Breaking; ಬೆಂಗಳೂರಿನಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ

ಬೆಂಗಳೂರು, ಏಪ್ರಿಲ್ 28; ಬೆಂಗಳೂರು ನಗರದಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ಆರೋಪಿಯನ್ನು ಹಿಡಿಯಲು ಪೊಲೀಸರು ತಂಡವನ್ನು ರಚನೆ ಮಾಡಿದ್ದಾರೆ.

ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜಯ್‌ ಎಂ. ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದು, " ಆರೋಪಿಯನ್ನು ಬಂಧಿಸಲು ತಂಡವನ್ನು ರಚನೆ ಮಾಡಲಾಗಿದೆ" ಎಂದು ಹೇಳಿದ್ದಾರೆ.

Acid Attack On Woman At Bengaluru Kamakshipalya Police Station Limits

ಆಸಿಡ್‌ ದಾಳಿ ನಡೆಸಿದ ಆರೋಪಿಯನ್ನು ನಾಗೇಶ್ ಎಂದು ಗುರುತಿಸಲಾಗಿದೆ. ಯುವತಿ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ದಾಳಿ ನಡೆದಿದ್ದು, ಕತ್ತು, ಭುಜದ ಭಾಗಕ್ಕೆ ಗಾಯಗಳಾಗಿವೆ.

ರಾಜ್ಯದಲ್ಲಿ ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತ ಮಹಿಳೆಗೆ ಮೊದಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುರಕ್ಷಾ ಯೋಜನೆಯಡಿ ಪರಿಹಾರ ನೀಡಲಾಗುತ್ತದೆ. ದಾಳಿ ನಡೆದ ಸಂದರ್ಭದಲ್ಲಿ ಚಿಕಿತ್ಸೆಗೆ ಮೊದಲು ಅರ್ಧ ಪರಿಹಾರ ಧನ ನೀಡಲಾಗುತ್ತದೆ. ಬಳಿಕ ಉಳಿದ ಹಣ ನೀಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+