರ್ಟ್ ಮೂಲಕ ಈ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ಆದಷ್ಟು ಶೀಘ್ರದಲ್ಲಿ ತಪ್ಪಿತಸ್ಥರನ್ನು ಶಿಕ್ಷೆಗೊಳಪಡಿಸುವ ಮೂಲಕ ಸಮಾಜ ಘಾತುಕರಿಗೆ ಎಚ್ಚರಿಕೆಯ ಸಂದೇಶ ನೀಡುವ ಅಗತ್ಯವಿದೆ ಎಂದು ತಿಳಿಸಿದರು.

'ಸೆಂಟ್ ಜಾನ್ ಆಸ್ಪತ್ರೆಯ ಜೊತೆ ಬೆಂಗಳೂರು ಮೆಡಿಕಲ್ ಕಾಲೇಜು ಕೂಡ ಯುವತಿಯ ಶಸ್ತ್ರ ಚಿಕಿತ್ಸೆಗೆ ನೆರವು ನೀಡಲಿದೆ. ಸಂತ್ರಸ್ತ ಯುವತಿಗೆ ಶೇ.35ರಷ್ಟು ಸುಟ್ಟ ಗಾಯಗಳಾಗಿದ್ದು, ಪ್ರಸ್ತುತ ಐಸಿಯುನಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಯುವತಿಗೆ ಅಗತ್ಯವಿರುವ ಚರ್ಮ ಕಸಿ ಸೇರಿದಂತೆ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ನಾನು ವೈಯಕ್ತಿಕವಾಗಿ 5 ಲಕ್ಷ ರೂ. ಸಹಾಯಧನ ನೀಡಲು ನಿರ್ಧರಿಸಿದ್ದೇನೆ ಎಂದು ಸಚಿವ ಸುಧಾಕರ್ ಘೋಷಿಸಿದರು.

Acid Attack Culprit Wont be Spared Says Health Minister K Sudhakar

ಯುವತಿಯ ಚಿಕಿತ್ಸೆ ಅಷ್ಟೇ ಅಲ್ಲದೆ ಆಕೆಯ ಮುಂದಿನ ಭವಿಷ್ಯಕ್ಕೆ ನೆರವಾಗಲು ಉದ್ಯೋಗ ಸೇರಿದಂತೆ ಎಲ್ಲ ರೀತಿಯ ಪುನರ್ವಸತಿ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ರೀತಿಯ ಅಮಾನವೀಯ ದುಷ್ಕೃತ್ಯಗಳು ಮರುಕಳಿಸದಂತೆ ವಿಕೃತ ಮನಸ್ಸುಗಳಿಗೆ ಕಡಿವಾಣ ಹಾಕಿ, ಯುವತಿಯರಿಗೆ ಸುರಕ್ಷಿತ ಸಮಾಜ ನಿರ್ಮಿಸುವತ್ತ ಇಡೀ ಸಮಾಜ ಕಾರ್ಯೋನ್ಮುಖವಾಗಬೇಕಿದೆ ಎಂದು ಹೇಳಿದರು.

English summary
Health Minister Dr K Sudhakar has offered Rs.5 Lakh to the 24 year old girl who was attacked with acid on late Thursday night in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X