• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನ

|
Google Oneindia Kannada News

ಬೆಂಗಳೂರು, ಜೂನ್ 7: ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

   Chiranjeevi Sarja | ಸ್ಯಾಡಲ್ ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ | Oneindia Kannada

   ತಿಲಕ್ ನಗರದ ಸಾಗರ್ ಅಪೋಲೊ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಸರ್ಜಾಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದರು.

   ಚಿರಂಜೀವಿ ಸರ್ಜಾ ವಾಯುಪುತ್ರ ಮೂಲಕ ಚಿತ್ರರಂಗವನ್ನು ಪ್ರವೇಶಿದ್ದರು. ದಂಡಂ ದಶಗುಣಂ, ವರದ ನಾಯಕ, ಸಿಂಗ ಸೇರಿ 25ಕ್ಕೂ ಹೆಚ್ಚು ಕನ್ನಡ ಸಿನೆಮಾಗಳಲ್ಲಿ ನಟಿಸಿದ್ದಾರೆ.

   ಚಿರಂಜೀವಿ ಸರ್ಜಾ ನಟಿ ಮೇಘನಾ ರಾಜ್​ ಅವರ ಜೊತೆ 2017ರಲ್ಲಿ ನಿಶ್ವಿತಾರ್ಥ ಮಾಡಿಕೊಂಡಿದ್ದರು. 2018ರಲ್ಲಿ ವಿವಾಹವಾಗಿದ್ದರು. ಇದಾದ ಎರಡೇ ವರ್ಷದಲ್ಲಿ ಅವರು ಮೃತಪಟ್ಟಿದ್ದಾರೆ.

   ಅವರ ಸಾವಿಗೆ ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದ್ದಾರೆ. 2009ರಲ್ಲಿ ತೆರೆಕಂಡ ವಾಯುಪುತ್ರ ಸಿನಿಮಾ ಮೂಲಕ ಚಿರಂಜೀವಿ ಸರ್ಜಾ ಬಣ್ಣದ ಬದುಕಿಗೆ ಕಾಲಿಟ್ಟಿದ್ದರು.

   ತಿಲಕ್ ನಗರದ ಅಪೊಲೊ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದೆ. ಕೆಲವೇ ಕ್ಷಣಗಳಲ್ಲಿ ಪೊಲೀಸ್ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

   ಚಿರಂಜೀವಿ ಸರ್ಜಾ ವಾಯುಪುತ್ರ ಮೂಲಕ ಚಿತ್ರರಂಗವನ್ನು ಪ್ರವೇಶಿದ್ದರು. ದಂಡಂ ದಶಗುಣಂ, ವರದ ನಾಯಕ, ಸಿಂಗ ಸೇರಿ 25ಕ್ಕೂ ಹೆಚ್ಚು ಕನ್ನಡ ಸಿನೆಮಾಗಳಲ್ಲಿ ನಟಿಸಿದ್ದಾರೆ.

   English summary
   Kannada Actor Chiranjeevi Sarja Died due to severe Heart Attack in Sagar apollo hospital Bengaluru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X