Breaking; ಆಸಿಡ್‌ ದಾಳಿ ಆರೋಪಿಗಾಗಿ ಲುಕ್‌ಔಟ್ ನೋಟಿಸ್ ಜಾರಿ

ಬೆಂಗಳೂರು, ಮೇ 01; ಆಸಿಡ್ ದಾಳಿ ಆರೋಪಿಗಾಗಿ ಬೆಂಗಳೂರು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ನಾಗೇಶ್ ಇನ್ನೂ ಪತ್ತೆಯಾಗದ ಹಿನ್ನಲೆಯಲ್ಲಿ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಆಸಿಡ್ ದಾಳಿಯ ಕುರಿತು ತನಿಖೆ ಕೈಗೊಂಡಿದ್ದಾರೆ. ಭಾನುವಾರ ಎಲ್ಲಾ ರಾಜ್ಯಗಳಿಗೆ ಕಳಿಸಲು ಎಲ್ಲಾ ಭಾಷೆಗಳಲ್ಲಿ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿದೆ.

ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಎಲ್ಲಾ ಕಡೆ ಅಂಟಿಸಲು ಆರೋಪಿ ವಿವರ, ಗುರುತು ಸೇರಿದಂತೆ ಮಾಹಿತಿ ಇರುವ ಲುಕ್‌ಔಟ್ ನೋಟಿಸ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ಬೇರೆ ರಾಜ್ಯಗಳಲ್ಲಿಯೂ ಆರೋಪಿಗಾಗಿ ಹುಡುಕಲು ಸಹಕಾರಿಯಾಗಲಿದೆ.

Acid Attack In Bengaluru Police Issued Lookout Notice For Accused

ಮಂಗಳವಾರ ಬೆಳಗ್ಗೆ ಯುವತಿ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ಆರೋಪಿ ನಾಗೇಶ್ ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ್ದ. ಯುವತಿಗೆ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯುವತಿಯನ್ನು ವಿವಾಹವಾಗುವುದಾಗಿ ಆರೋಪಿ ನಾಗೇಶ್ ಒತ್ತಾಯಿಸುತ್ತಿದ್ದ. ಆದರೆ ಆಕೆ ನಿರಾಕರಿಸಿದ್ದರಿಂದ ಆಕೆಯ ಮೇಲೆ ಆಸಿಡ್ ದಾಳಿ ನಡೆಸಿದ್ದ. ಯುವತಿ ಕುತ್ತಿಗೆ, ಭುಜಕ್ಕೆಗಾಯವಾಗಿದೆ.

ಆರೋಪಿ ನಾಗೇಶ್ ಎಂಬಿಎ ಪದವೀಧರ. ಸಹೋದರನ ಉದ್ಯಮವನ್ನು ನೋಡಿಕೊಳ್ಳುತ್ತಿದ್ದ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿ ಕುಟುಂಬದವರು, ಸ್ನೇಹಿತರ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಆತ ಪತ್ತೆಯಾಗಿಲ್ಲ.

ಸರ್ಕಾರದಿಂದ ಚಿಕಿತ್ಸಾ ವೆಚ್ಚ; ಆಸಿಡ್ ದಾಳಿಗೆ ಒಳಗಾದ ಯುವತಿಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಸಂತ್ರಸ್ಥ ಯುವತಿಯ ಆರೋಗ್ಯವನ್ನು ಸಚಿವ ಡಾ. ಕೆ ಸುಧಾಕರ್ ವಿಚಾರಿಸಿದರು ಮತ್ತು 5 ಲಕ್ಷ ರೂಪಾಯಿಗಳ ವೈಯಕ್ತಿಕ ಧನ ಸಹಾಯ ನೀಡಿದರು. ಆಸಿಡ್ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಕುಟುಂಬಸ್ಥರು ಮಾನಸಿಕ ಧೈರ್ಯ ತಂದುಕೊಳ್ಳಬೇಕು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+