ಮೈಸೂರು ವಕೀಲರ ಸಹಕಾರ ಸೊಸೈಟಿ ಕ್ರಮಕ್ಕೆ ಹೈಕೋರ್ಟ್ ಕೆಂಡಾಮಂಡಲ
ಬೆಂಗಳೂರು, ಮಾರ್ಚ್ 17: ಸಾಮಾನ್ಯವಾಗಿ ಬಾಂಬ್ ಸ್ಫೋಟ, ಉಗ್ರಗಾಮಿ ಚಟುವಟಿಕೆ ಪ್ರಕರಣದಲ್ಲಿ ಆರೋಪಿ ಪರ ವಕಾಲತು ವಹಿಸದಂತೆ ವಕೀಲರ ಸಂಘಗಳು ತೀರ್ಮಾನ ತೆಗೆದುಕೊಳ್ಳುತ್ತವೆ. ಈ ಹಿಂದೆ ಅನೇಕ ಪ್ರಕರಣಗಳಲ್ಲಿ ಎಷ್ಟೋ ಆರೋಪಿಗಳಿಗೆ ವಕೀಲರೇ ಪ್ರತಿನಿಧಿಸದ ಪ್ರಕರಣಗಳು ಇವೆ.
"ಸ್ವತಂತ್ರ್ಯ ಕಾಶ್ಮೀರ " ಕೂಗು ಸಂಬಂಧ ಹೋರಾಟದಲ್ಲಿ ಮೈಸೂರು ವಿಶ್ವ ವಿದ್ಯಾಲಯದಲ್ಲಿ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿ ನಳಿನಿ ಬಾಲಕುಮಾರ್ ಪರ ವಕಲಾತು ಹಾಕದಂತೆ ಮೈಸೂರು ವಕೀಲರ ವಿವಿದೋದ್ದೇಶ ಸಹಕಾರ ಸೊಸೈಟಿ ಸುತ್ತೋಲೆ ಹೊರಡಿಸಿತ್ತು. ಸೊಸೈಟಿಯ ಈ ನಿರ್ಧಾರವನ್ನು "ಅನ್ ಪ್ರೊಫೆಷನಲ್ " ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ" ಫ್ರೀ ಕಾಶ್ಮೀರ್ " ಘೋಷವಾಕ್ಯದಡಿ ಕಳೆದ ವರ್ಷ ವಿದ್ಯಾರ್ಥಿಗಳು ಮೈಸೂರು ವಿಶ್ವ ವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು. ಹೋರಾಟ ಪ್ರತಿನಿಧಿಸಿದ್ದ ನಳಿನಿ ಬಾಲಕುಮಾರ್ ವಿರುದ್ಧ ದೇಶದ್ರೋಹ ಆರೋಪ ಹೊರಿಸಿತ್ತು. ನಳಿನಿ ಬಾಲಕುಮಾರ್ ಅವರ ಪರ ವಕಾಲತು ಹಾಕದಂತೆ ಮೈಸೂರು ವಕೀಲರ ಸಂಘ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ನಳಿನಿ ಪರ ಯಾವ ವಕೀಲರು ವಕಾಲತು ಹಾಕಿರಲಿಲ್ಲ. ವಕೀಲರ ಸಂಘದ ಈ ಸುತ್ತೋಲೆಯನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು.

ಪ್ರಕರಣವನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ನೇತೃತ್ವದ ವಿಭಾಗೀಯ ಪೀಠ, ಒಬ್ಬ ಆರೋಪಿಗೆ ವಕಾಲತು ಹಾಕದಂತೆ ವಕೀಲರ ಸಂಘ ಸುತ್ತೋಲೆ ಹೊರಡಿಸಿರುವುದು ಅನ್ ಪ್ರೊಫೆಷನಲ್ ಅಲ್ಲದೇ ಮತ್ತೇನು ? ಈ ರೀತೀಯ ಆದೇಶ ಹೊರಡಿಸಿದ ಮೈಸೂರು ವಕೀಲರ ಸಂಘದ ವಿರುದ್ಧ ಕರ್ನಾಟಕ ಬಾರ್ ಕೌನ್ಸಿಲ್ ಯಾಕೆ ಕ್ರಮ ಜರುಗಿಸಬಾರದು ಎಂದು ಕಿಡಿಕಾರಿದೆ.
ವಕೀಲಿಕೆ ಭಾಗವಾಗಿ ಇಂತಹ ವೃತ್ತಿದ್ರೋಹ ಆದೇಶ ಮಾಡುವುದು ಸರಿಯೇ ? ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ದೇಶದ್ರೋಹ ಆರೋಪ ಹೊತ್ತ ಆರೋಪಿಯನ್ನು ಪ್ರತಿನಿಧಿಸುವುದು ವಕೀಲಿಕೆ ವೃತ್ತಿಧರ್ಮ. ಈ ಸುತ್ತೋಲೆ ಹೊರಡಿಸಿರುವುದು ವಕೀಲರು ಅಲ್ಲವೇ ? ಇಂತಹ ವಕೀಲರ ವಿರುದ್ಧ ಕರ್ನಾಟಕ ರಾಜ್ಯ ಬಾರ್ ಕೌಲ್ಸಿಲ್ ಕ್ರಮ ಜರುಗಿಸಬೇಕು. ಇವು ವಕೀಲರ ಸಮುದಾಯದ ಸೊಸೈಟಿಗಳೇ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಮೈಸೂರು ನಗರ ವಕೀಲರ ಸಹಕಾರ ಸಂಘಕ್ಕೆ ನೋಟಿಸ್ ನೀಡಲಾಗಿದೆಯೇ? ಯಾಕೆ ಅವರಿಗೆ ನೋಟಿಸ್ ನೀಡಬಾರದು ಎಂದು ನ್ಯಾಯಪೀಠ ಪ್ರಶ್ನೆ ಮಾಡಿತು.

Recommended Video
ನ್ಯಾಯಾಲಯದ ಆದೇಶದಂತೆ ನೋಟಿಸ್ ನೀಡಲಾಗುವುದು ಎಂದು ಬಾರ್ ಕೌನ್ಸಿಲ್ ನ್ಯಾಯಪೀಠಕ್ಕೆ ಹೇಳಿತು. ಇದೇ ವೇಳೆ ಮೈಸೂರು ವಕೀಲರ ಸಹಕಾರ ಸಂಘದಲ್ಲಿ ಅಂತಹ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂಬುದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ ಎಂದು ಮೈಸೂರು ಜಿಲ್ಲಾ ವಕೀಲರ ಅಸೋಸಿಯೇಷನ್ ನ್ಯಾಯಾಲಯಕ್ಕೆ ಸ್ಪಷ್ಟನೆ ನೀಡಿತು. ಇದಕ್ಕೂ ಮುನ್ನ ದೂರುದಾರ ಪರ ವಾದ ಮಂಡಿಸಿದ ವಕೀಲರಾದ ರಮೇಶ್ ನಾಯಕ್, ಒಬ್ಬ ಆರೋಪಿ ಪರ ವಕಾಲತು ಹಾಕದಂತೆ ಸುತ್ತೋಲೆ ಹೊರಡಿಸಿರುವ ಬಗ್ಗೆ ಕರ್ನಾಟಕ ಬಾರ್ ಕೌನ್ಸಿಲ್ ಮೌನವಾಗಿರುವದು ತುಂಬಾ ಅಪಾಯಕಾರಿ ಬೆಳವಣಿಗೆ ಎಂದು ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆಯನ್ನು ಏ. 20 ಕ್ಕೆ ಮುಂದೂಡಲಾಗಿದೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ











Click it and Unblock the Notifications