ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳೂರು ಟಾಪ್!

ಬೆಂಗಳೂರು, ಸೆಪ್ಟೆಂಬರ್ 14 : ಕರ್ನಾಟಕದಲ್ಲಿ ಅತಿ ಹೆಚ್ಚು ಕೋವಿಡ್ ಸೋಂಕಿತರು ಇರುವ ನಗರ ಬೆಂಗಳೂರು. ಬೆಂಗಳೂರು ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,70,662 ಏರಿಕೆಯಾಗಿದೆ. ದೇಶದಲ್ಲಿಯೇ ಅತಿ ಹೆಚ್ಚು ಸಕ್ರಿಯ ಸೋಂಕಿತರು ಇರುವ ನಗರ ಬೆಂಗಳೂರು ಆಗಿದೆ.

ಭಾನುವಾರದ ಮಾಹಿತಿಯಂತೆ ಬೆಂಗಳೂರು ನಗರದಲ್ಲಿ 3,479 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1,70,662ಕ್ಕೆ ಏರಿಕೆಯಾಗಿದೆ. ನಗರದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 41,093.

ದೇಶದ ಮಹಾನಗರಗಳಿಗೆ ಹೋಲಿಕೆ ಮಾಡಿದರೆ ಬೆಂಗಳೂರು ನಗರದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಮುಂಬೈನಲ್ಲಿ 30,316, ಚೆನ್ನೈನಲ್ಲಿ 10,396, ಲಕ್ನೋದಲ್ಲಿ 9,555 ಸಕ್ರಿಯ ಪ್ರಕರಣಗಳಿವೆ.

Active COVID Cases Bengaluru Top In The List

ದೇಶದದಲ್ಲಿ ದೆಹಲಿಯಲ್ಲಿ 28,862, ಕೇರಳದ ತಿರುವನಂತಪುರಂನಲ್ಲಿ 5,126, ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 4,160 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ದೇಶದ ಯಾವುದೇ ನಗರಕ್ಕೆ ಹೋಲಿಕೆ ಮಾಡಿದರೆ ಬೆಂಗಳೂರು ಸಕ್ರಿಯ ಪ್ರಕರಣದಲ್ಲಿ ಟಾಪ್‌ನಲ್ಲಿದೆ.

ಬೆಂಗಳೂರು ನಗರದಲ್ಲಿ ಇದುವರೆಗೂ 1,27,132 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,436 ಜನರು ಇದುವರೆಗೂ ನಗರದಲ್ಲಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೋವಿಡ್ ಸೋಂಕಿತರ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 4,59,445. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 99,203.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+