ಎಸಿಪಿ ವೆಂಕಟೇಶ್ ಪ್ರಸನ್ನಗೆ ಜೀವ ಬೆದರಿಕೆ: ಆಂಬಿಡೆಂಟ್ ಕೇಸ್ ಎಫೆಕ್ಟ್

ಬೆಂಗಳೂರು, ಡಿಸೆಂಬರ್ 6: ಆಂಬಿಡೆಂಟ್ ಕಂಪನಿ 950 ಕೋಟಿ ಚಿಟ್ ಫಂಡ್ ಹಗರಣದ ತನಿಖೆ ನಡೆಸುತ್ತಿದ್ದ ಎಸಿಪಿ ವೆಂಕಟೇಶ್ ಪ್ರಸನ್ನಗೆ ಜೀವಬೆದರಿಕೆ ಕರೆ ಬಂದಿದೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ.

ಎಸಿಪಿ ವೆಂಕಟೇಶ್ ಪ್ರಸನ್ನ ಅವರು ಉದ್ಯಮಿ ವಿಜಯ್ ತಾತಾ ವಿರುದ್ಧ ಕಾಟನ್‌ಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಿಸಿಬಿ ಎಸಿಪಿಯಾಗಿದ್ದ ವೆಂಕಟೇಶ್ ಪ್ರಸನ್ನ ಈ ಹಿಂದೆ ಆಂಬಿಡೆಂಟ್ ಪ್ರಕರಣದ ತನಿಖೆ ನಡೆಸುತ್ತಿದ್ದರು. ಪ್ರಕರಣದಲ್ಲಿ ಉದ್ಯಮಿ ವಿಜಯ್ ಭಾಗಿಯಾಗಿರುವ ಅನುಮಾನದ ಮೇರೆಗೆ ಕರೆ ಮಾಡಿ ಕೂಡಲೇ ಸಿಸಿಬಿ ಕಚೇರಿಗೆ ಬರುವಂತೆ ಸೂಚಿಸಿದ್ದರು.

ACP Venkatesh Prasanna files complaint against businessman

ವಿಚಾರಣೆಗೆ ಹಾಜರಾಗುವಂತೆ ಅಧಿಕೃತವಾಗಿ ನೋಟಿಸ್ ಜಾರಿ ಮಾಡುವಂತೆ ತಿಳಿಸಿದ್ದರು. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಾಮಕಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಸೂರವಾಣಿ ಕರೆಯಲ್ಲಿ ತಮಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ವೆಂಕಟೇಶ್ ಪ್ರಸನ್ನ ಕಾಟನ್‌ ಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ವಿಚಾರವನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾಟನ್ ಪೇಟೆ ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+