ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಲಾಕ್‌ಡೌನ್: ಈ ಚಟುವಟಿಕೆಗಳಿಗೆ ನಿಷೇಧ

|
Google Oneindia Kannada News

ಬೆಂಗಳೂರು, ಜುಲೈ 13: ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಘೋಷಿಸಲಾಗಿದ್ದು , ಈ ಚಟುವಟಿಕೆಗಳನ್ನು ನಿಷೇಧಿಸಿ ಮಾರ್ಗಸೂಚಿ ಹೊರಡಿಸಲಾಗಿದೆ.

Recommended Video

Rameshwaram - A Spiritual Journey To The Divine Site Of Tamil Nadu | Oneindia Kannada

-ಈಗಾಗಲೇ ವೇಳಾಪಟ್ಟಿ ನಿಗಧಿಯಾಗಿರುವ ವಿಮಾನ ಹಾಗೂ ರೈಲುಗಳು, ಲಾಕ್‌ಡೌನ್ ಅವಧಿಯಲ್ಲಿನ ಸಂಚಾರವನ್ನು ಮುಂದುವರೆಸಿದೆ. ವಿಮಾನ ಮತ್ತು ರೈಲು ಟಿಕೆಟ್‌ಗಳನ್ನು ವಿಮಾನ ಮತ್ತು ರೈಲುಗಳಲ್ಲಿ ಓಡಾಡುವ ಪ್ರಯಾಣಿಕರ ಪಾಸುಗಳೆಂದು ಪರಿಗಣಿಸಲಾಗುತ್ತದೆ.

ಬೆಂಗಳೂರು ಲಾಕ್ ಡೌನ್; ಅಂಗಡಿಗಳಿಗೆ ಮಾರ್ಗಸೂಚಿಗಳು

ಅಲ್ಲದೆ ಟ್ಯಾಕ್ಸಿ ಮತ್ತು ಆಟೋ ರಿಕ್ಷಾಗಳ ಮೂಲಕ ನಿಲ್ದಾಣಕ್ಕೆ ಪ್ರಯಾಣಿಸಲು ಅನುಮತಿಸಿದೆ. ಆದರೆ ಯಾವುದೇ ಹೊಸ ವಿಮಾನ ಮತ್ತು ರೈಲು ಸಂಚಾರಕ್ಕೆ ಅವಕಾಶವಿರುವುದಿಲ್ಲ.

Bengaluru Lockdown Guidelines For Different Activities

-ತುರ್ತು ಪರಿಸ್ಥಿತಿಗಾಗಿ ಬಾಡಿಗೆ ತೆಗೆದುಕೊಂಡಿರುವುದನ್ನು ಹೊರತುಪಡಿಸ, ಟ್ಯಾಕ್ಸಿಗಳು, ಮತ್ತು ಕ್ಯಾಬ್ ಚಾಲನಾ ಸಂಸ್ಥೆಗಳಿಗೆ ಅವಕಾಶವಿಲ್ಲ.

-ಶಾಲೆಗಳು, ಕಾಲೇಜುಗಳು ಶಿಕ್ಷಣ, ತರಬೇತಿ, ಕೋಚಿಂಗ್ ಮುಂತಾದ ಸಂಸ್ಥೆಗಳು ಮುಚ್ಚುವುದು, ಆನ್‌ಲೈನ್, ದೂರ ಶಿಕ್ಷಣ ಕಲಿಕೆಗೆ ಅವಕಾಶವನ್ನು ಮುಂದುವರೆಸಿ ಅವುಗಳನ್ನು ಪ್ರೋತ್ಸಾಹಿಸಬೇಕು. ಆದರೆ , ಈಗಾಗಲೇ ವೇಳಾಪಟ್ಟಿ ನಿಗಧಿಯಾದ ಪರೀಕ್ಷೆಗಳಿಗೆ ಕೊವಿಡ್ 19 ನಿರ್ವಹಣೆಗಾಗಿ ಇರುವ ರಾಷ್ಟ್ರೀಯ ನಿರ್ದೇಶನಗಳಿಗೆ ಒಳಪಟ್ಟು ಅವಕಾಶ ನೀಡುವುದು.

-ಆರೋಗ್ಯ, ಪೊಲೀಸ್, ಸರ್ಕಾರಿ ಸೇವಾ ಸಿಬ್ಬಂದಿ, ಆರೋಗ್ಯ, ಕಾರ್ಯಕರ್ತರು, ಪ್ರವಾಸಿಗರು ಸೇರಿದಂತೆ ಉದ್ದೇಶಿಸಿದ ಮತ್ತು ಕ್ವಾರಂಟೈನ್ ಸೌಲಭ್ಯಗಳಿಗೆ ಉದ್ದೇಶಿಸಿ ಉಳಿದಂತೆ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರೆ ಆತಿಥ್ಯ ಸೇವೆಗಳ ನಿರ್ಬಂಧ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳನ್ನು ಆಹಾರ ತಯಾರಿಕೆಗೆ, ಸರಬರಾಜು ಉದ್ದೇಶಕ್ಕಾಗಿ ಮಾತ್ರ ತೆರೆಯಲು ಅನುಮತಿಸಿದೆ.

-ಎಲ್ಲಾ ಸಿನೆಮಾ ಮಂದಿರಗಳು, ಶಾಪಿಂಗ್ ಮಾಲ್‌ಗಳು, ಜಿಮ್ನಾಶಿಯಂಗಳು, ಕ್ರೀಡಾ ಸಂಕೀರ್ಣಗಳು, ಸ್ಟೇಡಿಯಂಗಳು, ಈಜುಕೊಳಗಳು, ಮನರಂಜನಾ ಉದ್ಯಾನಗಳು, ರಂಗ ಮಂದಿರಗಳು, ಬಾರ್‌ಗಳು ಹಾಗೂ ಆಡಿಟೋರಿಯಂಗಳು, ಸಭಾಭವನಗಳು ಅಮತ್ತು ಅದೇ ಬಗೆಯ ಹೊಸ ಸ್ಥಳಗಳಲ್ಲಿ ನಿಷೇಧ.

-ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡಾ, ಮನರಂಜನಾ, ಶೈಕ್ಷಣಿಕ, ಸಾಂಸ್ಕ್ಋತಿಕ, ಧಾರ್ಮಿಕ ಸಮಾರಂಭಗಳು, ಇತರೆ ಸಭೆಗಳು ಹಾಗೂ ಬೃಹತ್ ಜನಸ್ತೋಮಗಳು, ಪೂಜಾ ಸ್ಥಳಗಳನ್ನು ಸಾರ್ವಜನಿಕರಿಗೆ ಮುಚ್ಚಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

English summary
Karnataka government issued guidelines for one week lock down in Bengaluru Urban and Rural district. Here are the guidelines for different activities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X