ನಟ- ಬಿಜೆಪಿ ಸಂಸದ ಜಗ್ಗೇಶ್ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ಬೆಂಗಳೂರು, ಸೆಪ್ಟಂಬರ್ 29: ನಟ ನವರಸ ನಾಯಕ ಹಾಗೂ ಬಿಜೆಪಿ ಸಂಸದ ಜಗೇಶ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರ ಅಭಿಮಾನಿಗಳಲ್ಲಿ ಆತಂಕ ಉಂಟಾಗಲು ಕಾರಣವಾಗಿದೆ ಎಂದು ತಿಳಿದು ಬಂದಿದೆ.
ನವರಸ ನಾಯಕ ಜಗ್ಗೇಶ್ ಅವರು ದಶಕಗಳಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ತಮ್ಮದೇ ಆದ ನಟನೆಯಿಂದ ಪ್ರೇಕ್ಷಕರನ್ನು, ಅಭಿಮಾನಿಗಳನ್ನು ರಂಜಿಸುತ್ತಾ ಬಂದಿರುವ ಅವರು, ಸಾಮಾನ್ಯ ಅನಾರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆ ಸೇರಿದ್ದಾರೆ.

ಈ ಕುರಿತು ಸ್ವತಃ ಸಂಸದ ನವರಸ ನಾಯಕ ಜಗ್ಗೇಶ್ ಅವರು ಶುಕ್ರವಾರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ''ಎಲ್4ಎಲ್ಎಸ್ ಕಂಪ್ರೆಷನ್ ಆಗಿ ನಡೆದಾಡಲು ಕಷ್ಟವಾಗಿದ್ದರಿಂದ, ಯಾವ ಕಾರ್ಯದಲ್ಲು ಭಾಗಿಯಾಗಲು ಸಾಧ್ಯವಾಗಲಿಲ್ಲಾ ಕಳೆದ ಎರಡು ವಾರದಿಂದ pysiyo ಚಿಕಿತ್ಸೆ ಪಡೆಯುವುದರ ಜೊತೆಗೆ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಡಾ ಸಲಹೆ ನೀಡಿದ್ದಾರೆ' ಎಂದು ಅವರು ತಿಳಿಸಿದ್ದಾರೆ.
ಈ ಮೂಲಕ ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದ ಸ್ವತಃ ಅವರೇ ತಿಳಿಸಿದ್ದಾರೆ. ಅಲ್ಲದೇ ಕಾಲಿನ ನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಫೋಟೊಗಳನ್ನು ಅವರು ಸಾಮಾಜಿಕ ಜಾತಲಾಣ Xನಲ್ಲಿ ಪೋಸ್ಟ್ ಮಾಡಿದ್ದಾರೆ.
ನಟ ಜಗ್ಗೇಶ್ ಅವರು ಕರ್ನಾಟಕ ಬಿಜೆಪಿ ವಕ್ತಾರರಾಗಿ ಸೇವೆ ಸಲ್ಲಿಸಿದ್ದರು. ಲೋಕಸಭಾ ಚುನಾವನೆಯಲ್ಲಿ ಸೋತು ಕಳೆದ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಪ್ರಸ್ತುತದಲ್ಲೂ ಅವರು ಚಿತ್ರರಂಗ ಮತ್ತು ರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ.












Click it and Unblock the Notifications